ಬೆಂಗಳೂರು:ಆತ್ಮನಿರ್ಭರ ಭಾರತ ನಿರ್ವಣದ ಹಾದಿಯಲ್ಲಿ ಇಂದು ಘೊಷಿಸಿದ ಹಲವಾರು ಯೋಜನೆ ಹಾಗೂ ಹಣಕಾಸು ಸಹಾಯ ರಾಜ್ಯಕ್ಕೆ ಹೆಚ್ಚು ಲಾಭ ತರಲಿವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಉತ್ತೇಜಕ ಕಾರ್ಯಕ್ರಮಗಳು ಉದ್ಯೋಗ ಅವಕಾಶಗಳನ್ನು ವೃದ್ಧಿಗೊಳಿಸುತ್ತವೆ ಎಂದು ಹೇಳಿದ್ದಾರೆ. ಖನಿಜ ವಲಯದಲ್ಲಿ ತರುತ್ತಿರುವ ಆಮೂಲಾಗ್ರ ಬದಲಾವಣೆ ರಾಜ್ಯದ ಖನಿಜ ನೀತಿಗೆ ಪೂರಕವಾಗಲಿದೆ. ನಮ್ಮ ರಾಜ್ಯದಲ್ಲಿ ಹಲವಾರು ಖನಿಜಗಳ ನಿಕ್ಷೇಪಗಳಿದ್ದು, ಈಗ ಅವುಗಳ ಗಣಿಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಅದರಲ್ಲೂ ಈಗಿರುವ ಖನಿಜ ಸಂಬಂಧಪಟ್ಟ ಕಾಯಿದೆಗಳು ನಮಗೆ ಹೆಚ್ಚಿನ ಅವಕಾಶ ಕಲ್ಪಿಸಲು ಮತ್ತು ಗಣಿಗಾರಿಕೆ ಮಾಡುವಲ್ಲಿ ಸ್ವಲ್ಪ ಅಡಚಣೆಗಳಿದ್ದವು. ಈಗ ನಾವು ಮುಕ್ತ ವಾತಾವರಣದಲ್ಲಿ ಕೆಲಸ ಮಾಡಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಯಥೇಚ್ಚ ಖನಿಜ ಸಂಪತ್ತು ಇದ್ದು (ಕಬ್ಬಿಣ, ತಾಮ್ರ, ಬಂಗಾರ, ಕ್ವಾರ್ಟ್ಸ್ ಮತ್ತು ಯುರೇನಿಯಂ) ಇವುಗಳನ್ನು ನಾವು ಗಣಿಗಾರಿಕೆ ಮಾಡಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಕಾರಣವಾಗಬಹುದು. ಖಾಸಗಿ ಸಹಭಾಗಿತ್ವದ ಗಣಿಗಾರಿಕೆ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದೆ. ದೇಶದ ರಕ್ಷಣಾ ವಲಯ, ಬಾಹ್ಯಾಕಾಶ, ನಾಗರಿಕ ವಿಮಾನಯಾನ, ಅಂತರಿಕ್ಷ ಯಾನ ಮತ್ತು ಅಂತರಿಕ್ಷ ವಲಯಗಳಲ್ಲಿ ಹೂಡಿಕೆ ಹೆಚ್ಚಾಗಿ ರಾಜ್ಯಕ್ಕೆ ಲಾಭವಾಗಲಿದೆ. ಏಕೆಂದರೆ, ಈ ವಲಯದಲ್ಲಿ ಸಾಕಷ್ಟು ಉತ್ಪಾದನಾ ಘಟಕಗಳು ನಮ್ಮ ರಾಜ್ಯದಲ್ಲಿದ್ದು, ಅವುಗಳಿಗೆ ಪೂರಕವಾಗಿ ಇತರೆ ಸಂಬಂಧಪಟ್ಟ ಘಟಕಗಳು ಸ್ಥಾಪನೆ ಆಗುತ್ತವೆ ಎಂದು ಹೇಳಿದ್ದಾರೆ. ಇಂದು ಪ್ರಕಟಿಸಿದ ಆರ್ಥಿಕ ಯೋಜನೆಗಳು ದೇಶದ ವಿದೇಶ ವಿನಿಮಯವನ್ನು ಉಳಿತಾಯ ಮಾಡಲಿದೆ. ಅಣು ವಿಜ್ಞಾನದಲ್ಲಿ ಖಾಸಗಿ ಸಹಭಾಗಿತ್ವ ಕೂಡ ನಮ್ಮ ರಾಜ್ಯಕ್ಕೆ ಹೆಚ್ಚಿನ ಲಾಭವಾಗಲಿದೆ. ದಾವೋಸ್ ಪ್ರವಾಸದಲ್ಲಿ ಹಲವಾರು ಬಾಹ್ಯಾಕಾಶ ಮತ್ತು ರಕ್ಷಣಾ ವಲಯ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ತಮ್ಮಇಚ್ಛೆ ವ್ಯಕ್ತಪಡಿಸಿದ್ದು, ಈಗ ಈ ಕಂಪನಿಗಳ ಯೋಜನೆಗಳು ಸಾಕಾರಗೊಳ್ಳಲಿವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ:ದೂರದಿಂದಲೇ ಮಕ್ಕಳತ್ತ ಕೈ ಬೀಸಿ ಕಣ್ಣೀರಾದ ಪಾಲಕರು…
ಕಲ್ಲಿದ್ದಲು ಗಣಿಗಾರಿಕೆ ವಾಣಿಜ್ಯೀಕರಣ ಮಾಡುವ ನಿರ್ಧಾರ ಸ್ವಾಗತಾರ್ಹ. ಇದು ದೇಶದ ಆರ್ಥಿಕತೆಗೆ ಅಮೂಲಾಗ್ರ ಕೊಡುಗೆ ಯನ್ನು ನೀಡಲಿದೆ.ಪ್ರಾಸ್ಪೆಕ್ಟಿವ್ ಲೈಸನ್ಸ್ ಹಾಗೂ ಮೈನಿಂಗ್ ಲೈಸನ್ಸ್ ಒಟ್ಟಿಗೆ ಕೊಡುವ ವ್ಯವಸ್ಥೆಯಾಗ ಲಿದೆ. ಈ ಮೂಲಕ ಜಿ 2 ಇಂದ ಜಿ 4 ಲೆವೆಲ್​ಗೆ
ನಾವು ಹರಾಜು ಮಾಡುವಂತಹ ತೀರ್ವನದ ಪರಿಣಾಮವಾಗಿ 500 ಕ್ಕೂ ಹೆಚ್ಚು ಖನಿಜ ಗಣಿಗಳು ಹರಾಜಿಗೆ ಬರಲಿವೆ.
| ಪ್ರಹ್ಲಾದ ಜೋಶಿಕಲ್ಲಿದ್ದಲು ಮತ್ತು ಗಣಿ ಸಚಿವ
ಕರೊನಾ ಸಂಕಷ್ಟ ದೂರ ಮಾಡಲು ಕೈಜೋಡಿಸಿದ ರಿಲಯನ್ಸ್​ ಫೌಂಡೇಶನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 1 =
Remember me
