ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಎನ್ನಲಾದ ಬಹು ಮಹತ್ವಾಕಾಂಕ್ಷೆಯ ‘ನಾಲೆಡ್ಜ್, ಹೆಲ್ತ್ ಇನ್ನೋವೇಶನ್ ಮತ್ತು ರೀಸರ್ಚ್ ಸಿಟಿ (ಕೆಎಚ್‌ಐಆರ್ ಸಿಟಿ) ಯೋಜನೆಯ ಮೊದಲನೇ ಹಂತಕ್ಕೆ ಆ.23ರ ಬೆಳಗ್ಗೆ 11ಕ್ಕೆ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
‘ನಗರದಿಂದ 60 ಕಿ.ಮೀ. ದೂರದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಒಟ್ಟು 2,000 ಎಕರೆಯಲ್ಲಿ ಕೆಎಚ್‌ಐಆರ್ ಸಿಟಿ ಅಭಿವೃದ್ಧಿಪಡಿಸಲಾಗುವುದು. ಮೊದಲ ಹಂತದಲ್ಲಿ ಒಂದು ಸಾವಿರ ಎಕರೆ ಜಾಗದಲ್ಲಿ ಯೋಜನೆ ತಲೆ ಎತ್ತಲಿದೆ. ಒಟ್ಟು ಎರಡೂ ಹಂತಗಳಲ್ಲಿ 40 ಸಾವಿರ ಕೋಟಿ ರೂ.ಗಳಿಗಿಂತಲೂ ಹೆಚ್ಚು ಹೂಡಿಕೆ ಆಗಲಿದ್ದು, 50 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮಾಹಿತಿ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಉದ್ಯಮ ವಲಯದ ಪ್ರಮುಖರು ಕೂಡ ಭಾಗವಹಿಸಲಿದ್ದಾರೆ ಎಂದರು.
ಪ್ರಪಂಚದ ಬೇರೆಬೇರೆ ಭಾಗಗಳಲ್ಲಿಯೂ ವಿಶೇಷ ನಗರಗಳ ಪರಿಕಲ್ಪನೆ ಇದೆ. ಕೇಂದ್ರ ಸರ್ಕಾರ ಕೂಡ ಇದೇ ಮಾದರಿಯನ್ನು ಅನುಸರಿಸುತ್ತದೆ. ಆದರೆ, ಕೆಎಚ್‌ಐಆರ್ ಸಿಟಿಯಲ್ಲಿ ನಾಲ್ಕು ವಲಯಗಳಲ್ಲಿನ ಜಾಗತಿಕ ಮಟ್ಟದ ಅತ್ಯುನ್ನತ ಕಂಪನಿಗಳು ನೆಲೆಯೂರಲಿವೆ. ಇದಕ್ಕೆ ಬೇಕಾದ ಜಮೀನು, ವಿದ್ಯುತ್, ನೀರು, ರಸ್ತೆ ಮತ್ತಿತರ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆ. ಇದರಿಂದ ಆರ್ಥಿಕ ವರಮಾನ ಹೆಚ್ಚಳದ ಜೊತೆಗೆ ರಫ್ತು ವಹಿವಾಟು ಕೂಡ ವೃದ್ಧಿಸಲಿದೆ. ಇದರಿಂದಾಗಿ ಬೆಂಗಳೂರು ನಗರವು ಇನ್ನೊಂದು ಸ್ತರ ಮೇಲೇರಲಿದೆ ಎಂದು ಹೇಳಿದ್ದಾರೆ.
ಜಾಗತಿಕವಾಗಿ ಉತ್ಕೃಷ್ಟ ಮಟ್ಟದ ಉದ್ದಿಮೆಗಳು, ವಿಶ್ವವಿದ್ಯಾಲಯಗಳು, ಮೆಡಿಕಲ್ ಟೂರಿಸಂ, ಸಂಶೋಧನೆ, ಚಿಕಿತ್ಸೆ, ನಾವೀನ್ಯತೆ ಇವುಗಳಿಗೆ ಉದ್ದೇಶಿತ ಸಿಟಿಯಲ್ಲಿ ಆದ್ಯತೆ ನೀಡಲಾಗುವುದು. ಜೊತೆಗೆ ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್ಡ್ ಮೆಟೀರಿಯಲ್ಸ್, ನವೋದ್ಯಮಗಳು, ವೈಮಾಂತರಿಕ್ಷ, ರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ, ಜೀವವಿಜ್ಞಾನಗಳು ಮತ್ತು ಆಧುನಿಕ ತಂತ್ರಜ್ಞಾನ ವಲಯಗಳ ಕಂಪನಿಗಳು ಕೂಡ ಇಲ್ಲಿ ಬರಲಿವೆ.
ಮುಖ್ಯವಾಗಿ ಯೋಜನೆಯಿಂದ ಅಪಾರ ಸಂಖ್ಯೆಯ ಪರೋಕ್ಷ ಉದ್ಯೋಗಗಳು ಕೂಡ ಸೃಷ್ಟಿಯಾಗಲಿವೆ. ಇದರಿಂದ ಸ್ಥಳೀಯವಾಗಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದಕ್ಕಾಗಿ ಸರ್ಕಾರ ಸ್ಪಷ್ಟ ರೂಪುರೇಷೆಯನ್ನು ಈಗಾಗಲೇ ಆಖೈರುಗೊಳಿಸಿದೆ ಎಂದು ತಿಳಿಸಿದ್ದಾರೆ.
ಕೆಎಚ್‌ಐಆರ್ ಸಿಟಿಯಲ್ಲಿ ಆರಂಭವಾಗಲಿರುವ ಉದ್ದಿಮೆಗಳಿಗೆ ಸಕಲ ರೀತಿಯ ಸೌಲಭ್ಯಗಳನ್ನೂ ಒದಗಿಸಲಾಗುವುದು. ರಾಜ್ಯದಲ್ಲೇ ನೆಲೆ ಹೊಂದಿರುವ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಉದ್ದಿಮೆಗಳು ಮತ್ತು ಸಂಶೋಧನಾ ಸಂಸ್ಥೆಗಳಿಗೂ ಇಲ್ಲಿ ಅವಕಾಶವಿರಲಿದೆ. ಈ ಮೂಲಕ ನಮ್ಮಲ್ಲಿನ ಸಂಸ್ಥೆಗಳು ಕೂಡ ಜಾಗತಿಕ ಗುಣಮಟ್ಟದ ಎತ್ತರಕ್ಕೆ ಬೆಳೆಯಲು ಅವಕಾಶ ಒದಗಿಸಲಾಗುವುದು. ಒಟ್ಟಿನಲ್ಲಿ ನಾವು ಜಾಗತಿಕ ಮಟ್ಟದಲ್ಲಿ ಪ್ರಮುಖ ಹೂಡಿಕೆ ತಾಣವಾಗಿ ಹೊರಹೊಮ್ಮಬೇಕು ಎನ್ನುವುದು ಇದರ ಹಿಂದಿನ ಆಶಯಗಳಲ್ಲಿ ಒಂದಾಗಿದೆ ಎಂದು ಪಾಟೀಲ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
