ಬೆಂಗಳೂರುರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ (ಎನ್‌ಸಿಇಆರ್‌ಟಿ) ಪಠ್ಯಪುಸ್ತಕಗಳನ್ನು 2024-25ನೇ ಸಾಲಿನಿಂದ ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಪದವಿ ಪೂರ್ವ) ತಿಳಿಸಿದೆ.
ಗಣಕ ವಿಜ್ಞಾನ, ಗೃಹ ವಿಜ್ಞಾನ ಮತ್ತು ಮನಃಶಾಸ ವಿಷಯಗಳ ಪಠ್ಯಪುಸ್ತಕಗಳನ್ನು 2024- 25ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ಮತ್ತು 2025-26ನೇ ಸಾಲಿನಿಂದ ದ್ವಿತೀಯ ಪಿಯುಸಿ ತರಗತಿಗಳಿಗೆ ಅಳವಡಿಸಿಕೊಳ್ಳಲಾಗುತ್ತದೆ ಎಂದು ಇಲಾಖೆ ನಿರ್ದೇಶಕಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಜೆಇಇ ಮತ್ತು ಸಿಇಟಿ ಸೇರಿ ಇತರೆ ಪರೀಕ್ಷೆಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 2013ರಿಂದಲೇ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಹಂತಹಂತವಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ವಿಜ್ಞಾನ ವಿಷಯಗಳಿಗೆ ಒತ್ತು ನೀಡಲಾಗಿತ್ತು. ಇದೀಗ, ವಾಣಿಜ್ಯ, ಕಲಾವಿಭಾಗದ ವಿಷಯಗಳನ್ನು ಕೂಡ ಅಳವಡಿಸಿಕೊಳ್ಳಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
