ಬೀದರ್:ಮದುವೆ ಆಮಂತ್ರಣ ಪತ್ರ ನೀಡಲು ಹೋಗಿದ್ದ ವಧು ಮತ್ತು ಆಕೆಯ ಸಹೋದರಿ ಇಬ್ಬರೂ ಸಾವಿಗೀಡಾಗಿರುವ ಪ್ರಕರಣವೊಂದು ನಡೆದಿದೆ. ಬೀದರ್ ಜಿಲ್ಲೆಯಲ್ಲಿ ನಡೆದ ಅಪಘಾತವೊಂದರಲ್ಲಿ ಇವರಿಬ್ಬರು ಸಾವಿಗೀಡಾಗಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೌಠಾ ಗ್ರಾಮದ ಬಳಿ ದ್ವಿಚಕ್ರವಾಹನಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ದ್ವಿಚಕ್ರವಾಹನದಲ್ಲಿದ್ದ ವಧು ಶ್ರದ್ಧಾ ಜುಲ್ಫೆ (22), ಈಕೆಯ ಸಹೋದರಿ ಸಂಸ್ಕೃತಿ ಜುಲ್ಫೆ (19) ಸಾವಿಗೀಡಾವರು. ಇವರ ತಂದೆ ದಿಲೀಪ್ ಜುಲ್ಫೆ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!
ಶ್ರದ್ಧಾ ಮದುವೆಯ ಆಮಂತ್ರಣ ಪತ್ರಿಕೆ ನೀಡಲು ತೆರಳಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ದಿಲೀಪ್ ಭಾಲ್ಕಿ ತಾಲೂಕಿನ ನಿಟ್ಟೂರು ಗ್ರಾಮದವರು ಎಂದು ತಿಳಿದು ಬಂದಿದೆ. ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − seven =
Remember me
