ಬೆಂಗಳೂರು:ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಯುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಶುಕ್ರವಾರ ಹೇಳಿದ್ದಾರೆ.
ಇದನ್ನೂ ಓದಿ:ಬಾಲಾಪರಾಧಿಗಳ ಮನಪರಿವರ್ತನೆಗೆ ಆದ್ಯತೆ: ನ್ಯಾ. ಸೋಮನಾಥ
ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ಮಂದಗತಿಯಲ್ಲಿ ಸಾಗುತ್ತಿರುವ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಸಚಿವರು, “ಬೆಂಗಳೂರು-ವಿಜಯಪುರ ನಡುವಿನ 660 ಕಿ.ಮೀ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆ ಸಮಯ ಹಿಡಿಸುತ್ತಿದೆ. ಬೆಂಗಳೂರಿನಿಂದ ಹೊರಡುವ ರೈಲುಗಳು ಈಗ ಹುಬ್ಬಳ್ಳಿ ನಿಲ್ದಾಣಕ್ಕೆ ಹೋಗುತ್ತಿದ್ದು, ಅಲ್ಲಿ ಎಂಜಿನ್ ಬದಲಿಸಲು 45 ನಿಮಿಷ ನಿಲ್ಲುತ್ತವೆ. ಬಳಿಕ, ಗದಗದಲ್ಲೂ ಹೀಗೆಯೇ ಸಮಯ ವ್ಯರ್ಥವಾಗುತ್ತಿದೆ. ಆದ್ದರಿಂದ, ರೈಲುಗಳು ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಹೋಗುವ ಬದಲು ಹುಬ್ಬಳ್ಳಿ (ದಕ್ಷಿಣ) ನಿಲ್ದಾಣ ಬೈಪಾಸ್ ಮತ್ತು ಗದಗ ಬೈಪಾಸ್ ಮೂಲಕ ಸಾಗುವ ವ್ಯವಸ್ಥೆ ಮಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು” ಎಂದರು.
ಇದನ್ನೂ ಓದಿ:ಸುಮಾರು 13 ಲಕ್ಷ ರೂ. ಕಾಮಗಾರಿಗೆ ಶಾಸಕರಿಂದ ಚಾಲನೆ
“ಈಗಾಗಲೇ ಬೆಂಗಳೂರು-ಹುಬ್ಬಳ್ಳಿ-ಬಾಗಲಕೋಟೆ ನಡುವೆ ಜೋಡಿ ಹಳಿ ಇದೆ. ಬಾಗಲಕೋಟೆ-ವಿಜಯಪುರ ಮಧ್ಯೆ ಆಲಮಟ್ಟಿಯವರೆಗೂ ದ್ವಿಪಥ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದ್ದು, ಈ ವರ್ಷದ ಸೆಪ್ಟೆಂಬರ್ ಹೊತ್ತಿಗೆ ಮುಗಿಯಲಿದೆ. ಇಲ್ಲಿ ಆಲಮಟ್ಟಿ-ವಂಡಾಳ್ ಮಧ್ಯೆ 9 ಕಿ.ಮೀ. ಮಾತ್ರ ಕಾಮಗಾರಿ ಬಾಕಿ ಉಳಿದಿದ್ದು, ಇಲ್ಲಿ ಸೇತುವೆ ಕಾಮಗಾರಿ ನಡೆಯಬೇಕಿದೆ. ಇದನ್ನು 2025ರ ಆಗಸ್ಟ್ ವೇಳೆಗೆ ಪೂರ್ಣಗೊಳಿಸಲಾಗುವುದು. ಜತೆಗೆ ಇನ್ನು ಎರಡು ತಿಂಗಳಲ್ಲಿ ಈ ಮಾರ್ಗದಲ್ಲಿ ಬಾಕಿ ಇರುವ ವಿದ್ಯುದೀಕರಣ ಕೂಡ ಮುಗಿಯಲಿದೆ” ಎಂದು ವಿವರಿಸಿದರು.
ಈ ಕ್ರಮಗಳ ಜೊತೆಗೆ ಬೆಂಗಳೂರಿನಿಂದ ವಿಜಯಪುರ, ಬಾಗಲಕೋಟೆಗಳಿಗೆ ವಿಶೇಷ ರೈಲುಗಳನ್ನು ಓಡಿಸಬೇಕಾದ ಅಗತ್ಯವಿದೆ. ಮಿಗಿಲಾಗಿ, ವಿದ್ಯುದೀಕರಣ ಕಾಮಗಾರಿ ಮುಗಿದರೆ ವಿಜಯಪುರ, ಬಾಗಲಕೋಟೆಗಳಿಗೆ `ವಂದೇ ಭಾರತ್’ ಎಕ್ಸಪ್ರೆಸ್ ರೈಲು ಸೇವೆ ಆರಂಭಿಸುವಂತೆ ರೈಲ್ವೆ ಮಂಡಳಿಯನ್ನು ಕೋರಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣ; ಆರ್ಥಿಕ ಹೊರೆ ಕಾರಣ; ಮೈಸೂರು ಸಂಗೀತ ವಿವಿ ತೆಕ್ಕೆಗೆ ಗಂಗೂಬಾಯಿ ಟ್ರಸ್ಟ್
ವೆಚ್ಚ ಹಂಚಿಕೆ ಯೋಜನೆಗಳಿಗೆ ಗಡುವು
ರಾಜ್ಯದಲ್ಲಿ ರೈಲ್ವೆಯೊಂದಿಗೆ ವೆಚ್ಚ ಹಂಚಿಕೆ ಆಧಾರದ ಮೇಲೆ 9 ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ. ಆದರೆ, ಇವು ಕಾಲಮಿತಿಯಲ್ಲಿ ಪೂರ್ಣಗೊಳ್ಳದೆ ಇರುವುದರಿಂದ ವೆಚ್ಚ ಮಿತಿ ಮೀರುತ್ತಿದೆ. ಆದ್ದರಿಂದ ಇವುಗಳ ವೆಚ್ಚ ಹೆಚ್ಚಾಗದಂತೆ ನೋಡಿಕೊಂಡು, ತ್ವರಿತ ಗತಿಯಲ್ಲಿ ಮುಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಹೇಳಿದರು.
ಈ ಪೈಕಿ ಮುನಿರಾಬಾದ್- ಮೆಹಬೂಬ್ ನಗರ ಯೋಜನೆಯನ್ನು 2026ರ ಮಾರ್ಚ್ ವೇಳೆಗೆ ತುಮಕೂರು- ರಾಯದುರ್ಗ ಯೋಜನೆಯನ್ನು 2027ರ ಡಿಸೆಂಬರ್ ಹೊತ್ತಿಗೆ, ಚಿಕ್ಕಮಗಳೂರು-ಬೇಲೂರು ಯೋಜನೆಯನ್ನು 2026ರ ಹೊತ್ತಿಗೆ, ಬಾಗಲಕೋಟೆ-ಕುಡಚಿ ಯೋಜನೆಯನ್ನು 2027ರ ವೇಳೆಗೆ ಮುಗಿಸಬೇಕು. ತುಮಕೂರು- ದಾವಣಗೆರೆ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿದೆ. ಇದರಲ್ಲಿ ರಾಜ್ಯವು ಒಂದು ಪಥದ ಅಭಿವೃದ್ಧಿಗೆ ಮಾತ್ರ ವೆಚ್ಚ ಭರಿಸುತ್ತಿದೆ. ಆದರೆ, ರೈಲ್ವೆ ಇಲಾಖೆಯು ಈಗಾಗಲೇ ಜೋಡಿ ಹಳಿ ಹಾಕಲು ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ. ಇದನ್ನು 2027ಕ್ಕೆ ಮುಗಿಸಬೇಕು. ಇದರಿಂದ ಬಾಗಲಕೋಟೆ ಮತ್ತು ವಿಜಯಪುರ ನಡುವಿನ ನೇರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅವರು ಸೂಚಿಸಿದರು.
ಇದನ್ನೂ ಓದಿ:ಮಹಾದೇವ ಬೆಟ್ಟಿಂಗ್​ ಪ್ರಕರಣ ಜತೆ 30ಕ್ಕೂ ಹೆಚ್ಚು ಕಂಪನಿಗಳ ಕನೆಕ್ಷನ್​: ಸ್ಮಾಲ್​ ಕ್ಯಾಪ್​ ಸ್ಟಾಕ್​ಗಳ ರಕ್ತಪಾತಕ್ಕೆ ಕಾರಣವಾದ ಈ ಹಗರಣವೇನು?
“ಗದಗ-ವಾಡಿ ಮಾರ್ಗದಲ್ಲಿ ಬರುವ ಹಳಕಟ್ಟೆ ಎಂಬಲ್ಲಿ ಭೂಸ್ವಾಧೀನದ ಸಮಸ್ಯೆ ಎದುರಾಗಿದೆ. ಆರ್ ಟಿಸಿಯಲ್ಲಿ ಒಬ್ಬರ ಹೆಸರು ಇದ್ದರೆ, ವಾಸ್ತವದಲ್ಲಿ ಆ ಜಾಗದಲ್ಲಿ ಬೇರೆಯವರಾರೋ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಇದನ್ನು ಶೀಘ್ರವೇ ಬಗೆಹರಿಸುವಂತೆ ಸೂಚಿಸಲಾಗಿದೆ” ಎಂದು ಹೇಳಿದರು.
ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್ ಮಂಜುಳಾ, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ, ನೈರುತ್ಯ ರೈಲ್ವೆಯ ಮುಖ್ಯ ಆಡಳಿತಾಧಿಕಾರಿ, ರಾಮಗೋಪಾಲ್, ರೈಲ್ವೆಯ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಮೂರ್ತಿ ರಾಜು, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಉಪಸ್ಥಿತರಿದ್ದರು.
ಬಿಸಿಯೂಟ ತುಂಬ ಅಗತ್ಯ, ದಯವಿಟ್ಟು ಅರ್ಧದಿನ ರಜೆ ಕೊಡ್ಬೇಡಿ: ಮನಕಲಕುವಂತಿದೆ ಈ ವಿದ್ಯಾರ್ಥಿ ಬರೆದ ಪತ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + six =
Remember me
