ಬೆಂಗಳೂರು:ಕರಾವಳಿ, ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಂದಿನ ಐದು ದಿನ ಮಳೆ ಆರ್ಭಟ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆ.27ರಿಂದ ಆ.31ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಕೊಟ್ಟಿದೆ. ಬೆಳಗಾವಿಯಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಇರಲಿದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಗುಡುಗು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಆ.28ರಿಂದ ಸಂಪೂರ್ಣವಾಗಿ ಮಳೆ ಕ್ಷೀಣವಾಗಲಿದೆ. ಕೆಲ ಜಿಲ್ಲೆಗಳಲ್ಲಿ ಮಾತ್ರವೇ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಶರಾವತಿ ನದಿಗೆ ನೀರು: ಲಿಂಗನಮಕ್ಕಿ ಜಲಾಶಯದಿಂದ ಸೋಮವಾರ ಐದು ರೇಡಿಯಲ್ ಗೇಟ್ ಮೂಲಕ 10,800 ಕ್ಯೂಸೆಕ್ ನೀರನ್ನು ಶರಾವತಿ ನದಿಗೆ ಬಿಡಲಾಗಿದೆ. 1,819 ಅಡಿಗಳ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದ ಪ್ರಸ್ತುತ ಮಟ್ಟ 1817.50 ಅಡಿ. ಆಗಸ್ಟ್ ಕೊನೆಯವರೆಗೂ ಇದೇ ಮಟ್ಟವನ್ನು ಕಾಯ್ದಿರಿಸಿಕೊಳ್ಳಲಾಗುವುದು ಎಂದು ಕೆಪಿಸಿ ಕಾರ್ಯಪಾಲಕ ಅಭಿಯಂತ ಆರ್.ಶಿವಕುಮಾರ್ ತಿಳಿಸಿದರು. ಅಣೆಕಟ್ಟೆಯ ಸ್ಲೂ್ಯಸ್ ಗೇಟ್ ಹಾಗೂ ಪೆನ್​ಸ್ಟಾಕ್ ಮೂಲಕ ವಿದ್ಯುತ್ ಉತ್ಪಾದನೆಗಾಗಿ ಸುಮಾರು 7 ಸಾವಿರ ಕ್ಯೂ. ನೀರನ್ನು ನಿತ್ಯವೂ ಅತ್ಯಂತ ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳಲಾಗುತ್ತಿದೆ. ಮಳೆ ಹೀಗೆಯೇ ಆದರೆ ಉಳಿದ ಹೆಚ್ಚುವರಿ ನೀರನ್ನು ನದಿಗೆ ಬಿಡುವುದು ಅನಿವಾರ್ಯವಾಗಲಿದೆ.
ಢವಳೇಶ್ವರ ಸೇತುವೆ ಜಲಾವೃತ
ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಮತ್ತೆ ಮಳೆ ಅಬ್ಬರ ಮುಂದುವರಿದಿದ್ದರಿಂದ ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿಗೆ 20 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ರಬಕವಿ-ಬನಹಟ್ಟಿ ತಾಲೂಕಿನ ಢವಳೇಶ್ವರ ಸೇತುವೆ ಜಲಾವೃತಗೊಂಡು ಸಂಪರ್ಕ ಬಂದ್ ಆಗಿದೆ.
ನಮ್ಮ ನ್ಯೂನ್ಯತೆಗಳು ಬೆತ್ತಲಾಗಿದ್ದೇ ಇವರಿಂದ… ಟೀಮ್ ಇಂಡಿಯಾ ವಿರುದ್ಧ ಕಿಡಿಕಾರಿದ ಪಾಕ್ ಮಾಜಿ ಕ್ರಿಕೆಟಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
