ಮಂಗಳೂರು:ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ಹಿಂದೂ ಶೈಲಿಯ ದೇವಸ್ಥಾನದ ಗುಡಿ ಪತ್ತೆಯಾಗಿದೆ. ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ದರ್ಗಾದ ನವೀಕರಣದ ಸಲುವಾಗಿ ಮುಂಭಾಗ ಕೆಡವಲಾಗಿತ್ತು. ಈ ವೇಳೆ ಹಿಂದೂ ಕಲಾಕೃತಿಗಳು ಕಂಡುಬಂದಿವೆ.
ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದ ಹಿಂಭಾಗ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿವೆ. ಜೈನ ಅಥವಾ ಹಿಂದೂ ಧರ್ಮಕ್ಕೆ ಸೇರಿದ ದೇವಸ್ಥಾನವಿರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.
ಮಂಗಳೂರು ತಹಶೀಲ್ದಾರ್ ಪುರಂದರ, ವಿಶ್ವಹಿಂದೂಪರಿಷತ್ ಪ್ರಮುಖರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕಲು ತಹಶೀಲ್ದಾರ್ ಮುಂದಾಗಿದ್ದು, ಸದ್ಯ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶಿಲ್ದಾರ್ ಸೂಚನೆ ನೀಡಿದ್ದಾರೆ. ದರ್ಗಾ ಆಡಳಿತ ಕೂಡ ಕೆಲಸ ನಿಲ್ಲಿಸುವುದಾಗಿ ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
