ರಾಯಚೂರು:ಕೇಂದ್ರದ ಬಿಜೆಪಿ ಸರ್ಕಾರ ಆರ್​ಎಸ್​ಎಸ್ ಅಜೆಂಡಾವನ್ನು ಜಾರಿಗೆ ತರಲು ನಿರಂತರ ಪ್ರಯತ್ನಿಸುತ್ತಿದೆ. ದೇಶವನ್ನು ಹಿಂದು ರಾಷ್ಟ್ರ ಮಾಡುವ ಅವರ ಕನಸು ಎಂದಿಗೂ ನನಸಾಗದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಖಾಸಗಿ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಎ ಸೇರಿ ಇನ್ನಾವುದೇ ಕಾಯ್ದೆಯಿಂದ ದೇಶವನ್ನು ಹಿಂದು ರಾಷ್ಟ್ರವನ್ನಾಗಿ ಮಾಡಲು ಸಾಧ್ಯವಿಲ್ಲ ಎಂದರು. ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಗೆಲುವಿಗೆ ಸಿಎಎದಂಥ ಜನ ವಿರೋಧಿ ಕಾನೂನು ಕಾರಣವಾಗಿಲ್ಲ ಎಂಬುದನ್ನು ಬಿಜೆಪಿ ಅರಿಯಬೇಕು. ಕೇಜ್ರಿವಾಲ್​ರ ಅಭಿವೃದ್ಧಿ ಕಾರ್ಯಕ್ರಮಗಳು ಇದಕ್ಕೆ ಕಾರಣ. ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಬಿಜೆಪಿ ಕೆಲವು ಸ್ಥಾನಗಳನ್ನು ಗೆದ್ದರೂ ಶೇಕಡಾವಾರು ಮತಗಳಿಕೆ ಕಡಿಮೆಯಾಗಿದೆ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ಕಷ್ಟವಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅವರೇ ಹೇಳಿದ್ದಾರೆ. ಅವರ ಪಕ್ಷದವರೇ ಭ್ರಷ್ಟಾಚಾರದ ಬಗ್ಗೆ ಹೈಕಮಾಂಡ್​ಗೆ ದೂರು ಕೊಟ್ಟಿದ್ದಾರೆ. ರಾಜಕೀಯ ವಾಸ್ತವಾಂಶ ಕುರಿತು ಪುಸ್ತಕವನ್ನು ಒಂದೂವರೆ ತಿಂಗಳಲ್ಲಿ ಬಿಡುಗಡೆ ಮಾಡುತ್ತೇನೆ. ನಾನು ರಾಜ್ಯಸಭೆಗೆ ಹೋಗುವ ಸಾಧ್ಯತೆಯಿಲ್ಲ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + nineteen =
Remember me
