ದಾವಣಗೆರೆ:ಮಕ್ಕಳು ಮಹಿಳೆಯರು ಎಂಬುದನ್ನೂ ನೋಡದೆ ಪೊಲೀಸರು ಸಾರ್ವಜನಿಕರ ಮೇಲೆ ಲಾಠಿ ಬೀಸಿ ದೌರ್ಜನ್ಯ ತೋರಿದ್ದಾರೆ ಎನ್ನಲಾದ ಪ್ರಕರಣವೊಂದು ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆ ಬಳಿಯೇ ಈ ಘಟನೆ ನಡೆದಿದೆ.
ಇದನ್ನೂ ಓದಿ:ಸಂಬಂಧಿಯಿಂದಲೇ ಭೀಕರ ಕೃತ್ಯ: ಅಣ್ಣನ ಹೆಂಡತಿ ಹಾಗೂ ಮಗನನ್ನು ಹೊಡೆದು ಕಡಿದು ಕೊಂದ
ಜಗಳೂರಿನಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ದೊಡ್ಡ ಮಾರಮ್ಮನ‌ ಜಾತ್ರೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ನಿನ್ನೆ ರಾತ್ರಿ ಜಾತ್ರೆ ಸಂದರ್ಭ ಕೆಲವು ಕಿಡಿಗೇಡಿಗಳು ವಾಹನಗಳ ಗ್ಲಾಸ್ ಒಡೆದು ಹಾನಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತಕ್ಕೂ ಹೆಚ್ಚು ಯುವಕರನ್ನು ಠಾಣೆಗೆ ಕರೆದುಕೊಂಡು ಬಂದಿದ್ದರು.
ಇದನ್ನೂ ಓದಿ:ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!
ಅನಗತ್ಯವಾಗಿ ತಮ್ಮ ಮಕ್ಕಳನ್ನ ಕರೆತರಲಾಗಿದೆ ಎಂದು ಇಂದು ಅವರ ಸಂಬಂಧಿಕರು ಠಾಣೆಗೆ ಬಂದು ಪ್ರಶ್ನೆ ಮಾಡಿದ್ದರು. ಅಷ್ಟಕ್ಕೇ ಪೊಲೀಸರು ಅವರ ಮೇಲೆ ಲಾಠಿ ಬೀಸಿದ್ದಾರೆ ಎನ್ನಲಾಗಿದೆ. ಪರಿಣಾಮವಾಗಿ, ಮಕ್ಕಳು ಹಾಗೂ ಮಹಿಳೆಯರಿಗೂ ಏಟು ಬಿದ್ದಿವೆ. ಇದರಿಂದ ಜನರು ಜಗಳೂರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದಾರೆ.
ದರ್ಗಾದಲ್ಲಿನ ಶಿವಲಿಂಗ ಪೂಜೆ ಅವಕಾಶ ನಮಗೆ ಬೇಕು: ನಿರ್ಮಲಾ ಸೀತಾರಾಮನ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + nine =
Remember me
