ಬೆಂಗಳೂರು:ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ ನಗರದ ಸುಮಾರು ೪,೦೪೩ ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಪುರಸ್ಕರಿಸಿ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ಹೊರಡಿಸಿದೆ.
ಭೂ ಸ್ವಾಧೀನ ಅಧಿಸೂಚನೆಯನ್ನು ರದ್ದುಪಡಿಸಿ ೨೦೧೪ರ ಜು.೧೧ರಂದು ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ತೀರ್ಪು ರದ್ದು ಮತ್ತು ಭೂ ಸ್ವಾಧೀನ ಅಧಿಸೂಚನೆಯನ್ನು ಎತ್ತಿಹಿಡಿಯುವಂತೆ ಕೋರಿ ಬಿಡಿಎ ಸಲ್ಲಿಸಿದ್ದ ಸುಮಾರು ೧೪೦ಕ್ಕೂ ಅಧಿಕ ಪ್ರತ್ಯೇಕ ತಕರಾರು ಮೇಲ್ಮನವಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಅಲ್ಲದೆ, ಅಧಿಸೂಚನೆಯಲ್ಲಿ ಸ್ವಾಧೀನಕ್ಕೆ ಗುರುತಿಸಲಾಗಿದ್ದ ಜಾಗದಲ್ಲಿ ನರ್ಸರಿ ಅಭಿವೃದ್ಧಿಯಾಗಿರುವುದು ಹಾಗೂ ಕಟ್ಟಡ ನಿರ್ಮಾಣವಾಗಿರುವುದು ಸೇರಿದಂತೆ ಇನ್ನಿತರ ಕಾರಣಗಳಿಂದ ತಮ್ಮ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಬೇಕು ಎಂಬ ಬಗ್ಗೆ ಯಾವುದಾದರೂ ಮನವಿಯಿದ್ದರೆ, ಭೂ ಮಾಲೀಕರು ಮೂರು ತಿಂಗಳಲ್ಲಿ ಬಿಡಿಎ ಮನವಿ ಸಲ್ಲಿಸಬೇಕು. ಬಿಡಿಎ ಆ ಮನವಿಗಳ ಕುರಿತು ಕಾನೂನು ಪ್ರಕಾರ ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ವಿಭಾಗೀಯ ಪೀಠ ಆದೇಶಿಸಿದೆ.
ಭೂ ಸ್ವಾಧೀನ ಅಧಿಸೂಚನೆಯನ್ನು ಪುರಸ್ಕರಿಸಿದೆ:ಸರ್ಕಾರದಿಂದ ಪೂರ್ವಾನುಮತಿ ಪಡೆಯದಿರುವುದು ಸೇರಿದಂತೆ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಪಾಲಿಸಿಲ್ಲ. ಭೂ ಸ್ವಾಧೀನದಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ. ಹಾಗಾಗಿ, ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಕಾನೂನುಬಾಹಿರವಾಗಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ, ಭೂ ಸ್ವಾಧೀನಕ್ಕೆ ಹೊರಡಿಸಿದ್ದ ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಿ ೨೦೧೪ರ ಜು.೧೧ರಂದು ಆದೇಶಿಸಿತ್ತು. ಇದೀಗ ಈ ತೀರ್ಪು ಅನ್ನು ರದ್ದುಪಡಿಸಿರುವ ವಿಭಾಗೀಯ ಪೀಠವು ಭೂ ಸ್ವಾಧೀನ ಅಧಿಸೂಚನೆಯನ್ನು ಪುರಸ್ಕರಿಸಿದೆ.
ಭೂ ಸ್ವಾಧೀನ ಪ್ರಕ್ರಿಯೆ ಕೈಗೆತ್ತಿಗೊಳ್ಳಲು ರಾಜ್ಯ ಸರ್ಕಾರದಿಂದ ಬಿಡಿಎ ಅನುಮತಿ ಪಡೆದಿಲ್ಲ. ಮೊದಲಿಗೆ ೪೮೧೪ ಎಕರೆ ಸ್ವಾಧೀನಪಡಿಸಿಕೊಳ್ಳಲು ಪ್ರಾಥಮಿಕ ಅಧಿಸೂಚನೆಯಲ್ಲಿ ಬಿಡಿಎ ಉದ್ದೇಶಿಸಿತ್ತು. ನಂತರ ವಿವಿಧ ಕಾರಣಗಳನ್ನು ನೀಡಿ ಸುಮಾರು ೮೦೦ ಎಕರೆ ಜಮೀನನ್ನು ಅಂತಿಮ ಭೂ ಸ್ವಾಧೀನ ಅಧಿಸೂಚನೆಯನ್ನು ಕೈ ಬಿಡಲಾಗಿದೆ. ಆ ಮೂಲಕ ಭೂ ಸ್ವಾಧೀನದಲ್ಲಿ ತಾರತಮ್ಯ ಎಸಲಾಗಿದೆ ಎಂದು ಭೂ ಸ್ವಾಧೀನ ಅಧಿಸೂಚನೆ ರದ್ದುಪಡಿಸುವ ಸಂದರ್ಭದಲ್ಲಿ ಏಕ ಸದಸ್ಯ ಪೀಠ ಹೇಳಿದೆ. ಆದರೆ, ಭೂ ಸ್ವಾಧೀನಕ್ಕೆ ಸರ್ಕಾರದಿಂದ ಬಿಡಿಎ ಅನುಮತಿ ಪಡೆದಿದ್ದು, ಅದು ಕಾನೂನುಬದ್ಧವಾಗಿದೆ. ಇನ್ನೂ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂಬ ಕಾರಣಕ್ಕೆ ಇಡೀ ಭೂ ಸ್ವಾಧೀನ ಪ್ರಕ್ರಿಯೆಯೇ ಕಾನೂನು ಬಾಹಿರವಾಗಿದೆ ಎಂದೇಳಿ ಅಧಿಸೂಚನೆ ರದ್ದುಪಡಿಸಲಾಗದು. ತಾರತಮ್ಯ ಇದ್ದರೆ, ಆ ಕುರಿತು ಭೂ ಮಾಲೀಕರು ಮನವಿ ಪತ್ರ ಸಲ್ಲಿಸಿ ತಮ್ಮ ಕುಂದುಕೊರತೆ ಬಗೆಹರಿಸಿಕೊಳ್ಳಬಹುದು ಎಂದು ಆದೇಶದಲ್ಲಿ ವಿಭಾಗೀಯ ಪೀಠ ತಿಳಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
