ಬೆಂಗಳೂರು:ಲೋಕಸಭಾ ಸದಸ್ಯ ಸ್ಥಾನಕ್ಕೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡುವಂತೆ ಕೋರಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಅರ್ಜಿ ಕುರಿತು ಸೆ.೮ ರಂದು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಸೋಮವಾರ ಪ್ರಕಟಿಸಿದೆ. ವಿಸ್ತೃತ ಆದೇಶ ಇನ್ನೂ ಬಿಡುಗಡೆಯಾಗಬೇಕಿದೆ.ಹೈಕೋರ್ಟ್ ಆದೇಶದಿಂದಾಗಿ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ಪಡೆಯುವ ದಾರಿಯೊಂದೇ ಉಳಿದಿದೆ.
ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಸೆ.೧ ರಂದು ತೀರ್ಪು ನೀಡಿ, ಅದರ ಪ್ರತಿಯನ್ನು ಸಂಸತ್ ಸ್ಪೀಕರ್‌ಗೆ ಕಳುಹಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತ್ತು. ಸೆ.೪ರಂದು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು. ಸೆ.೮ರಂದು ಆ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಪೀಠ ತೀರ್ಪು ಕಾಯ್ದಿರಿಸಿತ್ತು.
ವಿಚಾರಣೆ ವೇಳೆ ಪ್ರಜ್ವಲ್ ಪರ ಹಿರಿಯ ವಕೀಲರು, ಅಸಿಂಧು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು. ಮೇಲ್ಮನವಿ ಸಲ್ಲಿಸುವವರೆಗೆ ತಡೆಯಾಜ್ಞೆ ನೀಡಲು ಈ ನ್ಯಾಯಾಲಯಕ್ಕೆ ಅವಕಾಶವಿದೆ ಎಂದು ತಿಳಿಸಿ ಆ ಕುರಿತ ನಿಯಮಗಳನ್ನು ವಿವರಿಸಿದ್ದರು.
ದೇವರಾಜೇಗೌಡ ಪರ ವಕೀಲರು, ಅಸಿಂಧು ಆದೇಶಕ್ಕೆ ತಡೆ ನೀಡಬಾರದು. ತಡೆ ನೀಡಲು ಈ ನ್ಯಾಯಾಲಯಕ್ಕೆ ಅವಕಾಶವಿಲ್ಲ. ಆದೇಶ ಹೊರಡಿಸಿದ ದಿನವೇ ತಡೆಗೆ ಕೋರಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ, ಅರ್ಜಿ ಸಲ್ಲಿಸಲು ವಿಳಂಬ ಮಾಡಲಾಗಿದೆ ಎಂದು ಆಕ್ಷೇಪಿಸಿದ್ದರು. ಮತ್ತೊಬ್ಬ ಅರ್ಜಿದಾರ ಎ.ಮಂಜು ಪರ ವಕೀಲರು, ರೇವಣ್ಣ ಅವರ ಮಧ್ಯಂತರ ಅರ್ಜಿಗೆ ತಮ್ಮ ಯಾವುದೇ ಆಕ್ಷೇಪಣೆ ಇಲ್ಲ ಎಂದು ತಿಳಿಸಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 1 =
Remember me
