ಬೆಂಗಳೂರು:ರಾಜ್ಯದಲ್ಲಿ ಸ್ಥಿರವಾದ ಸರ್ಕಾರವಿದ್ದು, ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಹಾಗಾಗಿ ದಲಿತ ಸಿಎಂ ವಿಚಾರ ಈಗ ಅಪ್ರಸ್ತುತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಆ ವಿಷಯದ ಬಗ್ಗೆ ಚರ್ಚೆ ಮಾಡದೆ ಇರುವುದೇ ಸೂಕ್ತ ಎಂದರು.
ಲೋಕಸಭೆ ಚುನಾವಣೆಯಲ್ಲಿ ನಾವು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಲೋಕಸಭೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನಿಸಬೇಕು. ಕಾಂಗ್ರೆಸ್‌ಗೆ ಹೆಚ್ಚು ಸೀಟು ಬರಬೇಕು. ಅದಕ್ಕಾಗಿ ಎಲ್ಲರೂ ಪ್ರಯತ್ನ ಮಾಡಬೇಕು. ಟಿಕೆಟ್ ಆಕಾಂಕ್ಷಿಗಳಾಗಿರುವ ಕೆಲವರಲ್ಲಿ ಸ್ವಲ್ಪ ಅಸಮಾಧಾನ ಇರುತ್ತದೆ. ಅದೆಲ್ಲ ಸರಿಮಾಡಿಕೊಂಡು ಹೋಗಬೇಕು ಎಂದು ತಿಳಿಸಿದರು.
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಕುರಿತ ಪ್ರಶ್ನೆಗೆ, ಒಂದೊಂದು ರೀತಿಯಲ್ಲಿ ಮಾಹಿತಿಗಳು ಸಿಗುತ್ತಿವೆ. ಎನ್‌ಐಎ ತನಿಖೆ ತೀವ್ರ ಗತಿಯಲ್ಲಿ ನಡೆದಿದೆ. ಸಿಸಿಬಿಯವರೂ ಕೂಡ ಸಪೋರ್ಟ್ ಮಾಡುತ್ತಿದ್ದಾರೆ. ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗೆ, ಖರ್ಗೆಯವರ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ. ಅಂತಿಮವಾಗಿ ಅವರೇ ತೀರ್ಮಾನ ಮಾಡಬೇಕು. ಎಐಸಿಸಿ ಅಧ್ಯಕ್ಷರಿದ್ದು, ಅವರೇ ತೀರ್ಮಾನ ಮಾಡುತ್ತಾರೆ. ಅವರ ಸ್ಪರ್ಧೆ ಬಗ್ಗೆ ನಾವು ಹೇಳಲು ಆಗುವುದಿಲ್ಲ ಎಂದು ಡಾ.ಪರಮೇಶ್ವರ ಪ್ರತಿಕ್ರಿಯಿಸಿದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:3 × 5 =
Remember me
