ಬೆಂಗಳೂರು: ಉದ್ಯಮಿ ಅಜೀಂ ಪ್ರೇಮ್ ಜೀ ಅವರೊಂದಿಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿ, ಸರ್ಕಾರದ ಅಪೇಕ್ಷೆಯನ್ನು ಪ್ರಸ್ತಾಪಿಸಿದರು.ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಶಿವಕುಮಾರ್, ಅಜೀಂ ಪ್ರೇಮ್‌ಜೀ ಪ್ರತಿ ವರ್ಷ 50 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಜನಕಲ್ಯಾಣಕ್ಕೆ ಬಳಸುತ್ತಿದ್ದಾರೆ. ಅವರು ಈ ದೇಶದ ಆಸ್ತಿ, ಅವರಿಗೆ ಸರ್ಕಾರದಿಂದ ಬೇಕಾದ ಸಹಕಾರ ಮತ್ತು ಸವಲತ್ತು ನೀಡುವುದು ನಮ್ಮ ಕರ್ತವ್ಯ ಎಂದರು.ಈಗಾಗಲೇ ಸರ್ಕಾರಿ ಶಿಕ್ಷಕರಿಗೆ ಉನ್ನತ ತರಬೇತಿ ನೀಡುತ್ತಿದ್ದಾರೆ, ಸಿಎಸ್‌ಆರ್ ಅನುದಾನವನ್ನು ಗ್ರಾಮೀಣ ಭಾಗದ ಶಾಲೆಗಳಿಗೆ ಬಳಸುತ್ತಿದ್ದಾರೆ. ಶಿಕ್ಷಕರ ಕೊರತೆಯನ್ನು ತುಂಬಲು ನಾವು ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ. ಸರ್ಕಾರದ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತಿರುವ ಅವರಿಗೆ ನಮ್ಮ ಸಹಕಾರ ಸದಾ ಇರುತ್ತದೆ. ರಾಜ್ಯದ ಹಿತದೃಷ್ಟಿಯಿಂದ ನಡೆದ ಭೇಟಿ ಎಂದು ತಿಳಿಸಿದರು.ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ತಮ್ಮ ಇಲಾಖೆಯ ಅಪೇಕ್ಷೆಯನ್ನು ಪ್ರೇಮ್ ಜೀ ಮುಂದೆ ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೂಲಸೌಕರ್ಯ ಅಭಿವೃದ್ಧಿಗೆ ಎರಡು ಸಾವಿರ ಕೋಟಿ, ಪಾಲಿಟೆಕ್ನಿಕ್‌ಗಳ ಅಭಿವೃದ್ಧಿಗೆ 850 ಕೋಟಿ ರೂ., ಅಂಬೇಡ್ಕರ್ ಸ್ಕೂಲ್ ಆ್ ಎಕನಾಮಿಕ್ಸ್‌ಗೆ 6 ಕೋಟಿ ರೂ., ಯುವಿಸಿಇ ಮೇಲ್ದರ್ಜೆಗೇರಿಸಲು 12 ಕೋಟಿ ರೂ. ಅಗತ್ಯವಿದೆ ಎಂದು ಸಿಎಂ ಸಮ್ಮುಖ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + three =
Remember me
