ಬೆಂಗಳೂರು:ಕಳೆದ ಹತ್ತು ದಿನಗಳಿಂದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸ ಫಲಪುಷ್ಪ ಪ್ರದರ್ಶನಕ್ಕೆ ಸೋಮವಾರ ತೆರೆ ಬೀಳಲಿದೆ.
ಸಂವಿಧಾನದ ಬಗ್ಗೆ ದೇಶಾದ್ಯಂತ ಜಾಗೃತಿ ಅಭಿಯಾನಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ತೋಟಗಾರಿಕಾ ಇಲಾಖೆ ಈ ಬಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ಕುರಿತು ತನ್ನ 216ನೇ ಫಲಪುಷ್ಪ ಪ್ರದರ್ಶನ ಏರ್ಪಡಿಸಿತ್ತು. ಸಾರ್ವಜನಿಕರು ನಿರೀಕ್ಷೆ ಮೀರಿ ಲಾಲ್‌ಬಾಗ್‌ಗೆ ಭೇಟಿ ನೀಡಿ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿದ್ದರು. ವಿಶೇಷವಾಗಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಫಲ-ಪುಷ್ಪಗಳಲ್ಲಿ ಅನಾವರಣಗೊಂಡಿದ್ದ ಅಂಬೇಡ್ಕರ್ ಅವರ ವ್ಯಕ್ತಿತ್ವವನ್ನು ಕಣ್ತುಂಬಿಕೊಂಡರು.
ಆ.9ರಂದು ಮುಖ್ಯಮಂತ್ರಿಗಳಿಂದ ಚಾಲನೆಯಾಗಿದ್ದ ಫಲಪುಷ್ಪ ಪ್ರದರ್ಶನವು 10 ದಿನಗಳ ಕಾಲ ಕಿಕ್ಕಿರಿದ ಜನರ ನಡುವೆ ಯಶಸ್ವಿಯಾಗಿ ನಡೆಯಿತು. ವಾರಂತ್ಯದಲ್ಲಿ ಲಾಲ್‌ಬಾಗ್‌ಗೆ ಭೇಟಿ ನೀಡಿದವರ ಸಂಖ್ಯೆ ದ್ವಿಗುಣವಾಗಿತ್ತು. ಈವರೆಗೆ ಮಕ್ಕಳು ದೊಡ್ಡವರು ಸೇರಿ 8.5 ಲಕ್ಷ ಜನ ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ್ದು, 2.85 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.ಸೋಮವಾರ ಕೊನೆಯ ದಿನವಾಗಿದ್ದು, ಜನರಿಗೆ ಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶವಿದ್ದು, ಸೋಮವಾರ ಸಂಜೆ ತೆರೆ ಬೀಳಲಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + 10 =
Remember me
