ಬೆಂಗಳೂರು:ಕರೊನಾ ಸಂಕಷ್ಟ ಸಂದರ್ಭದಲ್ಲಿ ಕೃಷಿ ಹಾಗೂ ಕೃಷಿಯೇತರ ವಲಯಕ್ಕೆ ಸಹಕಾರ ಇಲಾಖೆ ಮೂಲಕ 39,300 ಕೋಟಿ ರೂ.ಗಳನ್ನು ಸಾಲವಾಗಿ ನೀಡುವ ‘ಆರ್ಥಿಕ ಸ್ಪಂದನ’ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಸಮಾರಂಭದಲ್ಲಿ ಕೆಲ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡುವ ಮೂಲಕ ಸಾಲಮೇಳಕ್ಕೆ ಚಾಲನೆ ನೀಡಲಾಗಿದ್ದು, ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿಯೂ ಈ ಯೋಜನೆ ಜಾರಿಗೆ ಬರಲಿದೆ. ಸಹಕಾರ ಇಲಾಖೆಯು ವಿವಿಧ ಯೋಜನೆಗಳಡಿ ಕೃಷಿ ಕ್ಷೇತ್ರಕ್ಕೆ 15,300 ಕೋಟಿ ರೂ., ಕೃಷಿಯೇತರ ವಲಯಕ್ಕೆ 24 ಸಾವಿರ ಕೋಟಿ ರೂ. ಸಾಲ ಸೌಲಭ್ಯ ಒದಗಿಸುತ್ತಿದೆ. 262 ಪಟ್ಟಣ ಸಹಕಾರ ಬ್ಯಾಂಕ್ ಮತ್ತು 4505 ಕೃಷಿಯೇತರ ಪತ್ತಿನ ಸಹಕಾರ ಸಂಘಗಳಲ್ಲಿ ಯೋಜನೆ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ 7415.45 ಕೋಟಿ ರೂ. ಸಾಲ ನೀಡಲಾಗಿದೆ. ರೈತರಿಗೆ ಕೃಷಿ ಸಾಲ ಒದಗಿಸಲು ಕೇಂದ್ರ ಸರ್ಕಾರವು ವಿಶೇಷ ನಗದು ಸೌಲಭ್ಯ ಯೋಜನೆಯಲ್ಲಿ 1,700 ಕೋಟಿ ರೂ. ಅನ್ನು ನಬಾರ್ಡ್ ಮೂಲಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ಗಳಿಗೆ ನೀಡಿದೆ. ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಎಸ್.ಟಿ. ಸೋಮಶೇಖರ್ ಕಾರ್ಯಕ್ರಮದಲ್ಲಿ ಇದ್ದರು.ಇದನ್ನೂ ಓದಿ:ವಿಧಾನಸಭಾ ಅಧಿವೇಶನಕ್ಕೆ ಕಾಂಗ್ರೆಸ್ ಸಿದ್ಧತೆ; ಸರ್ಕಾರವನ್ನು ಕಟ್ಟಿಹಾಕಲು ಕೈ ಸನ್ನದ್ಧ
ಬೆಳೆ ಸಾಲಗಳ ಮೇಲಿನ ಬಡ್ಡಿ ಸಹಾಯಧನ ಯೋಜನೆಯಲ್ಲಿ 2020-21ನೇ ಸಾಲಿಗೆ 11.88 ಲಕ್ಷ ರೈತರಿಗೆ 7,777.41 ಕೋಟಿ ರೂ. ಸಾಲ ವಿತರಿಸಲಾಗಿದೆ. ಬಡ್ಡಿ ಸಹಾಯಧನಕ್ಕಾಗಿ 992.50 ಕೋಟಿ ರೂ. ಆಯವ್ಯಯ ಅವಕಾಶ ಕಲ್ಪಿಸಲಾಗಿದ್ದು, ಈಗಾಗಲೆ ಸರ್ಕಾರದಿಂದ 496.24 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.
ಸ್ವಸಹಾಯ ಗುಂಪುಗಳ ಕೌಶಲಾಭಿವೃದ್ಧಿ, ಉದ್ಯಮಶೀಲತೆ ವೃದ್ಧಿಗೊಳಿಸಲು ಮತ್ತು ಸ್ವ ಉದ್ಯೋಗ ಪ್ರೋತ್ಸಾಹಿಸಲು, ಕಾಯಕ ಯೋಜನೆಯಲ್ಲಿ ಸ್ವಸಹಾಯ ಗುಂಪುಗಳಿಗೆ 5 ಲಕ್ಷ ರೂ. ತನಕ ಶೂನ್ಯಬಡ್ಡಿ ದರದಲ್ಲಿ, 10 ಲಕ್ಷ ರೂ. ತನಕ ಶೇ.4 ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ.
ರೈತರು ಮತ್ತು ಕೃಷಿ ಕಾರ್ವಿುಕರಿಗೆ 2 ಲಕ್ಷ ರೂ. ಸಾಲವನ್ನು ಶೂನ್ಯಬಡ್ಡಿ ದರದಲ್ಲಿ ನೀಡಲಾಗುತ್ತಿದೆ. ಹೈನುಗಾರಿಕೆ ಮತ್ತು ಮೀನುಗಾರಿಕೆ ಉದ್ದೇಶಕ್ಕೆ 100 ಕೋಟಿ ರೂ. ವೆಚ್ಚ ಮಾಡುವ ಗುರಿ ಹೊಂದಿದ್ದು, ಈವರೆಗೆ 60.30 ಕೋಟಿ ರೂ. ವಿತರಿಸಲಾಗಿದೆ.
ರಾಜ್ಯದಲ್ಲಿ ಸಹಕಾರ ಕ್ಷೇತ್ರದಲ್ಲಿ 2.50 ಲಕ್ಷ ಸ್ತ್ರೀಶಕ್ತಿ / ಸ್ವಸಹಾಯ ಗುಂಪುಗಳನ್ನು ರಚನೆ ಮಾಡ ಲಾಗಿದ್ದು, ಪ್ರಸಕ್ತ ವರ್ಷ 4500 ಗುಂಪುಗಳಿಗೆ 167.93 ಕೋಟಿ ಸಾಲ ನೀಡಲಾಗಿದೆ. (ಮಹಿಳಾ ಗುಂಪಿಗೆ ಶೂನ್ಯಬಡ್ಡಿ, ಪುರುಷರ ಗುಂಪಿಗೆ ಶೇ.4 ಬಡ್ಡಿ). ಈವರೆಗೆ 71,657 ಗುಂಪುಗಳಿಗೆ ಶೇ.4 ಬಡ್ಡಿ ದರದಲ್ಲಿ 1,421.83 ಕೋಟಿ ರೂ. ಸಾಲ ವಿತರಿಸಲಾಗಿದೆ.
ಆತ್ಮನಿರ್ಭರ ಭಾರತ ಯೋಜನೆಯಲ್ಲಿ ಸಹಕಾರ ಕ್ಷೇತ್ರದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸರ್ವರಿಗೆ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಪರಿಕಲ್ಪನೆಯಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಸಹಕಾರಿ ಕ್ಷೇತ್ರ ಹೆಮ್ಮರವಾಗಿ ಬೆಳೆಯಲು ಎಲ್ಲ ನೆರವು, ಪ್ರೋತ್ಸಾಹ ನೀಡಲಾಗುವುದು.
| ಬಿ.ಎಸ್.ಯಡಿಯೂರಪ್ಪಸಿಎಂ
https://www.vijayavani.net/tahasildar-climbs-tree/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
