ಬೆಂಗಳೂರು:ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಅಭಿಮಾನಿಗಳಿಗೆ ಇಂದು ಬಿಗ್ ಶಾಕಿಂಗ್ ನ್ಯೂಸ್‌ ಸಿಕ್ಕಿದೆ. ಅಭಿಮಾನಿ ರೇಣುಕಾ ಸ್ವಾಮಿ ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಆಪ್ತೆ ಪವಿತ್ರಾ ಗೌಡ ಸಹ ಬಂಧಿತರಾಗಿದ್ದಾರೆ. ಸದ್ಯ ಅವರನ್ನು 6 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ.
ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ
ಮಂಗಳವಾರ ಸಂಜೆ 13 ಜನರನ್ನು ಕೋರ್ಟ್ ಮುಂದೆ ಹಾಜರು ಮಾಡಲಾಗಿದ್ದು ಈ ವೇಳೆ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು 6 ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರು ಇದ್ದಾರೆ. ಅಚ್ಚರಿ ಎಂದರೆ, ಇವರಿಗೆ ಠಾಣೆಗೆ ಹೊರಗಡೆಯಿಂದ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ಬಾಕ್ಸ್​ಗಳು ಪಾರ್ಸಲ್ ಬಂದಿವೆ!. ಪೊಲೀಸರು ದೊನ್ನೆ ಬಿರಿಯಾನಿ ತರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದೇ ವೇಳೆ ಠಾಣೆಗೆ ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಭೇಟಿ ನೀಡಿದ್ದಾರೆ.
ಪವಿತ್ರಾ ಗೌಡ ಆರೋಪಿ 1, ದರ್ಶನ್ ಆರೋಪಿ 2: ದರ್ಶನ್, ಪವಿತ್ರಾ ಗೌಡ ಅವರ ಜೊತೆ ಪವನ್, ವಿನಯ್, ಪ್ರದೋಷ್, ನಂದೀಶ, ದೀಪಕ್, ಲಕ್ಷ್ಮಣ್, ನಾಗರಾಜು, ಕಾರ್ತಿಕ್, ನಿಖಿಲ್, ಕೇಶವಮೂರ್ತಿ,ರಾಘವೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿದೆ. ಪವಿತ್ರಾ ಗೌಡ ಅವರು ಆರೋಪಿ 1, ದರ್ಶನ್ ಆರೋಪಿ 2 ಎಂದು ಹೇಳಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ:ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಪವಿತ್ರಾ ಪೋಸ್ಟ್​ಗಳಿಗೆಲ್ಲಾ ಕೆಟ್ಟದಾಗಿ ಮೆಸೇಜ್ ಮಾಡ್ತಿದ್ದ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿಕೊಂಡಿ ಬಂದಿದ್ದಾರೆ. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಹೇಳಿದ್ದಾರೆ ಎಂದು ವರದಿ ಆಗಿದೆ. ರೇಣುಕಾ ಸ್ವಾಮಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡುವ ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲೇ ಇದ್ದರು ಎಂದು ಹೇಳಲಾಗ್ತಿದೆ.
ವೈದ್ಯಕೀಯ ಪರೀಕ್ಷೆ ಹಿನ್ನೆಲೆ ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಗೆ ನಟ ದರ್ಶನ್ ಅಂಡ್​ ಗ್ಯಾಂಗ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + thirteen =
Remember me
