ಬೆಂಗಳೂರು:ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಕ ಮಾಡಿದೆ.
ಇದನ್ನೂ ಓದಿ:ಅಶ್ಲೀಲ ಚಿತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್: ಎಫ್​​ಐಆರ್ ದಾಖಲು
ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು (ಏಪ್ರಿಲ್ 30) ಆದೇಶ ಹೊರಡಿಸಿದೆ. ಎನ್.ಜಗದೀಶ್ ಅವರು ಸದ್ಯ ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ.
ಇದೀಗ ಇವರನ್ನೇ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ರೇವಣ್ಣ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.
ಪ್ರಜ್ವಲ್‌ ರೇವಣ್ಣ ಹಾಗೂ ಹೆಚ್‌.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ 354 A, 354 D, 509 ಅಡಿ ಪ್ರಕರಣ ದಾಖಲು ಮಾಡಿದ್ದಾರೆ. ಎಫ್‌ಐಆರ್‌ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿ ನಂಬರ್1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ.
ಮಾಜಿ ಡಿಸಿಎಂ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ: 2ನೇ ಬಾರಿಗೆ ಜಾಮೀನು ಅರ್ಜಿ ವಜಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + seven =
Remember me
