ಬೆಂಗಳೂರು: ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಪಕ್ಷದ ಪದಾಧಿಕಾರಿಗಳಿಗೆ ಮಹತ್ವದ ಟಾರ್ಗೆಟ್​ ನೀಡಿದ್ದಾರೆ.ಮುಂಬರುವ ಲೋಕಸಭೆ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುವಂತೆ ಸೂಚನೆ ನೀಡಿರುವ ಅವರು ವಿವಿಧ ಗುರಿ ನೀಡಿದ್ದಾರೆ. ಅವುಗಳೆಂದರೆ,1. ಗೃಹಲಕ್ಷ್ಮಿ ಯೋಜನೆ ಜಾರಿ ವಿಚಾರದಲ್ಲಿ ಪ್ರಜಾಪ್ರತಿನಿಧಿಗೆ ಅವಕಾಶ ಮಾಡಿಕೊಟ್ಟಿದ್ದೆವು. ಶೇ.80ರಷ್ಟು ಮಂದಿ ಈ ಅವಕಾಶ ಕೈಚೆಲ್ಲಿದ್ದಾರೆ. ನೀವು ನಿಮ್ಮ ಬ್ಲಾಕ್ ಮಟ್ಟದಲ್ಲಿ ಜನರಿಗೆ ಯೋಜನೆ ತಲುಪಿದೆಯಾ ಇಲ್ಲವೇ ಎಂದು ಪರಿಶೀಲಿಸಿ ಜನರ ಸಂಪರ್ಕ ಹೊಂದಬೇಕು.2. ಈ ತಿಂಗಳಾತ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮ ಮಾಡಲಿದ್ದು, ಪ್ರತಿಜ್ಞಾ ದಿನ ಕಾರ್ಯಕ್ರಮ ಮಾದರಿಯಲ್ಲಿ ಪಂಚಾಯ್ತಿ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ನೀವು ಈ ಕಾರ್ಯಕ್ರಮದಲ್ಲಿ ಜನರಿಗೆ ಅರಿವು ಮೂಡಿಸಿ ಸಂಘಟನೆ ಮಾಡಬೇಕು.3. ಮುಂದಿನ ಸವಾಲು ಜಿಲ್ಲಾ, ತಾಲೂಕು ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆ. ನಾವು ಯಾವುದೇ ಕ್ಷಣದಲ್ಲಿ ಚುನಾವಣೆ ಬಂದರೂ ಎದುರಿಸಲು ಸಿದ್ಧರಿರಬೇಕು. ನಿಮ್ಮ ವಾರ್ಡ್ ಹಾಗೂ ಬ್ಲಾಕ್‌ಗಳಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು.4. ವಿಧಾನಸಭೆ ಚುನಾವಣೆ ಮುನ್ನ ನಾವು ಹೇಗೆ ಬೂತ್ ಮಟ್ಟದಲ್ಲಿ ಬಿಜೆಪಿ ಹಾಗೂ ದಳವನ್ನು ಸೋಲಿಸಲು ಶ್ರಮಿಸಿದೆವೋ ಅದೇ ರೀತಿ ಸರ್ಕಾರದ ನೆರವು ಪಡೆದು ಪಕ್ಷ ಸಂಘಟನೆ ಮಾಡಬೇಕು. ಲೋಕಸಭೆ ಚುನಾವಣೆಯಲ್ಲಿ ಮತಪ್ರಮಾಣ ಹೆಚ್ಚಳ ಮಾಡಿಕೊಳ್ಳಬೇಕು.5. ಪ್ರತಿ ಬ್ಲಾಕ್ ನಲ್ಲಿ ಪಕ್ಷದ ಕಚೇರಿ ಇರಲೇಬೇಕು. ಈ ವಿಚಾರದಲ್ಲಿ ರಾಜಿ ಇಲ್ಲ. ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ. ನೀವು ಜಮೀನು ಖರೀದಿ ಮಾಡುತ್ತೀರೋ ಏನು ಮಾಡುತ್ತೀರೋ ಗೊತ್ತಿಲ್ಲ ಎಂಧು ಡಿ.ಕೆ.ಶಿವಕುಮಾರ್​ ಸೂಚಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen + 18 =
Remember me
