ಬೆಂಗಳೂರುರಾಜ್ಯಾದ್ಯಂತ ಸರ್ಕಾರಿ ಶಾಲೆಗಳ ಶೌಚಾಲಯ ಪರಿಸ್ಥಿತಿಗಳು ಬೆಳಕಿಗೆ ಬಂದ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಶೌಚಾಲಯ ಕಾಮಗಾರಿಗಳಿಗೆ ನೀಡಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರರ್ದು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೆಚ್ಚುವರಿ ಶೌಚಾಲಯ ನಿರ್ಮಾಣ ಕಾಮಗಾರಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನರೇಗಾ ಯೋಜನೆಗೆ ಸಂಬಂಧಿಸಿದ ಅನುದಾನವನ್ನು ಜಿಲ್ಲಾ ಉಪ ನಿರ್ದೇಶಕರು ಜಿಒಂ ಸಿಇಒ ಅವರಿಗೆ ಬಿಡುಗಡೆ ಮಾಡಬೇಕು. ಜಿಪಂ ಸಿಇಒ ಅವರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಗೆ ಕಾಳಮಿತಿಯೊಳಗೆ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ತಿಳಿಸಿದ್ದಾರೆ.
2023-24ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಶಿಕ್ಷಣ ಇಲಾಖೆಯ ಅನುದಾನದೊಂದಿಗೆ ಆಯಾ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಮಚಾಯತ್ ರಾಜ್ ಇಲಾಖೆಯ ಮಹಾತ್ಮಗಾಂಧಿ ನರೇಗಾ ಯೋಜನೆ ಅಡಿ ನಿಗದಿಯಾಗಿದ್ದ 30 ಕೋಟಿ ರೂ.ಗಳಲ್ಲಿ ಈಗಾಗಲೇ 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ಶೌಚಾಲಯ ಘಟಕ ಅನುಮೋದನೆಯಾಗಿರುವ ಹಾಗೂ ಕಾಮಗಾರಿ ಪ್ರಗತಿಯಲ್ಲಿರುವ ಜಿಲ್ಲೆಗಳ ಉಪ ನಿರ್ದೇಶಕರಿಗೆ ತಲಾ 50 ಲಕ್ಷ ರೂ.ಗಳಂತೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ, ಚಿತ್ರದುರ್ಗ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕೋಡಿ ಜಿಲ್ಲೆಗಳಲ್ಲಿ ಒಟ್ಟು 738 ಶಾಲೆಗಳಲ್ಲಿ 745 ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. 12.15 ಕೋಟಿ ರೂ. ನಿಗದಿಯಾಗಿದ್ದು, ಮೊದಲ ಹಂತದಲ್ಲಿ 8 ಕೋಟಿ ರೂ. ಮತ್ತು 2ನೇ ಹಂತದಲ್ಲಿ 2.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
