ಬೆಂಗಳೂರು: ಸಿಲಿಕಾನ್ ​ಸಿಟಿಯಲ್ಲಿ ನಾಲ್ವರಲ್ಲಿ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಸೋಂಕು ಹರಡದಂತೆ ನಿಯಂತ್ರಣ ಹಾಗೂ ಚಿಕಿತ್ಸೆ ವೇಳೆ ಪಾಲಿಸಲು ಹೊಸ ನಿಯಮಾವಳಿ ಕೋವಿಡ್-19 (ಕರೊನಾ ವೈರಸ್ ಡಿಸೀಸ್) ಜಾರಿಗೊಳಿಸಿದೆ.
ಸಾಂಕ್ರಾಮಿಕ ರೋಗಗಳ ತಡೆಗೆ ಸದ್ಯ ಚಾಲ್ತಿಯಲ್ಲಿರುವ ಕಾನೂನು ಸಮರ್ಪಕವಾಗಿಲ್ಲದ ಕಾರಣ ಸರ್ಕಾರ ತಾತ್ಕಾಲಿಕವಾಗಿ ರೂಪಿಸಿರುವ ಈ ನಿಯಮ ಮುಂದಿನ 1 ವರ್ಷದವರೆಗೆ ಜಾರಿಯಲ್ಲಿರುತ್ತದೆ.
ಈ ನಿಯಮದಡಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ರೋಗಿಗಳನ್ನು ಪರೀಕ್ಷಿಸಲು ಪ್ರತ್ಯೇಕ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಆಸ್ಪತ್ರೆಗಳಲ್ಲಿ ತಪಾಸಣೆ ಸಂದರ್ಭದಲ್ಲಿ ಶಂಕಿತ ವ್ಯಕ್ತಿಯ ಪ್ರಯಾಣದ ಇತಿಹಾಸವನ್ನು ಹಾಗೂ ಅವರ ಸಂಪರ್ಕಕ್ಕೆ ಬಂದವರ ಮಾಹಿತಿಯನ್ನು ದಾಖಲಿಸಬೇಕು. ಹೊರ ದೇಶಕ್ಕೆ ಹೋಗಿದ್ದರ ಮಾಹಿತಿ ಇದ್ದಲ್ಲಿ ಅವರನ್ನು 28 ದಿನಗಳ ನಿಗಾದಲ್ಲಿರಿಸಬೇಕು. ಈ ಎಲ್ಲ ಮಾಹಿತಿ ಸಂಗ್ರಹಿಸಿ ಸಂಬಂಧಪಟ್ಟ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕಡ್ಡಾಯವಾಗಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಸುಳ್ಳು ವದಂತಿಗೆ ಕಠಿಣ ಶಿಕ್ಷೆ
ಕರೊನಾ ವೈರಸ್ ಕುರಿತು ತಪು್ಪ ಸಂದೇಶ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ವ್ಯಕ್ತಿ, ಸಂಸ್ಥೆ ಹಾಗೂ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳು ತಪು್ಪ ಮಾಹಿತಿ ಹರಡುವಂತಿಲ್ಲ. ಹಾಗೆ ಮಾಡಿದಲ್ಲಿ ಶಿಕ್ಷಾರ್ಹ ಅಪರಾಧ. ಸುಳ್ಳು ವದಂತಿ ಹಬ್ಬಿಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಸರ್ಕಾರ ತಿಳಿಸಿದೆ.
ವಿದೇಶ ಪ್ರಯಾಣದ ಮಾಹಿತಿ ಕಡ್ಡಾಯ
ಕಳೆದ 14 ದಿನಗಳ ಹಿಂದೆ ಸೋಂಕಿತ ದೇಶಗಳಿಂದ ಆಗಮಿಸಿರುವ ಪ್ರಯಾಣಿಕರು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ತಪ್ಪದೆ ವರದಿ ಮಾಡಿಕೊಳ್ಳ ಬೇಕು. ಇಲ್ಲವೇ 104ಕ್ಕೆ ಕರೆ ಮಾಡಿ ತಿಳಿಸಬೇಕು. ಇಲ್ಲವಾದಲ್ಲಿ ಅದು ಅಪರಾಧವಾಗುತ್ತದೆ. ವಿದೇಶದಿಂದ ಬಂದವರು ಸೋಂಕು ಇಲ್ಲದಿದ್ದರೂ, 14 ದಿನ ಯಾರ ಸಂಪರ್ಕಕ್ಕೂ ಬಾರದೆ ಮನೆಯಲ್ಲಿ ಪ್ರತ್ಯೇಕವಾಗಿರಬೇಕು. ಸೋಂಕು ನಿಯಂತ್ರಣಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ ಮೇಲೆ ಯಾರೂ ಹಲ್ಲೆ ಮಾಡಬಾರದು.
ಖಾಸಗಿ ಲ್ಯಾಬ್​ಗೆ ಅಧಿಕಾರ ಇಲ್ಲ
ಕರೊನಾ ವೈರಸ್​ಗೆ ಸಂಬಂಧಿಸಿದಂತೆ ಮಾದರಿಗಳನ್ನು ತೆಗೆಯಲು ಹಾಗೂ ಪರೀಕ್ಷಿಸಲು ಯಾವುದೇ ಖಾಸಗಿ ಪ್ರಯೋಗಾಲಯಗಳಿಗೆ ಅಧಿಕಾರವಿಲ್ಲ. ಅಂತಹ ಎಲ್ಲ ಮಾದರಿಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸಂಗ್ರಹಿಸಿ ಸಂಬಂಧಿತ ಪ್ರಯೋಗಾಲಯ ಗಳಿಗೆ ಕಳುಹಿಸುವಂತೆ ಆಯಾ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳೂ ಸಹ ಶಂಕಿತರ ಮಾದರಿಯನ್ನು ಸರ್ಕಾರಿ ಪ್ರಯೋಗಾಲಯಗಳಿಗೆ ರವಾನಿಸಬೇಕು.
ಜಿಲ್ಲಾಡಳಿತಕ್ಕೆ ಸೂಚನೆ
ಸೋಂಕಿತ ಭೌಗೋಳಿಕ ಪ್ರದೇಶಕ್ಕೆ ಮೊಹರು ಹಾಕುವುದು.
ಸೋಂಕಿತ ಪ್ರದೇಶಕ್ಕೆ ಜನರ ಪ್ರವೇಶ ಮತ್ತು ನಿರ್ಗಮನ ನಿಷೇಧಿಸುವುದು.
ಶಾಲೆ, ಕಚೇರಿಗಳನ್ನು ಮುಚ್ಚುವುದು ಹಾಗೂ ಸಾರ್ವಜನಿಕ ಸಭೆಗಳನ್ನು ನಿಷೇಧಿಸುವುದು.
ಸೋಂಕಿತ ಪ್ರದೇಶಗಳಿಗೆ ವಾಹನ ಸಂಚಾರ ನಿರ್ಬಂಧ.
ಶಂಕಿತ ಪ್ರಕರಣಗಳಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು.
ಸೋಂಕು ತಡೆಗೆ ಇಲಾಖೆ ನಿರ್ದೇಶಿಸುವ ಯಾವುದೇ ಕ್ರಮಗಳನ್ನು ಜಾರಿಗೊಳಿಸುವುದು.
ಕರೊನಾ ಭೀತಿ: ಕುಗ್ಗಿದ ಚಿಕನ್​ ಬದಲಾಗಿ ಬೇಡಿಕೆ ಹೆಚ್ಚಾದ ಹಲಸಿನ ಬೆಲೆ ಕೇಳಿದ್ರೆ ಶಾಕ್​ ಆಗ್ತಿರಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three − two =
Remember me
