ಬೆಂಗಳೂರು: ಕರೊನಾ ಸೋಂಕಿತರನ್ನು ಗುಣಪಡಿಸುವ ನಿಟ್ಟಿನಲ್ಲಿ ಭರವಸೆ ಮೂಡಿಸಿದ್ದ ಪ್ಲಾಸ್ಮಾ ಥೆರಪಿಗೆ ಒಳಗಾಗಿದ್ದ ರೋಗಿ ಹೃದಯಾಘಾತದಿಂದ ಮೃತಪಟ್ಟಿದ್ದು, ರಾಜ್ಯದಲ್ಲಿ ನಡೆಸಿದ ಮೊಟ್ಟಮೊದಲ ಪ್ರಾಯೋಗಿಕ ಪರೀಕ್ಷೆಯಲ್ಲಿಯೇ ವೈದ್ಯರ ನಿರೀಕ್ಷೆ ಹುಸಿಯಾಗಿದೆ.
ಸೋಂಕಿಗೆ ಒಳಗಾಗಿದ್ದ 60 ವರ್ಷದ ವೃದ್ಧನಿಗೆ ಅಧಿಕ ರಕ್ತದೊತ್ತಡ, ಮಧುಮೇಹ ಇತ್ತು. ತೀವ್ರ ಉಸಿರಾಟದ ಸಮಸ್ಯೆಗೆ ಒಳಗಾಗಿದ್ದರಿಂದ ವೆಂಟಿಲೇಟರ್ ಅಳವಡಿಸಿದರೂ ಸ್ಪಂದಿಸುತ್ತಿರಲಿಲ್ಲ. ಅನ್ಯಮಾರ್ಗವಿಲ್ಲದೆ ಕುಟುಂಬ ಸದಸ್ಯರ ಸಮ್ಮತಿ ಮೇರೆಗೆ ಕೊನೆಯ ಪ್ರಯತ್ನವಾಗಿ ಅವರನ್ನು ಪ್ಲಾಸ್ಮಾ ಥೆರಪಿಗೆ ಆಯ್ಕೆ ಮಾಡಿಕೊಂಡು ಸೋಮವಾರ ಚಿಕಿತ್ಸೆ ಪ್ರಾರಂಭಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ನಿಧನರಾದರು ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಥೆರಪಿಯಲ್ಲಿ ಲೋಪವಿಲ್ಲ: ವಿಕ್ಟೋರಿಯಾ ಅಸ್ಪತ್ರೆ ವೈದ್ಯರು ಹಾಗೂ ಕುಟುಂಬ ಸದಸ್ಯರ ಸಮ್ಮತಿ ದೊರೆತ ಕೂಡಲೇ ರೋಗಿಗೆ ಕೇವಲ ಒಂದು ಗಂಟೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನಡೆಸಲಾಯಿತು. ಈಗಾಗಲೇ ಕರೊನಾದಿಂದ ಗುಣಮುಖರಾಗಿದ್ದ ದಾನಿಯಿಂದ ಪಡೆದಿದ್ದ ಪ್ಲಾಸ್ಮಾದಲ್ಲಿ 500 ಎಂಎಲ್ ಪ್ಲಾಸ್ಮಾವನ್ನು ಇನ್​ಜೆಕ್ಷನ್ ರೀತಿ ನೀಡಲಾಯಿತು. ಆನಂತರ ಎರಡು ದಿನಗಳ ಕಾಲ ರೋಗಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದು, ಇನ್ನು 3-4 ದಿನಗಳಲ್ಲಿ ಚೇತರಿಕೆ ಹೊಂದಬಹುದೆಂಬ ನಿರೀಕ್ಷೆಯಲ್ಲಿದ್ದೆವು. ಗುರುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ. ರೋಗಿ ಸಾವಿಗೆ ಪ್ಲಾಸ್ಮಾ ಥೆರಪಿ ಲೋಪ ಕಾರಣವಲ್ಲ. ಅವರಿಗಿದ್ದ ಆರೋಗ್ಯ ಸಮಸ್ಯೆ ಕಾರಣ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿತಂದೆಯಿಂದಲೇ ಅಜ್ಜನ ಹತ್ಯೆ, ನೊಂದ ಮೊಮ್ಮಗಳು ಆತ್ಮಹತ್ಯೆ!
ಯಶಸ್ಸು ಶೇ.16: ಪ್ಲಾಸ್ಮಾ ಥೆರಪಿಯಲ್ಲಿ ರೋಗಿಗಳು ಬದುಕುಳಿಯುವ ಸಾಧ್ಯತೆ ಕೇವಲ ಶೇ.16 ಎಂಬುದು ತಿಳಿದುಬಂದಿದ್ದು, ಥೆರಪಿಯಿಂದ ಚೇತರಿಕೆ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆ ಮುಂದುವರೆಸಿದ್ದೇವೆ ಎಂದು ಕ್ಯಾನ್ಸರ್ ತಜ್ಞ ಡಾ.ವಿಶಾಲ್ ರಾವ್ ತಿಳಿಸಿದ್ದಾರೆ.
ಫಲ ನೀಡಲಿಲ್ಲ ಮೊದಲ ಪ್ರಯತ್ನ
ರಾಜ್ಯದಲ್ಲಿ ಕರೊನಾ ಸೋಂಕಿತರಿಗೆ ಪ್ರಾಯೋಗಿಕವಾಗಿ ಪ್ಲಾಸ್ಮಾ ಥೆರಪಿ ಮಾಡಲು ಕೆಲ ದಿನಗಳ ಹಿಂದಷ್ಟೇ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿತ್ತು. ಅದರಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್​ಐ) ಮತ್ತು ಎಚ್​ಸಿಜಿ ಆಸ್ಪತ್ರೆ ಸಹಯೋಗದಲ್ಲಿ ಪ್ಲಾಸ್ಮಾ ಥೆರಪಿಗೆ ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಮೊದಲಿಗೆ ಗಂಭೀರ ಹಂತ ತಲುಪಿದ್ದ ಇಬ್ಬರು ರೋಗಿಗಳಿಗೆ ಪ್ಲಾಸ್ಮಾ ಥೆರಪಿ ನಡೆಸಲು ನಿರ್ಧರಿಸಲಾಗಿತ್ತು. ಅಷ್ಟರಲ್ಲಿ ಅವರಿಬ್ಬರ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಥೆರಪಿ ಆರಂಭಿಸಿರಲಿಲ್ಲ. ಸೋಮವಾರ ಆಂಧ್ರಪ್ರದೇಶದ ಅನಂತಪುರ ಮೂಲದ 60 ವರ್ಷದ ವೃದ್ಧನಿಗೆ ಇನ್ನಾವುದೇ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ವೈದ್ಯರು ಕೈಚೆಲ್ಲಿದಾಗ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗಿತ್ತು.
ಕೊನೆಯ ಅಸ್ತ್ರ
ಮಧುಮೇಹ, ರಕ್ತದೊತ್ತಡ ಸೇರಿ ನಾನಾ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕರೊನಾ ಸೋಂಕಿಗೆ ಒಳಗಾದರೆ, ಬದುಕುಳಿಯವ ಸಾಧ್ಯತೆ ತೀರಾ ಕಡಿಮೆ. ಅಂತಹವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ವೆಂಟಿಲೇಟರ್ ನೆರವಿನಿಂದ ಉಸಿರಾಟ ನಡೆಸುವವರನ್ನು ಸಾಮಾನ್ಯ ಚಿಕಿತ್ಸೆಯಿಂದ ಗುಣಪಡಿಸುವುದು ಕಷ್ಟ. ಇಂತಹ ಸಂದರ್ಭದಲ್ಲಿ ರೋಗಿಯನ್ನು ಉಳಿಸಲು ಇರುವ ಕೊನೆಯ ಅಸ್ತ್ರ ಪ್ಲಾಸ್ಮಾ ಥೆರಪಿ. ಆದರೆ ಈ ಚಿಕಿತ್ಸೆಗೆ ರೋಗಿ ಸ್ಪಂದಿಸಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಹಣ್ಣು, ತರಕಾರಿ ಬೆಳೆಗಾರರಿಗೆ ತಲಾ 15 ಸಾವಿರ ರೂ.; ಮತ್ತೆ 162 ಕೋಟಿ ಪ್ಯಾಕೇಜ್ ನೀಡಿದ ಬಿಎಸ್‌ವೈ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − nine =
Remember me
