ಬೆಂಗಳೂರು:ಕರ್ನಾಟಕದಲ್ಲಿ ಈವರೆಗೆ ಕರೊನಾ ವೈರಸ್‌ ಸೋಂಕಿತರ ಸಂಖ್ಯೆ 146 ತಲುಪಿದೆ. ನಾಲ್ವರು ಮೃತಪಟ್ಟಿದ್ದು, 11 ಮಂದಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.
ನಿನ್ನೆ (ಏ.4)ರ ಸಂಜೆ 5 ಗಂಟೆಯಿಂದ ಇಂದು ಬೆಳಗ್ಗೆ 8 ಗಂಟೆಯ ಒಳಗೆ ಒಬ್ಬ ಪುರುಷ ಹಾಗೂ ಒಬ್ಬ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಇವರು ಕಳೆದ ಮಾರ್ಚ್‌ 22ರಂದು ದುಬೈನಿಂದ ಭಾರತಕ್ಕೆ ಪ್ರಯಾಣಿಸಿದ್ದರು. ಇಬ್ಬರನ್ನೂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ.
ವಲಸೆ ಜನರಲ್ಲಿ ಹಾಗೂ ಗುಂಪಿನಲ್ಲಿ ವಾಸಿಸುತ್ತಿರುವವರಲ್ಲಿ ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾದರೆ ಅದನ್ನು ಶೀಘ್ರದಲ್ಲಿ ಪತ್ತೆ ಹಚ್ಚುವ ಸಂಬಂಧ ‘ಆ್ಯಂಟಿಬಾಡಿ’ ಆಧಾರಿತ ರಕ್ತ ಪರೀಕ್ಷೆಯನ್ನು ಪ್ರಾರಂಭಿಸುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು ಸಲಹೆ ನೀಡಿದೆ.
ಕರೊನಾ ವೈರಸ್‌ ಕುರಿತಂತೆ ಮಾಹಿತಿ ಬೇಕಿದ್ದರೆ ಉಚಿತ ಆರೋಗ್ಯ ಸಹಾಯವಾಣಿ 104 ಅಥವಾ 9745697456 ಸಂಪರ್ಕಿಸಬಹುದು. ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ.http://www.karnataka.gov.inಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 9 =
Remember me
