ಬೆಂಗಳೂರು:ಕಾಂಗ್ರೆಸ್​ನ​ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಜಾರಿಗೆ ಬಂದಿರುವ ಶಕ್ತಿ ಯೋಜನೆಗೆ ಈಗ ಧಾರ್ಮಿಕ ಶಕ್ತಿ ತುಂಬುವ ಕಾರ್ಯ ನಡೆಯುತ್ತಿದೆ. ಆ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಧರ್ಮಾಸ್ತ್ರವನ್ನು ಪ್ರಯೋಗಿಸಲಾರಂಭಿಸಿದೆ.
ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿರುವ ಶಕ್ತಿ ಯೋಜನೆಯನ್ನು ಸ್ತ್ರೀಯರು ಶಕ್ತಿ ಮೀರಿ ಬಳಸಿಕೊಳ್ಳುತ್ತಿದ್ದು, ಹಲವರು ಧಾರ್ಮಿಕ ಕ್ಷೇತ್ರಗಳಿಗೆ ಹೋಗಿ ಬರಲು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಲಾರಂಭಿಸಿದ್ದಾರೆ. ಇದನ್ನೇ ಈಗ ಕಾಂಗ್ರೆಸ್​ ನಾಯಕರು ತಮ್ಮ ಪರವಾಗಿ ಬಳಸಿಕೊಳ್ಳುವ ಮೂಲಕ ತಮ್ಮ ಯೋಜನೆಗೆ ಧಾರ್ಮಿಕ ಶಕ್ತಿ ತುಂಬುವ ಯತ್ನ ಮಾಡುತ್ತಿರುವುದಲ್ಲದೆ, ಧರ್ಮದ ಹೆಸರಲ್ಲೇ ಹೆಚ್ಚಾಗಿ ಮಾತನಾಡುವ ಬಿಜೆಪಿಯತ್ತ ಧರ್ಮಾಸ್ತ್ರವಾಗಿ ಪ್ರಯೋಗಿಸುವ ತಂತ್ರವನ್ನೂ ಮಾಡುತ್ತಿದ್ದಾರೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಪ್ರಿಯಾಂಕ್ ಖರ್ಗೆ ಅವರ ಟ್ವೀಟ್​ಗಳು ಇದಕ್ಕೆ ಪೂರಕವಾಗಿವೆ. ‘ಶಕ್ತಿ ಯೋಜನೆ ಮಹಿಳೆಯರಿಗೆ ಶಕ್ತಿ ನೀಡುವ ಜೊತೆ ಜೊತೆಗೆ ಅಸಲಿ ಹಿಂದುತ್ವಕ್ಕೆ ಶಕ್ತಿ ತುಂಬಿದೆ. ಎಲ್ಲಾ ಹಿಂದೂ ದೇಗುಲಗಳು, ಪುಣ್ಯಕ್ಷೇತ್ರಗಳು ತುಂಬಿ ತುಳುಕುತ್ತಿವೆ. ನಮ್ಮ ದೇವರ ಪೂಜಿಸಿ, ಪ್ರೀತಿಸುವುದು, ಇತರ ಧರ್ಮೀಯರನ್ನು ಗೌರವಿಸುವವನೇ ನಿಜವಾದ ಹಿಂದೂ. ಇದು ಈಗ ಕಾಂಗ್ರೆಸ್ ಸರ್ಕಾರದಿಂದ ಸಾಧ್ಯವಾಗಿದೆ. ನಿಜ ಹಿಂದೂಗಳ ರಕ್ಷಣೆ, ಅಭಿವೃದ್ಧಿಗೆ ಕಾಂಗ್ರೆಸ್ ಸದಾ ಬದ್ಧ’ ಎಂದು ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಬಸ್​ ಡೋರೇ ಕಿತ್ತು ಹೋಯ್ತು!; ಉಚಿತ ಪ್ರಯಾಣಕ್ಕಾಗಿ ಮಹಿಳೆಯರ ‘ಶಕ್ತಿ’ ಪ್ರಯೋಗ
ಹಿಂದುತ್ವ ಜನರನ್ನು ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಭಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿತ್ತು. ದ್ವೇಷಕ್ಕೆ ಜನರನ್ನು ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ. ಆದರೆ ಪ್ರೀತಿ ಹಾಗೂ ಕಾಂಗ್ರೆಸ್​ನ “ಶಕ್ತಿ” ಜನರನ್ನು ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ. ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ. ಜನರ ಅಂತರಾಳದಲ್ಲಿ ಪೂಜಿಸುವ, ಪ್ರೀತಿಸುವ ಭಾವನೆಯನ್ನು ಸಬಲಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಪುರುಷರ ಪ್ರಯಾಣ ಪ್ರಯಾಸ, ಮೀಸಲು ಆಸನ ಕೇಳದ ಸ್ಥಿತಿ!
ಶಕ್ತಿ ಯೋಜನೆಯಿಂದ ರಾಜ್ಯದ ಎಲ್ಲ ದೇವಸ್ಥಾನಗಳ ಸುತ್ತಲಿನ ಸಾವಿರಾರು ಸಣ್ಣ ವ್ಯಾಪಾರಿಗಳಿಗೆ ನೇರ ಅನುಕೂಲ ಸಿಗಲಿದ್ದು, ಅಲ್ಲಿನ ಆರ್ಥಿಕ ಪ್ರಗತಿಯ ವೇಗ ಕೂಡ ದ್ವಿಗುಣಗೊಳ್ಳಲಿದೆ. ದ್ವೇಷ ಕೇಂದ್ರಿತ ಅಧರ್ಮವನ್ನು ಸೋಲಿಸಿ, ಪ್ರೀತಿ ಹಾಗೂ ಸಹಬಾಳ್ವೆ ಕೇಂದ್ರಿತ ಧರ್ಮವನ್ನು ಗೆಲ್ಲಿಸಲು ನಾವು ‘ಶಕ್ತಿ’ಯುತ ಹೆಜ್ಜೆ ಇಟ್ಟಿದ್ದೇವೆ ಎಂದೂ ಅವರು ಹೇಳಿಕೊಂಡಿದ್ದಾರೆ.
ಹೆಂಡ್ತಿ ಆ್ಯಪ್ ಡೌನ್​ಲೋಡ್ ಮಾಡೋದು ತಡವಾಯ್ತೆಂದು ಸಿಟ್ಟಾದ ಗಂಡ; ಸಮಾಧಾನಿಸಲು ಬಂದ ಮಗನ ಎದೆಗೆ ಚೂರಿ ಇರಿತ!

‘ನನ್ನಪ್ಪ ಒಬ್ಬ ಬೆಪ್ಪ.. ನಾನೂ ಬೆಪ್ಪ..’: ಆತ್ಮಾವಲೋಕನ ರೀತಿಯಲ್ಲಿ ಹ್ಯಾಪಿ ಫಾದರ್ಸ್ ಡೇ ವಿಷ್ ಮಾಡಿದ ನಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + one =
Remember me
