ಹಾವೇರಿ: ರಾಜ್ಯ ಕಾಂಗ್ರೆಸ್​ನಲ್ಲಿ ನಾಯಕತ್ವದ ಗೊಂದಲವಿದ್ದು, ಒಂದು ವರ್ಷದಲ್ಲಿ ವಿಧಾನಸಭಾ ಚುನಾವಣೆ ನಡೆದರು ಆಶ್ಚರ್ಯ ಪಡಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಸಾವು, ಓರ್ವ ಅಧಿಕಾರಿಗೆ ಗಾಯ
ಹಾವೇರಿ ಜಿಲ್ಲೆಯ ಮಾಸೂರಿನಲ್ಲಿ ಇಂದು ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನರು ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಅದನ್ನು ತೋರಿಸಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಶಾಸಕರು ಹತಾಶರಾಗಿದ್ದಾರೆ. ಮುಖ್ಯಮಂತ್ರಿ ಬಳಿ ಹೋದರೆ ಅವರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ, ಅವರಿಗೆ ಜನರ ಬಳಿ ಹೋಗಲು ಆಗುತ್ತಿಲ್ಲ. ರಾಜಕಾರಣ ಮತ್ತು ಜನರ ಕಾರಣದಿಂದ ಸರ್ಕಾರದ ಆಯುಷ್ಯ ಬಹಳ ಕಡಿಮೆ ಇದೆ. ಒಂದು ವರ್ಷದಲ್ಲಿ ವಿಧಾನಸಭೆ‌ ಚುನಾವಣೆ ನಡೆದು ಹೊಸ ಸರ್ಕಾರ ಬರಲಿದೆ. ಈ ಬಾರಿ ಸರ್ಕಾರವನ್ನು ಜನರೇ ಆಪರೇಷನ್ ಮಾಡುತ್ತಾರೆ ಎಂದು ಭವಿಷ್ಯ ನುಡಿದ್ದಾರೆ.
ಕೃತಜ್ಞತಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಹಾಗೂ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ, ಶಿವರಾಜ‌ ಸಜ್ಜನರ, ಇತರರಿದ್ದರು.
ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜು.3 ರವರೆಗೆ ವಿಸ್ತರಿಸಿದ ಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
