ಉಡುಪಿ: ರಾಜ್ಯದಲ್ಲಿ (ಜೂ.1) ನಾಳೆಯಿಂದ ದೇವಾಲದಲ್ಲಿ ಪೂಜೆ ಆರಂಭವಾಗುತ್ತದೆ ಎಂದು ನಿರೀಕ್ಷಿಸಿದ್ದ ಭಕ್ತರಿಗೆ ನಿರಾಸೆಯಾಗಿದೆ.
ಸೋಮವಾರದಿಂದ ದೇವಾಲಯಗಳ ಬಾಗಿಲು ತೆರೆದು ಪೂಜೆ ಆರಂಭಿಸಲು ಅನುಮತಿ ಕೋರಿ ರಾಜ್ಯ ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿರುವ ಕೇಂದ್ರ ಸರ್ಕಾರ ಜೂ.1ರ ಬದಲಿಗೆ ಜೂ. 8ರಿಂದ ಬಾಗಿಲು ತೆರೆಯುವಂತೆ ಸೂಚನೆ ನೀಡಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ವಾರದ ಹಿಂದೆ ಕೇಂದ್ರ ಸರ್ಕಾರಕ್ಕೆ ಜೂ.1 ರಿಂದ ದೇವಾಲಯಗಳ ಬಾಗಿಲು ತೆರೆದು ಪೂಜೆ ಸಲ್ಲಿಸಲು ಅನುಮತಿ ಕೋರಿ ಪತ್ರ ಬರೆದಿತ್ತು.
ಇದನ್ನೂ ಓದಿಇಂಥವರೂ ಇದ್ದಾರೆ: ಲಾಕ್​ಡೌನ್​ ಸಂತ್ರಸ್ತರ ನೆರವಿಗಾಗಿ ಚಿನ್ನ ಮಾರಿದ ದಂಪತಿ!
ಖಾಸಗಿ ದೇವಾಲಯಗಳು ಬಾಗಿಲು ತೆರೆಯುವುದು ಆಡಳಿತ ಮಂಡಳಿಗೆ ಬಿಟ್ಟಿದ್ದೇವೆ. ಎಲ್ಲ ರೀತಿಯ ಸುರಕ್ಷತೆ ಕ್ರಮ ಅನುಸರಿಸಿ ದೇವಾಲಯಗಳ ಬಾಗಿಲು ತೆರೆಯುವಂತೆ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದರು.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧ ರಿಸುವುದು ಕಡ್ಡಾಯ. ಅಲ್ಲದೆ ದೇವಾಲದ ಇಡೀ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಗರ್ಭಗುಡಿಗೆ ಕೇವಲ ಅರ್ಚರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ದೇವಾಲಯಗಳಲ್ಲಿ ಗಂಧ, ಕುಂಕುಮ ನೀಡಲಾಗುವುದು. ತೀರ್ಥ ಹಾಗೂ ಪ್ರಸಾದ ನೀಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಅಧಿಕಾರಿಗಳ ಜತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.
ಲಾಕ್​ಡೌನ್​ನಿಂದ ಮುಜರಾಯಿ ದೇವಾಲಯಗಳಿಗೆ ನಷ್ಟವಾಗಿದೆ. ಶೇ.30 ಆದಾಯ ನಷ್ಟವಾಗಿದೆ. ಅಲ್ಲದೆ ಏಪ್ರಿಲ್​ ಹಾಗೂ ಮೇ ತಿಂಗಳ ಪ್ರವಾಸೋದ್ಯಮಕ್ಕೆ ಹಿನ್ನಡೆಯಾಯಿತು ಎಂದು ಸಚಿವರು ಹೇಳಿದರು.
ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
