ಬೆಂಗಳೂರು:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಇಡಿಗಂಟು ಯೋಜನೆ ಸಂಬಂಧ ಸಲ್ಲಿಕೆಯಾಗಿರುವ ಮನವಿಯನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್.ಸಂಜಯ್ ಗೌಡ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಮುಂದಿನ ಎರಡು ತಿಂಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರು ಸಮಾಜದ ಅತ್ಯಂತ ಕೆಳ ಸ್ಥರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೂ ಅವರಿಗೆ ಉತ್ತಮ ಸೌಲಭ್ಯಗಳು ನೀಡುತ್ತಿಲ್ಲ. ಈ ನಿಟ್ಟಿನಲ್ಲಿ ಈ ಅವರ ಸೇವೆಯನ್ನು ಪರಿಗಣಿಸಿ ಇಡಿಗಂಟು ಹೆಚ್ಚಳ ಮಾಡುವಂತೆ ನಿರ್ದೇಶನ ನೀಡಲಾಗುತ್ತಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಇಡಿಗಂಟು(ಗೌರವಧನ) ಪಾವತಿ ಯೋಜನೆಯನ್ನು ೨೦೧೧ರ ಮಾ. ೧೮ರಂದು ಪ್ರಾರಂಭಿಸಿದ್ದ ಸರ್ಕಾರ ಕಾರ್ಯಕರ್ತೆಯರಿಗೆ ೩೦ ಸಾವಿರ ಮತ್ತು ಸಹಾಯಕಿಯರಿಗೆ ೫೦ ಸಾವಿರ ರೂ.ಗಳನ್ನು ನೀಡುತ್ತಿದೆ. ಈ ಮೊತ್ತವನ್ನು ಕ್ರಮವಾಗಿ ೫೦ ಸಾವಿರ ಹಾಗೂ ೧ ಲಕ್ಷಕ್ಕೆ ಹೆಚ್ಚಳ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.
ವಿಚಾರಣೆ ವೇಳೆ, ಸುಧೀರ್ಘ ಸೇವೆ ಸಲ್ಲಿಸಿದ ನಂತರ ಮನೆಗೆ ಹಿಂದಿರುಗುವ ಸಂದರ್ಭದಲ್ಲಿ ಪ್ರಸ್ತುತ ಸರ್ಕಾರ ನಿಗದಿಪಡಿಸಿರುವ ಮೊತ್ತ ಅತ್ಯಂತ ಕಡಿಮೆಯಿದೆ. ಆದ್ದರಿಂದ ಇಡಿಗಂಟು ಮೊತ್ತವನ್ನು ಹೆಚ್ಚಳ ಮಾಡಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
