ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಬೆಳ್ಳಂಬೆಳಗ್ಗೆ 2 ಸಾವಿರ ಮನೆಗಳ ಮೇಲೆ ದಾಳಿ ನಡೆಸಿದ್ದು, 1500 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾನೂನುಸುವ್ಯವಸ್ಥೆ ನಿಟ್ಟಿನಲ್ಲಿ ವಿಶೇಷ ಅಭಿಯಾನ ಅಂಗವಾಗಿ ಬೆಂಗಳೂರಿನ ಪೊಲೀಸರು ಈ ದಾಳಿ ಕೈಗೊಂಡಿದ್ದಾರೆ.
ರಾಜಧಾನಿಯ ಎಲ್ಲ ಡಿಸಿಪಿಗಳ ನೇತೃತ್ವದಲ್ಲಿ ಮಹಾನಗರದಾದ್ಯಂತ ಬೆಳಗಿನ ಜಾವವೇ ಈ ದಾಳಿಯನ್ನು ನಡೆಸಿದ್ದು, ರೌಡಿ ಶೀಟರ್​ಗಳಿಗೆ ಸಂಬಂಧಿಸಿದ 2000 ಮನೆಗಳ ಮೇಲೆ ಏಕಾಏಕಿ ದಾಳಿ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ 1,500 ರೌಡಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…
ಈ ವೇಳೆ ಕಂಡುಬಂದಿರುವ ಮಾರಕ ಅಸ್ತ್ರಗಳು, ಕಾನೂನುಬಾಹಿರವಾಗಿ ಇಟ್ಟುಕೊಂಡಿರುವ ಆಯುಧಗಳು, ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾತ್ರವಲ್ಲದೆ ಒಂದಷ್ಟು ಭೂಮಿಗೆ ಸಂಬಂಧಿಸಿದ ದಾಖಲೆಪತ್ರಗಳು, ಮೊಬೈಲ್​ಫೋನ್​, ಸಿಮ್​ ಕಾರ್ಡ್​ ಮಾತ್ರವಲ್ಲದೆ ಕೆಲವು ವಾಹನಗಳನ್ನೂ ಪರಿಶೀಲನೆಗಾಗಿ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಿ ಅಂದ್ರು 281 ವೈದ್ಯರು!; ಯಾಕೆ, ಯಾರಲ್ಲಿ?
ಇವೆಲ್ಲದರ ಸಂಬಂಧ ವಿಸ್ತೃತ ವಿಚಾರಣೆ ನಡೆಯಲಿದ್ದು, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು ಕಂಡುಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ತಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಮಾತ್ರವಲ್ಲ ಬೆಂಗಳೂರು ಪೊಲೀಸರ ವ್ಯವಸ್ಥಿತವಾದ ಈ ಮಹಾ ಕಾರ್ಯಾಚರಣೆಗೆ ಮೆಚ್ಚುಗೆಯನ್ನೂ ಸೂಚಿಸಿದ್ದಾರೆ.
In an early morning special drive,@BlrCityPoliceteams led by the jurisdictional DCPs have conducted raids on the homes of rowdies and history-sheeters across the city. The police raided more than 2,000 houses and 1,500 rowdy-sheeters have been detained for questioning. (1/3)
— Pratap Reddy, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr)July 10, 2021

ವಧುವಿಗೆ ಹತ್ತನೇ ಕ್ಲಾಸು, ವರನಿಗೆ 30 ವರ್ಷ; ಬಾಲ್ಯವಿವಾಹ ಮಾಡಿಸಿದವರೆಲ್ಲರ ಬಂಧನ..

ಪ್ರವಾಸಿಗರೇ ಎಚ್ಚರ.. ಇಲ್ಲಿ ಮಾಸ್ಕ್​ ಧರಿಸದಿದ್ದರೆ 5 ಸಾವಿರ ರೂ. ದಂಡ ಇಲ್ಲವೇ 8 ದಿನ ಜೈಲುಶಿಕ್ಷೆ!

ಕೋವಿಡ್​ನಿಂದ ಬಚಾವಾದರೂ ನೆಮ್ಮದಿ ಇಲ್ಲ; ಕಂಡುಬಂದಿದೆ ಮತ್ತೊಂದು ರೋಗ, ಬೋನ್​ ಡೆತ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + four =
Remember me
