ಬೆಂಗಳೂರು:‘ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್‌ಡಿಐ) ಕಳೆದ ಎರಡು – ಮೂರು ವರ್ಷಗಳಿಂದ ಸತತವಾಗಿ ಇಳಿಮುಖವಾಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ-ಅಂಶಗಳೇ ದೇಶದಲ್ಲಿನ ಎಫ್‌ಡಿಐ ಒಳಹರಿವು ಕುಸಿದಿರುವುದರ ವಾಸ್ತವ ಚಿತ್ರಣ ನೀಡುತ್ತವೆ ಎಂದು ವಿವರಗಳನ್ನು ಹಂಚಿಕೊಂಡಿದ್ದಾರೆ.
ದೇಶದಲ್ಲಿ ಎಫ್‌ಡಿಐ ಇಳಿಕೆ ಆಗಲು ಕೇಂದ್ರ ಸರ್ಕಾರದ ದೂರದೃಷ್ಟಿ ಇಲ್ಲದ, ದೋಷಪೂರಿತ ನೀತಿಗಳೇ ಕಾರಣ. ಹಾಗೆಯೇ ಜಾಗತಿಕ ವಿದ್ಯಮಾನಗಳು ಕೂಡ ಸೇರಿರಬಹುದು ಎಂದು ತಿಳಿಸಿದ್ದಾರೆ.
ಹಣಕಾಸು ವರ್ಷ 2023ರಲ್ಲಿ 71 ಶತಕೋಟಿ ಡಾಲರ್‌ಗಳಷ್ಟಿದ್ದ ದೇಶಿ ಎಫ್‌ಡಿಐ, 2024 ರಲ್ಲಿ 70 ಶತಕೋಟಿ ಡಾಲರ್‌ಗೆ ಕುಸಿದಿದೆ. 2020-21ರಲ್ಲಿ 4.42 ಲಕ್ಷ ಕೋಟಿ ರೂ., 2021-22ರಲ್ಲಿ 4.37 ಲಕ್ಷ ಕೋಟಿ, 2022-23ರಲ್ಲಿ 3.67 ಲಕ್ಷ ಕೋಟಿ ಮತ್ತು 2023-24ರಲ್ಲಿ 3.47 ಲಕ್ಷ ಕೋಟಿ ರೂ.ಗೆ ಇಳಿದಿದೆ. ಕಳೆದ 4 ವರ್ಷಗಳಲ್ಲಿ ಎಫ್‌ಡಿಐ ನಿರಂತರವಾಗಿ ಹೀಗೆ ಕುಸಿಯುತ್ತಲೇ ಸಾಗಿರುವುದರತ್ತ ಬೆಳಕು ಚೆಲ್ಲಿದ್ದಾರೆ.
ದೇಶದಲ್ಲಿ ಹೂಡಿಕೆಯಾಗುವ ಎಫ್‌ಡಿಐನಲ್ಲಿ ಬಹುಪಾಲು ಈಕ್ವಿಟಿ ಸ್ವರೂಪದಲ್ಲಿ ಇರುತ್ತದೆ. ಹಿಂದಿನ ಮೂರು ಹಣಕಾಸು ವರ್ಷಗಳಲ್ಲಿ ಎಫ್‌ಡಿಐ ಈಕ್ವಿಟಿ ಹೂಡಿಕೆಯು ಕಳವಳಕಾರಿ ಮಟ್ಟದಲ್ಲಿ ಇಳಿಕೆಯಾಗಿದೆ. 2022-23ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಹೂಡಿಕೆಯಲ್ಲಿನ ಇಳಿಕೆಯು ಶೇ 3 ರಷ್ಟು ಮಾತ್ರ ದಾಖಲಾಗಿದೆ. ಆದರೆ ಅದಕ್ಕೂ ಮುಂಚಿನ 4 ಹಣಕಾಸು ವರ್ಷಗಳಲ್ಲಿನ ಇಳಿಕೆ ಪ್ರಮಾಣವು ಶೇ.25ಕ್ಕಿಂತಲೂ ಹೆಚ್ಚಿಗೆ ಇದೆ ಎಂದು ಹೇಳಿದ್ದಾರೆ.
ಎಫ್‌ಡಿಐ ಆಕರ್ಷಿಸುವಲ್ಲಿ ಮೊದಲ ಸ್ಥಾನದಲ್ಲಿ ಇದ್ದ ರಾಜ್ಯವು ಈಗ 3ನೇ ಸ್ಥಾನಕ್ಕೆ ಇಳಿಯಲು ಕೇಂದ್ರ ಸರ್ಕಾರದ ಧೋರಣೆ ಹಾಗೂ ಈ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿ ಇದ್ದ ಬಿಜೆಪಿ ಸರ್ಕಾರದ ಉದಾಸೀನ ನಿಲುವು ಮುಖ್ಯ ಕಾರಣಗಳಾಗಿವೆ ಎಂದು ಹೇಳಿದ್ದಾರೆ.
ಎ್ಡಿಐ ಆಕರ್ಷಿಸಲು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಾರ್ಯೋನ್ಮುಖವಾಗಿದೆ. ಬಹು ರಾಷ್ಟ್ರೀಯ ಕಂಪನಿಗಳ ಹೂಡಿಕೆಗೆ ಸೂಕ್ತ ಭೂಮಿಕೆ ಸಿದ್ಧಪಡಿಸುವಲ್ಲಿ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ಕೇಂದ್ರದಲ್ಲಿ ತನ್ನದೇ ಪಕ್ಷದ ಅಧಿಕಾರದಲ್ಲಿದ್ದರೂ (ಡಬಲ್ ಎಂಜಿನ್ ಸರ್ಕಾರ) ಎಫ್‌ಡಿಐ ಕುಸಿತ ತಡೆಗಟ್ಟಲು ವಿಲವಾಗಿದೆ. ಮಹಾರಾಷ್ಟ್ರ, ಗುಜರಾತ್ ರಾಜ್ಯಗಳತ್ತ ಹರಿಯುತ್ತಿದ್ದ ಎಫ್‌ಡಿಐ ಯನ್ನು ರಾಜ್ಯದತ್ತ ತಿರುಗುವಂತೆ ಮಾಡುವಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಯಾವುದೇ ರಚನಾತ್ಮಕ ಪ್ರಯತ್ನ ಮಾಡದಿರುವುದೇ ಇಂದಿನ ಪರಿಸ್ಥಿತಿಗೆ ಮುಖ್ಯ ಕಾರಣವಾಗಿದೆ ಎಂದು ಪಾಟೀಲ ಹೇಳಿದ್ದಾರೆ.
ಕರ್ನಾಟಕ ರಾಜ್ಯವು ವಿಶ್ವದಾದ್ಯಂತ ವಿವಿಧ ದೇಶಗಳ ಬಹುರಾಷ್ಟ್ರೀಯ ಕಂಪನಿಗಳಿಂದ ಬಂಡವಾಳ ಹೂಡಿಕೆಯನ್ನು ಆಯಸ್ಕಾಂತದಂತೆ ಸೆಳೆಯುತ್ತಿದೆ. ಆದರೆ ದೇಶದ ಆರ್ಥಿಕ ಪ್ರಗತಿಯ ಹಾದಿಯಲ್ಲಿನ ಅಡಚಣೆಗಳು, ಹೂಡಿಕೆದಾರರ ಬದಲಾದ ಒಲವು – ನಿಲುವು, ಜಾಗತಿಕ ವಿದ್ಯಮಾನಗಳ ಕಾರಣಕ್ಕೆ ರಾಜ್ಯದಲ್ಲಿಯೂ ಎಫ್‌ಡಿಐ ಒಳಹರಿವು ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
ದೇಶದಲ್ಲಿನ ಎಫ್‌ಡಿಐನ ಒಟ್ಟಾರೆ ಇಳಿಕೆ ಪ್ರವೃತ್ತಿ ಹಾಗೂ ರಾಜಕೀಯ ಕಾರಣಗಳ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರವು ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಎಫ್‌ಡಿಐ ಒಳಹರಿವು ಉತ್ತೇಜಿಸಲು ಹಲವಾರು ಬಗೆಗಳಲ್ಲಿ ಕಾರ್ಯಪ್ರವೃತ್ತವಾಗಿದೆ. ಕರ್ನಾಟಕವು 2023-24 ರ ಹಣಕಾಸು ವರ್ಷದಲ್ಲಿ ದೇಶಿ ಹಾಗೂ ವಿದೇಶಿ ಕಂಪನಿಗಳಿಂದ 1.13 ಲಕ್ಷ ಕೋಟಿ ರೂ. ಮೌಲ್ಯದ ಬಂಡವಾಳ ಹೂಡಿಕೆ ಆಕರ್ಷಿಸಿದೆ ಎಂದು ಸಚಿವ ಎಂ.ಪಿ.ಪಾಟೀಲ ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − four =
Remember me
