ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ  ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಆದೇಶವನ್ನೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿ, ಯಾವುದೇ ಕಾರಣಕ್ಕೂ ಈ ಆದೇಶ ಪಾಲಿಸಲೇಬಾರದು ಎಂದು ರಾಜ್ಯ ಸರ್ಕಾರಕ್ಕೆ ಒತ್ತಡ ಹೇರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವೊಂದರಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಿಡಬ್ಲುಆರ್ ಸಿ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಇದೊಂದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ ಮಾಡಿಕೊಡಬೇಕು. ಈ ಆಜ್ಞೆ ಬರುವ ಮುಂಚೆ ನೀರು ಬಿಡಲು ಪ್ರಾರಂಭ ಮಾಡಿರುವ ರಾಜ್ಯ ಸರ್ಕಾರ ತನ್ನ ಕೈಯನ್ನು ತಾನೇ ಕಟ್ಟಿಸಿಕೊಂಡಿದೆ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಕಾನೂನಾತ್ಮಕ ಹೋರಾಟ ಮಾಡಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 14 =
Remember me
