ಬೆಂಗಳೂರು:ಕಳೆದ ವಿಧಾನಸಭೆ ಚುನಾವಣೆ ವೇಳೆ ಮತದಾರರ ಮೇಲೆ ಅನುಚಿತ ಪ್ರಭಾವ ಬೀರಿದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಗೆ ಮತ ನೀಡಿ ಮತ್ತು ಪ್ರಧಾನಿ ನರೇಂದ್ರ ಮೋದಿಜಿಯವರ ಆಶೀರ್ವಾದಿಂದ ವಂಚಿತವಾಗದಂತೆ ನೋಡಿಕೊಳ್ಳಿ ಎಂದು ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಅನುಚಿತ ಪ್ರಭಾವ ಬೀರಿದ ಆರೋಪ ಸಂಬಂಧ ಹಾವೇರಿ ಜಿಲ್ಲೆಯ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿತ್ತು. ಇದೀಗ ಈ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಹಾವೇರಿ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಸಿಜೆಎಂ ನ್ಯಾಯಾಲಯದ ಮುಂದಿರುವ ವಿಚಾರಣೆ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಧಾರವಾಡ ಪೀಠದಿಂದ ಆನ್‌ಲೈನ್ ಮೂಲಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿ ವಿಚಾರಣೆ ಮುಂದೂಡಿದೆ.ಮೋದಿಜಿ ಅವರ ಒಲವು ಪಡೆಯಿರಿ:೨೦೨೩ರ ಏ.೧೯ರಂದು ಮಧ್ಯಾಹ್ನ ೧.೧೫ರಿಂದ ೧.೫೦ರ ಅವಧಿಯಲ್ಲಿ ಶಿಗ್ಗಾವಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಜೆ.ಪಿ. ನಡ್ಡಾ ಮಾತನಾಡಿದ್ದರು. ಈ ವೇಳೆ ಕರ್ನಾಟಕದ ಜನತೆ ಬಿಜೆಪಿಗೆ ಮತ ನೀಡಿ, ಪ್ರಧಾನಿ ನರೇಂದ್ರ ಮೋದಿಜಿ ಅವರ ಒಲವು ಪಡೆಯಿರಿ. ಕರ್ನಾಟಕವು ಮೋದಿಯವರ ಆಶೀರ್ವಾದ ಹೊಂದಿದೆ. ಅದರಿಂದ ವಂಚಿತವಾಗದಂತೆ ನೋಡಿಕೊಳ್ಳಿ ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಚುನಾವಣಾಧಿಕಾರಿಯಾಗಿದ್ದ ಲಕ್ಷ್ಮಣ್ ನಂದಿ ಅವರು ಶಿಗ್ಗಾವಿ ಪೊಲೀಸ್ ಠಾಣೆಗೆ ದೂರು ನೀಡಿ, ಜೆ.ಪಿ. ನಡ್ಡಾ ಅವರು ಮತದಾರರ ಮೇಲೆ ಅನುಚಿತ ಪ್ರಭಾವ ಬೀರುವ ಮೂಲಕ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ ಎಂದು ಆರೋಪಿಸಿದ್ದರು.ದೂರು ಸ್ವೀಕರಿಸಿದ್ದ ಪೊಲೀಸರು, ನಡ್ಡಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ ೧೭೧(ಸಿ), ೧೭೧(ಎಫ್) ಮತ್ತು ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್ ೧೨೩(೨) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣ ರದ್ದು ಕೋರಿ ನಡ್ಡಾ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
