ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾದ ಸಂದರ್ಭದಲ್ಲಿ ಬಂದು ನಿಂತಿದ್ದಾರೆ. ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.
ಮಾಜಿ ಸಚಿವ ರಾಮಚಂದ್ರೇಗೌಡ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ ಪಕ್ಷದ ಸದಸ್ಯತ್ವ ನೀಡಿದ ನಂತರ ಸುದ್ದಿಗಾರರ ಜತೆಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಬೆದರಿಕೆಗಳು, ಬೆದರಿಕೆ ತಂತ್ರಗಳು, ಕುತಂತ್ರ ಇದ್ಯಾವುದಕ್ಕೂ ಕೂಡ ಭಯ ಪಡುವ ಪ್ರಶ್ನೆಯೇ ಇಲ್ಲವೆಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಳೆದ ಕೆಲವು ದಿನಗಳಿಂದ ಹೋರಾಟ ಮಾಡುತ್ತ ಬಂದಿದೆ. ಸಿಎಂ, ಸಚಿವರ ಪರಿಸ್ಥಿತಿ ಸಹಜವಾಗಿಯೇ ನಮಗೆ ಅರ್ಥವಾಗುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಿದ್ದು, ಅದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿಯೇ ಪಿತೂರಿ ನಡೆದಿದೆ. ಸಂದರ್ಭ ಬಂದಾಗ ಅದಕ್ಕೆ ಸೂಕ್ತ ಉತ್ತರ ಕೊಡಲಿದ್ದೇವೆ ಎಂದು ಸೆಡ್ಡು ಹೊಡೆದರು.
ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಭಾಗಕ್ಕೆ ನೀರು ಕೊಡಲು ಉದ್ದೇಶಿತ ಎತ್ತಿನಹೊಳೆ ಯೋಜನೆಗೆ ದಶಕಗಳೇ ಆಗಿವೆ. ಇದರ ಆರಂಭದಲ್ಲಿ ಸುಮಾರು 8,500 ಕೋಟಿ ಯೋಜನಾ ವೆಚ್ಚ ಇದ್ದುದು ಈಗ ಅದು 20-22,500 ಕೋಟಿಗೆ ಏರಿದೆ. ಈ ಯೋಜನೆಗೆ ಚಾಲನೆ ನೀಡಿದ್ದು ಸಂತೋಷ; ಆದರೆ, ಅದರ ಮೂಲ ಉದ್ದೇಶ ಈಡೇರಲಿದೆಯೇ ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ ಎಂದು ಸಂಶಯ ವ್ಯಕ್ತಪಡಿಸಿದರು.
ಸಿಎಂ, ಡಿಸಿಎಂ ಕ್ರೆಡಿಟ್ ವಾರ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಹೋಗುವ ಮುಂಚಿತವಾಗಿಯೇ ನಿನ್ನೆ ದಿನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪೂಜೆ ಪುನಸ್ಕಾರ ಮಾಡಿದ್ದನ್ನು ಗಮನಿಸಿದ್ದೇನೆ. ಮುಖ್ಯಮಂತ್ರಿ ಸ್ಥಾನ ಅಲುಗಾಡುವ ಸಂದರ್ಭ ಇದಾಗಿದೆ.
ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. ಡಿ.ಕೆ. ಶಿವಕುಮಾರ್ ಕೂಡ ಆ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಇರುವವರು ಎಂದು ವಿಶ್ಲೇಷಿಸಿದರು. ಕ್ರೆಡಿಟ್ ತೆಗೆದುಕೊಳ್ಳುವುದು ದೊಡ್ಡ ವಿಚಾರವಲ್ಲ; ಎತ್ತಿನಹೊಳೆ ಯೋಜನೆ ಆ ಭಾಗದ ಜನರಿಗೆ ಅನುಕೂಲ ಆಗಬೇಕು. ಅದರಲ್ಲಿ ಪ್ರಾಮಾಣಿಕತೆ ತೋರಿಸಿದರೆ ಸಾಕು ಎಂದು ಆಶಿಸಿದರು.
ಗೌರಿ ಗಣೇಶ ಹಬ್ಬದ ಈ ಸಂದರ್ಭದಲ್ಲಿ ನಮ್ಮೆಲ್ಲರ ಹಿರಿಯರಾದ ರಾಮಚಂದ್ರೇಗೌಡರ ಸದಸ್ಯತ್ವ ನೋಂದಣಿ ಮಾಡಿದ್ದೇವೆ. ರಾಮಚಂದ್ರೇಗೌಡರು ಬಿ.ಎಸ್.ಯಡಿಯೂರಪ್ಪ ಅವರ ಜತೆ ಜತೆಗೆ ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿದವರು; ಬಿಜೆಪಿಗೆ ಭದ್ರ ಬುನಾದಿ ಹಾಕಿದವರಲ್ಲಿ ರಾಮಚಂದ್ರೇಗೌಡರು ಕೂಡ ಒಬ್ಬರು. ಅವರ ಆಶೀರ್ವಾದ ಪಡೆದು ಸದಸ್ಯತ್ವ ನೋಂದಣಿ ಮಾಡಿದ್ದೇವೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
