ಬೆಂಗಳೂರು:ಆರ್ಥಿಕ ಚಟುವಟಿಕೆಗಳೆಲ್ಲ ಸ್ಥಗಿತಗೊಂಡಿರುವ ಕಾರಣ ಸಾಮಾನ್ಯ ಜನರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಈ ಸಂದರ್ಭದಲ್ಲಿ ಮನೆ ಬಾಡಿಗೆ ಕೊಡುವುದೂ ಹೊರೆಯಾಗುತ್ತಿದೆ. ಹಾಗಾಗಿ ಈ ವಿಚಾರದಲ್ಲಿ ವಿನಾಯಿತಿ ಕೊಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಆರ್ಥಿಕ ಚಟುವಟಿಕೆಗಳೆಲ್ಲ ಸಮಗ್ರವಾಗಿ ಸ್ಥಗಿತಗೊಂಡ ಈ ದಿನಗಳಲ್ಲಿ ಎಂದಿನಂತೆ ಪ್ರತಿ ತಿಂಗಳು ಮನೆ ಬಾಡಿಗೆಯನ್ನು ಕೊಡಲೇಬೇಕು ಎಂದು ಮಾಲೀಕರು ಪಟ್ಟು ಹಿಡಿದರೆ ಬಾಡಿಗೆದಾರನಿಗೆ ಹೊರೆಯಾಗುತ್ತದೆ. ಬೇರೆ ಮನೆ ಹುಡುಕಿಕೊಂಡು ಹೋಗುವ ಪರಿಸ್ಥಿತಿಯೂ ಸದ್ಯಕ್ಕೆ ಇಲ್ಲ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಬಾಡಿಗೆ ವಿನಾಯಿತಿ ಯೋಜನೆ ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ.
ದೆಹಲಿ, ಮುಂಬೈ, ಬೆಂಗಳೂರಿನಂತಹ ನಗರಗಳಲ್ಲಿ ವೃತ್ತಿ ಮಾಡುತ್ತಿರುವ ಹಾಗೂ ಓದುತ್ತಿರುವ ಅನೇಕ ಜನರ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಮನೆ, ಪಿಜಿ, ಹಾಸ್ಟೆಲ್​ಗಳ ಮಾಲೀಕರು ಎಂದಿನಂತೆ ಬಾಡಿಗೆ ವಸೂಲಿಗೆ ಇಳಿಯದೆ ಉದಾರತೆ ತೋರಬೇಕು. ಹಾಗೇ ಸರ್ಕಾರ ಬಾಡಿಗೆ ಇರುವ ಜನಸಾಮಾನ್ಯನ ಕಷ್ಟಗಳಿಗೆ ಸ್ಪಂದಿಸಬೇಕು ಎಂದಿದ್ದಾರೆ.
ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಅನೇಕ ದೇಶಗಳು ಕರೋನ ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ. ದೆಹಲಿ ಸರ್ಕಾರವೂ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಿಸಿದೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಪ್ರಧಾನಮಂತ್ರಿ ಘೋಷಿಸಬೇಕು ಎಂದು ಮನವಿ ಮಾಡಿಕೊಳ್ಳುವುದಾಗಿ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. (ಏಜೆನ್ಸೀಸ್​)
ಆರ್ಥಿಕ ಚಟುವಟಿಕೆ ಸಮಗ್ರವಾಗಿ ಸ್ಥಗಿತಗೊಂಡ ಈ ದಿನಗಳಲ್ಲಿ ಎಂದಿನಂತೆ ಪ್ರತಿ ತಿಂಗಳು ಮನೆ ಬಾಡಿಗೆಯನ್ನು ಕೊಡಲೇಬೇಕು ಅಂತ ಮಾಲೀಕರು ಪಟ್ಟು ಹಿಡಿದರೆ ಆರ್ಥಿಕ ಹೊರೆಯನ್ನು ತಾಳಲಾರದ ಬಾಡಿಗೆದಾರ ಇನ್ನೊಂದು ಮನೆ ಹುಡುಕಿಕೊಂಡು ಹೋಗುವ ಸ್ಥಿತಿಯೂ ಇಲ್ಲವಾದ್ದರಿಂದ,ಕೇಂದ್ರ ಸರಕಾರ ಈ ಕೂಡಲೇ ಬಾಡಿಗೆ ವಿನಾಯಿತಿ ಯೋಜನೆಯನ್ನು ಘೋಷಿಸಬೇಕು.@PMOIndia
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)April 12, 2020

ದೆಹಲಿ ಮುಂಬಯಿ ಬೆಂಗಳೂರಿನಂತಹ ನಗರಗಳಲ್ಲಿ ವೃತ್ತಿ ಮಾಡುವ ಹಾಗೂ ಇಲ್ಲಿನ ಸಂಸ್ಥೆಗಳಲ್ಲಿ ಓದುತ್ತಿರುವ ಅನೇಕ ಜನರ ಆರ್ಥಿಕ ಸ್ಥಿತಿ ನಾಜೂಕಾಗಿದೆ. ಇಂತಹ ಸಂದರ್ಭದಲ್ಲಿ ಮನೆ, ಪಿಜಿ, ಹಾಸ್ಟೆಲ್ ಮಾಲೀಕರು ಎಂದಿನಂತೆ ಬಾಡಿಗೆ ವಸೂಲಿಗೆ ಇಳಿಯದೆ ಉದಾರತೆ ತೋರಲಿ. ಸರಕಾರ ಬಾಡಿಗೆ ವಿನಾಯಿತಿ ಘೋಷಿಸಿ ಜನಸಾಮಾನ್ಯನ ಕಷ್ಟಗಳಿಗೆ ಸ್ಪಂದಿಸಬೇಕು.2/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)April 12, 2020

ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಅನೇಕ ದೇಶಗಳು ಕರೋನ ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ. ದೆಹಲಿಯ ಸರಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಿಸಿದೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಸನ್ಮಾನ್ಯ ಪ್ರಧಾನಿ ಘೋಷಿಸಲು ಮನವಿ ಮಾಡಿಕೊಳ್ಳುತ್ತೇನೆ.1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)April 12, 2020

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight + three =
Remember me
