ಬೆಂಗಳೂರು:ಪಾದರಾಯನಪುರ ಗಲಭೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಮೃದು ಧೋರಣೆ ತೋರುವ ಪ್ರಶ್ನೆಯೇ ಇಲ್ಲ ಎಂದು ಖಡಕ್​ ಟ್ವೀಟ್ ಮಾಡಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡುತ್ತ ಶಾಸಕ ಜಮೀರ್ ಅಹ್ಮದ್​ ವಿರುದ್ಧ ಕಿಡಿಕಾರಿದ್ದ ಸಿಎಂ ಯಡಿಯೂರಪ್ಪ ಇದೀಗ ಟ್ವೀಟ್ ಮಾಡುವ ಮೂಲಕವೂ ಗುಂಡಾವರ್ತನೆಯನ್ನು ಖಂಡಿಸಿದ್ದಾರೆ. ಹಾಗೇ ಪಾದರಾಯನಪುರ ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡುವುದಾಗಿ ತಿಳಿಸಿದ್ದಾರೆ.
ಪಾದರಾಯನಪುರದಲ್ಲಿ ಗೂಂಡಾವರ್ತನೆ ತೋರಿಸಿದವರ ವಿರುದ್ಧ ಮೃದು ಧೋರಣೆ ತೋರಿಸಲು ಸಾಧ್ಯವೇ ಇಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸರ್ವ ಸ್ವತಂತ್ರರು. ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ ಪ್ರಾಣ ರಕ್ಷಣೆ ಮಾಡಿಕೊಳ್ಳಲು ಪೊಲೀಸರು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಬಹುದು. ಅವರಿಗೆ ಮುಕ್ತ ಅವಕಾಶ ಇದೆ ಎಂದು ಟ್ವಿಟರ್​ನಲ್ಲಿ ಸಿಎಂ ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್​)
ಪಾದರಾಯಣಪುರದಲ್ಲಿ ಗುಂಡಾವರ್ತನೆ ತೋರಿದವರ ವಿಷಯದಲ್ಲಿ ಮೃದು ಧೋರಣೆಯ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸರ್ವತಂತ್ರ ಸ್ವತಂತ್ರರು.ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ, ಪ್ರಾಣ ರಕ್ಷಣೆ ಮಾಡಿಕೊಳ್ಳಲು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ ಇದೆ.
— B.S.Yediyurappa (@BSYBJP)April 20, 2020

VIDEO: ಯಾರ್ರೀ ಅವರು… ಜಮೀರ್​ ಅಹ್ಮದ್​? ಸರ್ಕಾರದ ಕೆಲಸಕ್ಕೆ ಅವರ ಅಪ್ಪಣೆ ಬೇಕಾ.. ; ಶಾಸಕ ಜಮೀರ್​ ವಿರುದ್ಧ ಕೆಂಡಾಮಂಡಲರಾದ ಸಿಎಂ ಯಡಿಯೂರಪ್ಪ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 + 10 =
Remember me
