ಬೆಂಗಳೂರು:ಕೃಷಿ ಭೂಮಿಯನ್ನು ವಸತಿ ಬಳಕೆಗೆ ಪರಿವರ್ತಿಸುವ ಕುರಿತ ಗೊಂದಲ ನಿವಾರಣೆಗೆ ಮುಂದಾಗಿರುವ ಸರ್ಕಾರ, ರಾಜ್ಯದ ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಕ್ಕೂ ಏಕರೂಪ ನಿಯಮ ಜಾರಿಗೆ ನಿರ್ಧರಿಸಿದೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಶಾಸಕ ರಘುಪತಿ ಭಟ್ ಕೇಳಿದ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಪರವಾಗಿ ಉತ್ತರಿಸಿದ ಸಚಿವ ಶಿವರಾಂ ಹೆಬ್ಬಾರ್ ಈ ಕುರಿತು ವಿವರಣೆ ನೀಡಿದರು.
ಇದನ್ನೂ ಓದಿ:ಸಿಡಿ ಕೇಸ್​ನ​ ಆರೋಪಿ ಸಹೋದರ ನಾಪತ್ತೆ: ಎಸ್​ಐಟಿಗೆ ಹೈಕೋರ್ಟ್​ ನೋಟಿಸ್​
ಮಂಗಳೂರು, ಶಿವಮೊಗ್ಗ ಸೇರಿ ಇನ್ನಿತರ ಕಡೆಗಳಲ್ಲಿ 10 ಸೆಂಟ್ (4,355 ಚದರ ಅಡಿ) ವಿಸ್ತೀರ್ಣದ ಕೃಷಿ ಭೂಮಿಯನ್ನು ವಸತಿ ಬಳಕೆಗೆ ಪರಿವರ್ತಿಸುವ ಅಧಿಕಾರ ಸ್ಥಳೀಯ ಅಭಿವೃದ್ಧಿ ಪ್ರಾಧಿಕಾರಕ್ಕಿದೆ. ಆದರೆ, ಹಲವು ಜಿಲ್ಲೆಗಳಲ್ಲಿ ಈ ವ್ಯವಸ್ಥೆಯಿಲ್ಲ. ಹೀಗಾಗಿ ಪ್ರಾಧಿಕಾರಗಳು ಕೃಷಿ ಜಾಗ ವಸತಿ ಉದ್ದೇಶಕ್ಕೆ ಪರವರ್ತನೆ ಮಾಡುವ ಕುರಿತು ನಗರಾಭಿವೃದ್ಧಿ ಇಲಾಖೆಗೆ ಕಡತ ಸಲ್ಲಿಸಿ ಅನುಮತಿ ಪಡೆಯಬೇಕಿದೆ. ಅದರ ಪರಿಣಾಮ ರಾಜ್ಯದಲ್ಲಿ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಹಾಗೆಯೇ ಉಳಿದಿವೆ. ಈ ಸಮಸ್ಯೆ ನಿವಾರಿಸಲು ಹೊಸ ನಿಯಮ ಜಾರಿಗೆ ತರಲಾಗುವುದು ಎಂದು ಹೇಳಿದರು.
ಏಕರೂಪ ನಿಯಮ: ಕೃಷಿ ಭೂಮಿ ಪರಿವರ್ತನೆಗೆ ಸಂಬಂಧಿಸಿದಂತೆ ಅಧಿಕಾರ ವಿಕೇಂದ್ರೀಕರಣ ಮಾಡುವ ಅಗತ್ಯವಿದೆ. ಈ ಕುರಿತು ನಗರಾಭಿವೃದ್ಧಿ ಇಲಾಖೆ ಜತೆಗೆ ಮಾತುಕತೆ ನಡೆಸಲಾಗಿದೆ. ಅದೇ ರೀತಿ ನಗರಾಭಿವೃದ್ಧಿ ಸಚಿವರು ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಕ್ಕೂ ಏಕರೂಪ ನಿಯಮ ಜಾರಿಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅದರಂತೆ ಶೀಘ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಸಚಿವರು ನಗರಾಭಿವೃದ್ಧಿ ಚರ್ಚಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಇದನ್ನೂ ಓದಿ:ಶಾಲಾ ಕಾಲೇಜುಗಳು ಬಂದ್, 11 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ
ಆಡಳಿತ ಪಕ್ಷದ ಶಾಸಕರಿಂದ ಧರಣಿ ಮಾತು: ಅದಕ್ಕೂ ಮುನ್ನ ಮಾತನಾಡಿದ ಶಾಸಕ ರಘುಪತಿ ಭಟ್, ಕಳೆದ ಎರಡು ವರ್ಷಗಳಿಂದ 10 ಸೆಂಟ್ ಕೃಷಿ ಭೂಮಿಯ ಪರಿವರ್ತನೆಗೆ ಮನವಿ ಸಲ್ಲಿಸಲಾಗುತ್ತಿದೆ. ಅಲ್ಲದೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಈ ಕುರಿತು ನಿರ್ಣಯ ತೆಗೆದುಕೊಂಡು ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಲಾಗಿದೆ. ಆದರೂ, ಅದರ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಆಡಳಿತ ಪಕ್ಷದ ಶಾಸಕನಾಗಿ ಸದನದಲ್ಲಿ ಧರಣಿ ನಡೆಸುವುದು ಒಳ್ಳೆಯದಲ್ಲ ಎಂದು ಸುಮ್ಮನಿದ್ದೇನೆ. ಭೂ ಪರಿವರ್ತನೆ ಮಾಡಲಾಗುವುದಿಲ್ಲ ಎಂದು ತಿಳಿಸಿದರೆ, ಮುಂದಿನ ಹೋರಾಟ ಮಾಡುತ್ತೇನೆ ಎಂದು ಎಚ್ಚರಿಸಿದರು.
ಅದಕ್ಕೆ ಬೆಂಬಲ ಸೂಚಿಸಿದ ಮಾತನಾಡಿದ ಬಿಜೆಪಿಯ ಕೆ.ಜಿ.ಬೋಪಯ್ಯ, ಅಭಯ್ ಪಾಟೀಲ್, ಭೂಪರಿವರ್ತನೆ ಎಂಬುದು ದೊಡ್ಡ ದಂಧೆಯಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ 2 ಸಾವಿರಕ್ಕೂ ಹೆಚ್ಚಿನ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. (ವಿಜಯವಾಣಿ)
ಕಾಮೆಡ್-ಕೆ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ

ವಿಧಾನಸಭೆಯಲ್ಲಿ ಹಾಸ್ಯದ ಹೊಳೆ ಹರಿಸಿದ ಸಿದ್ದು ಬಟ್ಟೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
