ಬೆಂಗಳೂರುಸಾರ್ವಜನಿಕರು ಕಡತಗಳ ಹಿಂದೆ ಸುತ್ತುವ ಕಾರ್ಯಕ್ಕೆ ತೆರೆ ಎಳೆಯಿರಿ. ತ್ವರಿತಗತಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರ ಅಲೆದಾಟ ತಪ್ಪಿಸಬೇಕು. ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ಕಡತ ವಿಲೇವಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸದಿದ್ದರೆ, ಇಲಾಖೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.
ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಮಂಗಳವಾರ ತಾಂತ್ರಿಕ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ವಿಶ್ವವಿದ್ಯಾಲಯದ ಕುಲಸಚಿವರ ಸಭೆಯಲ್ಲಿ ಅವರು ಮಾತನಾಡಿದರು.
ಸಿಬ್ಬಂದಿ ಮತ್ತು ಅಧಿಕಾರಿಗಳು ಜಡತ್ವ ಬಿಟ್ಟು ಹೊಣೆಗಾರಿಕೆ, ಪಾರದರ್ಶಕತೆ, ಉತ್ತರದಾಯಿತ್ವದಲ್ಲಿ ಕರ್ತವ್ಯ ನಿರ್ವಹಿಸಬೇಕು. ಸಚಿವರ ಕಚೇರಿಯಿಂದ ಕಡತಗಳು ಸಚಿವಾಲಯಕ್ಕೆ ಬಂದರೂ ಅಲ್ಲಿಂದ ಆದೇಶ ಹೊರಡಿಸಲು ತಡ ಮಾಡುವ ಅವಶ್ಯಕತೆ ಏನಿದೇ? ಎಂದು ಪ್ರಶ್ನಿಸಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಜಗದೀಶ್ ಸೇರಿ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − six =
Remember me
