ಬೆಂಗಳೂರು:ರಾಜ್ಯದ ಕಾಂಗ್ರೆಸ್ ಸರ್ಕಾರವು ಪ್ರಣಾಳಿಕೆಯಲ್ಲಿ ೋಷಿಸಿದ್ದಂತೆ ರಾಜ್ಯ ಪಠ್ಯಕ್ರಮ ಪರಿಷ್ಕರಣೆಗೆ ಆದೇಶ ಹೊರಡಿಸಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದಿದ್ದ ಮತ್ತು 2023-24ನೇ ಸಾಲಿನಲ್ಲಿ ಮಕ್ಕಳು ವ್ಯಾಸಂಗ ಮಾಡುತ್ತಿರುವ ಪಠ್ಯವನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಪಠ್ಯ ಪರಿಷ್ಕರಣೆಗೆ ವಿವಿಧ 5 ಸಮಿತಿಗಳನ್ನು ನೇಮಿಸಲಾಗಿದ್ದು, 37 ಮಂದಿಯನ್ನು ಸದಸ್ಯರನ್ನು ನೇಮಿಸಲಾಗಿದೆ. ಈ ಸಮಿತಿಗಳನ್ನು ನಿರ್ವಹಣೆ ಮಾಡುವುದಕ್ಕಾಗಿ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲ್ಲೂಕಿನ ನಿವೃತ್ತ ಪ್ರಾಧ್ಯಾಪಕ ಡಾ. ಮಂಜುನಾಥ ಜಿ. ಹೆಗಡೆ ಅವರನ್ನು ಸಮಿತಿಯ ಸಂಯೋಜಕರನ್ನಾಗಿ ನೇಮಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಠ್ಯ ಪರಿಷ್ಕರಣೆ ಆದೇಶ ಹೊರಡಿಸಿದ್ದು, 2024-25ನೇ ಸಾಲಿಗೆ ಪಠ್ಯವನ್ನು ಜಾರಿಗೊಳಿಸಲು ಅನುಕೂಲವಾಗುವಂತೆ 2ರಿಂದ 3 ತಿಂಗಳೊಳಗೆ ಪರಿಷ್ಕರಣಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಕಾಲಮಿತಿ ನೀಡಿ ಇಲಾಖೆ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್. ಹೊಸಮಠ ಆದೇಶ ಹೊರಡಿಸಿದ್ದಾರೆ.
ಎನ್‌ಸಿಎ್ 2005ರ ಆಧಾರವಾಗಿ ರಚನೆ:
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು- 2005ರ (ಎನ್‌ಸಿಎ್) ಆಧಾರಿತವಾಗಿ ರಾಜ್ಯದಲ್ಲಿ ಪಠ್ಯಪುಸ್ತಕಗಳನ್ನು ರಚನೆ ಮಾಡಲಾಗಿದೆ. ಇದರ ಆಧಾರದಲ್ಲಿ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಬೇಕಾಗಿರುವುದರಿಂದ ವಿಷಯವಾರು ತಜ್ಞರು ಮತ್ತು ಸಮಿತಿಗಳನ್ನು ನೇಮಕ ಮಾಡಲಾಗಿದೆ.
ಯಾವೆಲ್ಲ ಪಠ್ಯಗಳ ಪರಿಷ್ಕರಣೆ?
2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ 1ರಿಂದ 10ನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕಗಳು (ಪ್ರಥಮ ಮತ್ತು ದ್ವಿತೀಯ ತೃತೀಯ ಭಾಷೆ), 9 ಮತ್ತು 10ನೇ ತರಗತಿಯ ತೃತೀಯ ಭಾಷೆ, 6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಕೈಗೊಳ್ಳಲು ಸೂಚಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
