
ಬೆಂಗಳೂರು: ಹಣಕಾಸಿನ ಸಾಮರ್ಥ್ಯ (ಆರ್ಥಿಕ ಸದೃಢತೆ) ಮಾತ್ರ ಮಗುವಿನ ಸುಪರ್ದಿಗೆ ಆಧಾರವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ಕಾರಣಕ್ಕಾಗಿ 14 ವರ್ಷದ ಪುತ್ರಿಯನ್ನು ಶಾಶ್ವತವಾಗಿ ತನ್ನ ಸುಪರ್ದಿಗೆ ನೀಡಲು ಪತ್ನಿಗೆ ಆದೇಶಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಅನಂತ ರಾಮನಾಥ ಹೆಗ್ಡೆ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಆದರೆ, ಮಗಳ ಭೇಟಿ ಹಕ್ಕು ಮತ್ತು ಮಗಳಿಗೆ ಉತ್ತಮ ಶಿಕ್ಷಣದ ವ್ಯವಸ್ಥೆಗೆ ಹಣಕಾಸಿನ ಸೌಲಭ್ಯ ಒದಗಿಸಲು ಅವಕಾಶ ಕೋರಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಸ್ಪಷ್ಟಪಡಿಸಿದೆ.
ಕೌಟುಂಬಿಕ ನ್ಯಾಯಾಲಯವು ತಪ್ಪಾಗಿ ಅರ್ಜಿ ವಜಾಗೊಳಿಸಿದೆ. ಮೇಲ್ಮನವಿದಾರರು ಉತ್ತಮ ವೇತನದ ಉದ್ಯೋಗ ಹೊಂದಿದ್ದಾರೆ. ಹಣಕಾಸಿನ ಸಾಮರ್ಥ್ಯ ಉತ್ತಮವಾಗಿದ್ದು, ಮಗುವನ್ನು ಚೆನ್ನಾಗಿ ಆರೈಕೆ ಮಾಡುತ್ತಾರೆ. ಮೇಲ್ಮನವಿದಾರರ ಸುಪರ್ದಿಗೆ ಮಗಳನ್ನು ನೀಡುವುದರಿಂದ ಆಕೆಯ ರಹಿತರಕ್ಷಣೆ ಮಾಡಿದಂತಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರು ಕೋರಿದ್ದರು.
2013ರಲ್ಲಿ ಡಿ.12ರಂದು ಮೇಲ್ಮನವಿದಾರರು ಮರು ಮದುವೆಯಾಗಿದ್ದಾರೆ. ಮಗಳ ಪರವಾಗಿ ನಾನು (ಪತ್ನಿ) ಮೇಲ್ಮನವಿದಾರನ ಆಸ್ತಿಯಲ್ಲಿ ಪಾಲು ಕೋರಿ ದಾವೆ ಹೂಡಿದ್ದೆ. ಆ ನಂತರ ಮಗಳ ಸುಪರ್ದಿಗೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅಂಶ ಪರಿಗಣಿಸಿಯೇ ಕೌಟುಂಬಿಕ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಮೇಲ್ಮನವಿದಾರ ಮಗಳ ಭೇಟಿಗೆ ಕೋರಿ ಯಾವುದೇ ಅರ್ಜಿ ಸಹ ಸಲ್ಲಿಸಿಲ್ಲ ಎಂದು ಪ್ರತಿವಾದಿ ವಕೀಲರು ನ್ಯಾಯಪೀಠದ ಗಮನಕ್ಕೆ ತಂದಿದ್ದರು.
ಮೇಲ್ಮನವಿದಾರನೊಂದಿಗೆ ಪುತ್ರಿ ಸುಪರಿಚಿತವಾಗಿದೆ (ಫೆಮಿಲಿಯರ್) ಎನ್ನುವುದನ್ನು ಸಾಬೀತುಪಡಿಸುವ ದಾಖಲೆಯನ್ನು ನ್ಯಾಯಾಲಯದ ಮುಂದೆ ಪ್ರಸ್ತುತ ಪಡಿಸಿಲ್ಲ. ಆದ್ದರಿಂದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಲು ಸಕಾರಣ ಕಂಡುಬರುತ್ತಿಲ್ಲ ಎಂದು ತಿಳಿಸಿ ನ್ಯಾಯಪೀಠವು ಮೇಲ್ಮನವಿ ವಜಾಗೊಳಿಸಿತು.
ಪ್ರಕರಣವೇನು?ಪ್ರಕರಣದಲ್ಲಿನ ಮೇಲ್ಮನವಿದಾರ ಪತಿ ಮತ್ತು ಆತನ ಪತ್ನಿ 2008ರ ಏ.27ರಂದು ಮದುವೆಯಾಗಿದ್ದರು. 2009ರ ಸೆ.29ರಂದು ದಂಪತಿಗೆ ಪುತ್ರಿ ಜನಿಸಿದ್ದಳು. ಕೌಟುಂಬಿಕ ವ್ಯಾಜ್ಯದಿಂದ 2010ರ ನಂತರ ಪತ್ನಿ ಮೇಲ್ಮನವಿದಾರನಿಂದ ಬೇರ್ಪಟ್ಟು, ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ವಿಚ್ಛೇದನ ಕೋರಿ ಪತ್ನಿ 2011ರಲ್ಲಿ ಅರ್ಜಿ ಸಲ್ಲಿಸಿದ್ದರು. ಕೌಟುಂಬಿಕ ನ್ಯಾಯಾಲಯವು 2012ರಲ್ಲಿ ದಂಪತಿಯ ವಿವಾಹ ಅನೂರ್ಜಿತಗೊಳಿಸಿ, ವಿಚ್ಛೇದನ ಮಂಜೂರು ಮಾಡಿತ್ತು.
ನಂತರ ಮಗಳನ್ನು ಶಾಶ್ವತವಾಗಿ ತನ್ನ ಸುಪರ್ದಿಗೆ ನೀಡಲು ಪತ್ನಿಗೆ ಆದೇಶಿಸುವಂತೆ ಕೋರಿ ಮೇಲ್ಮನವಿದಾರ, ಪೋಷಕರು ಮತ್ತು ಪಾಲಕರ ಕಾಯ್ದೆ-1890ರ ಅಡಿಯಲ್ಲಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ ನೆಲಮಂಗಲದ ಕೌಟುಂಬಿಕ ಹಿರಿಯ ಸಿವಿಲ್ ನ್ಯಾಯಾಲಯವು 2019ರ ಡಿ.19ರಂದು ಆದೇಶಿಸಿತ್ತು. ಇದನ್ನು ರದ್ದುಪಡಿಸಬೇಕು ಹಾಗೂ ಮಗಳನ್ನು ತನ್ನ ಸುಪರ್ದಿಗೆ ನೀಡಿ ಆದೇಶಿಸಬೇಕು ಎಂದು ಕೋರಿ ಮೇಲ್ಮನವಿದಾರ 2021ರಲ್ಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + four =
Remember me
