ಬೆಂಗಳೂರು:ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್​ಸಿ) 2011ನೇ ಸಾಲಿನ ನೇಮಕಾತಿ ಹಗರಣ ಮರುಜೀವ ಪಡೆದಿದ್ದು, ಆಯೋಗದ ಅಂದಿನ ಅಧ್ಯಕ್ಷರು ಹಾಗೂ ಸದಸ್ಯರ ವಿರುದ್ಧ ಪ್ರಾಸಿಕ್ಯೂಷನ್ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮರು ಚಾಲನೆ ಕೊಟ್ಟಿದೆ.
362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಅಕ್ರಮ ನೇಮಕಾತಿ ಸಂಬಂಧ ಅಂದಿನ ಅಧ್ಯಕ್ಷ ಗೋನಾಳ್ ಭೀಮಪ್ಪ, ಸದಸ್ಯೆ ಮಂಗಳಾ ಶ್ರೀಧರ್ ಮತ್ತಿತರರ ವಿರುದ್ಧ ಆರೋಪ ಕೇಳಿ ಬಂದಿತ್ತು. ಆರೋಪಿತರನ್ನು ವಿಚಾರಣೆಗೆ ಒಳಪಡಿಸುವ ಪ್ರಸ್ತಾವನೆ ಬಗ್ಗೆ ಪರಿಶೀಲನೆ ನಡೆಸಿ ಶಿಫಾರಸು ಮಾಡಲು ಸೆ.16ರಂದು ಉಪಸಮಿತಿ ರಚಿಸಲಾಗಿದ್ದು, ಅವ್ಯವಹಾರದಲ್ಲಿ ಭಾಗಿಯಾಗಿದ್ದವರಿಗೆ ಮತ್ತೆ ನಡುಕ ಶುರುವಾಗಿದೆ. ನೇಮಕಾತಿಯಲ್ಲಿ ಅಕ್ರಮ ನಡೆದಿರುವ ವಿಚಾರ ಸಿಐಡಿ ತನಿಖೆಯಲ್ಲಿ ಬಹಿರಂಗಗೊಂಡಿತ್ತಲ್ಲದೆ, ಹೈಕೋರ್ಟ್ ಸಹ ಅವ್ಯವಹಾರ ಸಾಬೀತಾದ ಹಿನ್ನೆಲೆಯಲ್ಲಿ ಇಡೀ ನೇಮಕಾತಿಯನ್ನೇ ರದ್ದುಪಡಿಸಿತ್ತು. ಆದರೆ, ಅಕ್ರಮ ಎಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆ ಮಾತ್ರ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಇದರಿಂದ, ಆರೋಪಿತರ ವಿರುದ್ಧ ಪ್ರಾಸಿಕ್ಯೂಷನ್ ನಡೆಸುವ ವಿಚಾರವನ್ನು ಸೆ.15ರಂದು ನಡೆದ ಸಚಿವ ಸಂಪುಟದಲ್ಲಿ ಮಂಡಿಸಿ ರ್ಚಚಿಸಲಾಗಿತ್ತು.
ಇನ್ನು, ನೇಮಕಾತಿ ಪ್ರಕ್ರಿಯೆ ರದ್ದುಕೊಂಡ ಕಾರಣ 362 ಹುದ್ದೆಗಳು ಭರ್ತಿಯಾಗದೆ ಹಾಗೇ ಉಳಿದಿದ್ದು, ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ವಿಚಾರವನ್ನು ಮರುಪರಿಶೀಲಿಸುವ ಕುರಿತು ಅಧ್ಯಕ್ಷರು ಹಾಗೂ ಸದಸ್ಯರ ವಿರುದ್ಧದ ಅಭಿಯೋಜನಾ ಮಂಜೂರಾತಿ ವಿಷಯ ಇತ್ಯರ್ಥಗೊಂಡ ಬಳಿಕ ಪರಿಶೀಲಿಸಲು ಸರ್ಕಾರ ನಿರ್ಧರಿಸಿದೆ.
ಅವಕಾಶ ವಂಚಿತರಿಂದ ಸರ್ಕಾರಕ್ಕೆ ಪತ್ರ:2011ರಲ್ಲಿ ಪೂರ್ವಭಾವಿ ಪರೀಕ್ಷೆಗಳನ್ನು ಎದುರಿಸಿದ್ದ ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿ 362 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕೆಂದು ಮನವಿ ಮಾಡಿ ಕೆಲ ಅಭ್ಯರ್ಥಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹಿಂದಿನ ಸರ್ಕಾರಗಳು ಹಾಗೂ ಕೆಪಿಎಸ್​ಸಿ ಮಾಡಿದ ತಪ್ಪಿನಿಂದ ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು 8 ವರ್ಷ ವಯಸ್ಸಿನ ಮಿತಿ ಕಳೆದುಕೊಳ್ಳುವ ಜತೆಗೆ ನಿರುದ್ಯೋಗಿಗಳಾಗಿಯೇ ಉಳಿದಿದ್ದಾರೆ ಎಂದು ನೋವು ತೋಡಿಕೊಂಡಿದ್ದಾರೆ.
ಸರ್ಕಾರದ ಆದೇಶ ರದ್ದುಪಡಿಸಿದ್ದ ಕೆಎಟಿ, ಆಯ್ಕೆ ಆಗಿದ್ದ ಎಲ್ಲ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಆದೇಶಿಸಿತ್ತು. ಕೆಎಟಿ ಆದೇಶ ಪ್ರಶ್ನಿಸಿ ಆರ್.ರೇಣುಕಾಂಬಿಕೆ ಮತ್ತಿತರ ಉದ್ಯೋಗ ವಂಚಿತ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಕೆಎಟಿ ಆದೇಶ ರದ್ದುಪಡಿಸಿತ್ತು. ಪುನಃ ಹೈಕೋರ್ಟ್ ಆದೇಶ ಪ್ರಶ್ನಿಸಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ, ಮರುಪರಿಶೀಲನೆಗೆ ಮತ್ತೆ ಹೈಕೋರ್ಟ್​ಗೆ ಸೂಚಿಸಿತ್ತು. 2018ರ ಜು.13ರಂದು ಹೈಕೋರ್ಟ್ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು.
2011ರ ನ.3ರಂದು 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಗಾಗಿ ಅರ್ಜಿ ಆಹ್ವಾನಿಸಿದ್ದ ಕೆಪಿಎಸ್​ಸಿ, 2013ರ ಜ.6ರಂದು ಪರಿಕ್ಷೆ ನಡೆಸಿ, ಮಾ.16ರಂದು ಫಲಿತಾಂಶ ಪ್ರಕಟಿಸಿತ್ತು. 2014ರ ಮಾ.22ರಂದು ಸಂಭಾವ್ಯ ಪಟ್ಟಿಯನ್ನು ಗೆಜೆಟ್​ನಲ್ಲಿ ಪ್ರಕಟಿಸಿ ಸರ್ಕಾರಕ್ಕೆ ಕಳುಹಿಸಿತ್ತು. ಈ ಮಧ್ಯೆ, ನೇಮಕಾತಿ ಪ್ರಕಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಉದ್ಯೋಗ ವಂಚಿತರಾಗಿದ್ದ ಡಾ.ಮೈತ್ರಿ ಆರೋಪಿಸಿದ್ದರು. ಪ್ರಕರಣದ ತನಿಖೆಯನ್ನು 2014ರ ಜೂ.27ರಂದು ಸರ್ಕಾರ ಸಿಐಡಿಗೆ ವಹಿಸಿತ್ತು. ನೇಮಕಾತಿಯಲ್ಲಿ ಅಕ್ರಮ, ಅವ್ಯವಹಾರ, ಸ್ವಜನಪಕ್ಷಪಾತ ಹಾಗೂ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ವರದಿ ನೀಡಿತ್ತು. ಇದನ್ನು ಆಧರಿಸಿ ಸರ್ಕಾರ ಆ.8ರಂದು 362 ಹುದ್ದೆಗಳ ಆಯ್ಕೆಪಟ್ಟಿ ಹಿಂಪಡೆದಿತ್ತು.
ಶಾಲೆ ಆರಂಭದ ಬಗ್ಗೆ ಪಾಲಕರ ಗೊಂದಲ ಪರಿಹರಿಸಿದ ಶಿಕ್ಷಣ ಸಚಿವ ಎಸ್​.ಸುರೇಶ್​ಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
