ಬೆಂಗಳೂರು: ಕರೊನಾ ಕಾರಣದಿಂದ ಮೊದಲೇ ಹೈರಾಣಾಗಿರುವ ರಾಜ್ಯದ ಜನತೆ ತಾಪಮಾನ ಏರಿಕೆಯಿಂದಾಗಿ ಮತ್ತಷ್ಟು ಕಂಗಾಲಾಗಿದ್ದಾರೆ. ಮಾರ್ಚ್ ಆರಂಭದಲ್ಲಿ 34-35 ಡಿಗ್ರಿ ಸೆಲ್ಸಿಯಸ್​ನಷ್ಟಿದ್ದ ಗರಿಷ್ಠ ತಾಪಮಾನ ಪ್ರಮಾಣ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈಗ 40 ಡಿಗ್ರಿ ದಾಟಿದ್ದರೆ, ಉಳಿದೆಡೆಯೂ ಬಿಸಿಲು ತೀವ್ರಗೊಂಡಿದೆ.
ಗುರುವಾರ ಕಲಬುರಗಿಯಲ್ಲಿ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಯಚೂರು, ವಿಜಯಪುರ, ಬೀದರ್, ಗದಗ, ಕೊಪ್ಪಳ, ಬಳ್ಳಾರಿ ಮತ್ತಿತರ ಜಿಲ್ಲೆಗಳಲ್ಲಿ 38ರಿಂದ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಹಾಸನ ಮುಂತಾದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸರಾಸರಿ 35ರಿಂದ 38 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಹಲವೆಡೆ ಅಕಾಲಿಕ ಮಳೆ ಸುರಿಯುತ್ತಿದ್ದರೂ ಕೆಲ ಜಿಲ್ಲೆಗಳಲ್ಲಿ ತಾಪಮಾನ ಏರಿಳಿತವಾಗುತ್ತಿದೆ. ಅದರಲ್ಲೂ ರಾಯಚೂರು, ಕಲಬುರಗಿ ಹಾಗೂ ವಿಜಯಪುರದಲ್ಲಿ ಕಳೆದ ಒಂದು ವಾರದಿಂದ ಗರಿಷ್ಠ ತಾಪಮಾನ ಸರಾಸರಿ 40 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ರಾತ್ರಿ ವೇಳೆ ಸೆಕೆ : ಬಿಸಿಲಿನ ಝುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ವಾಡಿಕೆಗಿಂತ 1ರಿಂದ 2 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ಹೆಚ್ಚಳವಾಗಿದೆ.
28ರವರೆಗೆ ಮಳೆ
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಗುರುವಾರ ಸಂಜೆ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯಿತು. ರಸ್ತೆಯಲ್ಲಿ ಮಳೆ ನೀರು ತುಂಬಿ ಹರಿಯುತ್ತಿತ್ತು. ಗುಡುಗಿನ ಅಬ್ಬರ ಜೋರಾಗಿತ್ತು. ತುಮಕೂರಿನಲ್ಲೂ ಜೋರು ಮಳೆ ಸುರಿದಿದೆ. ಮೇಲ್ಮೈ ಸುಳಿಗಾಳಿ, ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಏ.28ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಜೋರು ಮಳೆಯಾಗಲಿದೆ. ಅದರಲ್ಲೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕೊವಿಡ್​​ನಿಂದಾದ ನಷ್ಟದ ಮೊತ್ತದ ಬಿಲ್​​ನ್ನು ಚೀನಾಕ್ಕೆ ಕಳಿಸಿದೆಯಾ ಜರ್ಮನಿ? ಮಾಧ್ಯಮವೊಂದರ ವರದಿಯ ಹೆಡ್​ಲೈನ್ ಎಡವಟ್ಟು..!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
