ಗುಂಡ್ಲುಪೇಟೆ:ಬಂಡೀಪುರ ಹುಲಿ‌ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ರೈಲ್ವೆ ಕಂಬಿಗಳ ಬ್ಯಾರಿಕೇಡ್ ಅಡಿಯಲ್ಲಿ ಸಿಲುಕಿದ್ದ ವಿಡಿಯೋ‌‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲೂಕಿನ ನಡಾಡಿ ಎಂಬ ಗ್ರಾಮದ ವಸ್ತಿಹಳ್ಳದ ಬಳಿ ವಾರದ ಹಿಂದೆ ಈ ಘಟನೆ ಸಂಭವಿಸಿದೆ. ಕಾಡಂಚಿನಲ್ಲಿರುವ ರೈಲ್ವೆ ಕಂಬಿಗಳ ಬ್ಯಾರಿಕೇಡ್ ಅಡಿಯಲ್ಲಿ ತೂರಿ ಹೋಗಲು ಸುಮಾರು‌ 40 ವರ್ಷದ ಆನೆ ಯತ್ನಿಸಿದೆ. ಈ ವೇಳೆ ಹೊಟ್ಟೆ ಭಾಗ ಬ್ಯಾರಿಕೇಡ್ ಕೆಳಭಾಗದಲ್ಲಿ ಸಿಲುಕಿದೆ. ಇದರಿಂದ ಬಿಡಿಸಿಕೊಳ್ಳಲಾಗದೆ ಗಂಟೆಗಟ್ಟಲೆ ಒದ್ದಾಡಿದೆ.ಇದನ್ನೂ ಓದಿರಿಕೋವಿಡ್​ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್​ಡೌನ್​ ಬೇಡ: ಪ್ರತಾಪ್​ಸಿಂಹ
ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಕಂಬಿಗಳನ್ನು ಸಡಿಲಿಸಿ ಆನೆಯನ್ನು ಬಂಧ ಮುಕ್ತಿಗೊಳಿಸಿದ್ದಾರೆ. ಆನೆ ಕಂಬಿ ನಡುವೆ ಸಿಲುಕಿರುವ ವೇಳೆ ಸ್ಥಳೀಯರು ತೆಗೆದ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
https://www.facebook.com/VVani4U/videos/575804999988913/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + five =
Remember me
