
ಬೆಂಗಳೂರು: ಬಂಡೀಪುರ ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಯಲ್ಲಿರುವ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ, ಜೆಸಿಬಿ ಬಳಕೆ ಮಾಡಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ ೭ ದಿನಗಳಲ್ಲಿ ನಟ ಗಣೇಶ್ ಪ್ರತಿಕ್ರಿಯೆ ಸಲ್ಲಿಸಬೇಕು. ಇದಾದ ನಾಲ್ಕು ವಾರಗಳಲ್ಲಿ ಸಮಿತಿಯು ನಿರ್ಧಾರ ಕೈಗೊಳ್ಳಬೇಕು ಎಂದು ಹೈಕೋರ್ಟ್ ಸೋಮವಾರ ಆದೇಶಿಸಿದೆ.ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಅನುಮತಿಸಿ, ಈಗ ಅದಕ್ಕೆ ನಿರ್ಬಂಧ ವಿಧಿಸಿರುವ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರ ನೋಟಿಸ್ ವಜಾ ಮಾಡುವಂತೆ ಕೋರಿ ನಟ ಗಣೇಶ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.ಕಾರ್ಯದರ್ಶಿ ಅವರು ಸಲ್ಲಿಸಲು ಸೂಚಿಸಿರುವ ದಾಖಲೆಗಳನ್ನು ನಟ ಗಣೇಶ್ ಅವರು ಏಳು ದಿನಗಳಲ್ಲಿ ಸಲ್ಲಿಸಬೇಕು. ಇದಾದ ನಾಲ್ಕು ವಾರಗಳಲ್ಲಿ ಸಂಬಂಧಿತ ಅಧಿಕಾರಿ ಕ್ರಮಕೈಗೊಳ್ಳಬೇಕು ಎಂದು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿ, ಅರ್ಜಿ ಇತ್ಯರ್ಥಪಡಿಸಿದೆ.ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ.ಕೆ ನಂದಕುಮಾರ್ ಅವರು ಅರ್ಜಿದಾರರ ವಾದ ಆಲಿಸದೇ ಆಕ್ಷೇಪಾರ್ಹ ಆದೇಶ ಮಾಡಲಾಗಿದೆ. ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸ್ಥಳ ಪರಿಶೀಲನೆ ನಡೆಸಿಲ್ಲ. ಅರ್ಜಿದಾರರು ಕಟ್ಟಡ ನಿರ್ಮಾಣವನ್ನೇ ಇನ್ನೂ ಆರಂಭಿಸಿಲ್ಲ. ಅದಾಗ್ಯೂ, ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಮುಂದಾಗುವ ಮೂಲಕ ನಿಮಯ ಉಲ್ಲಂಘಿಸಲಾಗಿದೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ತಾತ್ಕಾಲಿಕ ಮನೆ ನಿರ್ಮಾಣಕ್ಕೆ ನೀಡಿರುವ ಅನುಮತಿಯ ಭಾಗವಾಗಿ ಭೂಮಿಯನ್ನು ಸಮತಟ್ಟುಗೊಳಿಸಲು ಜೆಸಿಬಿ ಬಳಕೆ ಮಾಡಲಾಗಿದೆ. ೧೦ ವರ್ಷದ ಹಳೆಯ ಗಿಡಗಳನ್ನು ನೆಡಲು ಮತ್ತು ಅಪರೂಪದ ಸಸಿಗಳನ್ನು ನೆಡಲು ನೆಲವನ್ನು ಅಗೆದು ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಪಾರ ಪ್ರಮಾಣದ ಹಣ ವಿನಿಯೋಗಿಸಿ ಸಾಮಗ್ರಿಗಳನ್ನು ಖರೀದಿಸಿ ಸಂಗ್ರಹಿಸಿದ್ದು, ಆಳುಗಳು ಹಾಗೂ ಯಂತ್ರಗಳನ್ನು ಸ್ಥಳದಲ್ಲಿ ಬೀಡುಬಿಟ್ಟಿವೆ. ಈ ಸಂದರ್ಭದಲ್ಲಿ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿದರೆ ಅರ್ಜಿದಾರ ಗಣೇಶ್ ಅವರಿಗೆ ಸರಿಪಡಿಸಲಾಗದ ಹಾನಿಯಾಗುತ್ತದೆ. ಹೀಗಾಗಿ, ಅರ್ಜಿ ವಜಾ ಮಾಡಬೇಕು ಎಂದು ಕೋರಿದ್ದರು.
ಏನಿದು ಪ್ರಕರಣ?ನಟ ಗಣೇಶ್ ಅವರು, ಕಳೆದ ವರ್ಷ ಬಂಡೀಪುರ ಅರಣ್ಯದ ಕುಂದುಕುರೆ ವ್ಯಾಪ್ತಿಯ ಜಕ್ಕಳಿ ಗ್ರಾಮದಲ್ಲಿ ೧.೨೪ ಎಕರೆ ಜಮೀನು ಖರೀದಿಸಿದ್ದು, ಅಲ್ಲಿ ಫಾರ್ಮ ಹೌಸ್ ನಿರ್ಮಿಸುವ ಸಂಬಂಧ ಅನುಮತಿ ಕೋರಿ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. ಸಮಿತಿಯು ಷರತ್ತುಗಳನ್ನು ವಿಧಿಸಿ, ತಾತ್ಕಾಲಿಕ ವಾಸದ ಮನೆ ಕಟ್ಟಡ ನಿರ್ಮಿಸಲು ನಿಯಮಾನುಸಾರ ನಡೆದುಕೊಳ್ಳುವ ಕುರಿತು ಮುಚ್ಚಳಿಕೆ ಬರೆಸಿಕೊಂಡು ಅನುಮತಿಸಲಾಗಿತ್ತು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 8 =
Remember me
