ಬೆಂಗಳೂರು:ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆ ಮಳೆ ಆರ್ಭಟ ಮುಂದುವರಿದಿದ್ದು, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ತಿಮಕಾಪುರದಲ್ಲಿ ಗುರುವಾರ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾನೆ. ಕುರುಬಗೊಂಡ ನಿವಾಸಿ ದಯಾನಂದ ಹನುಮಂತಗೌಡ ಪುಟ್ಟನಗೌಡ್ರ (20) ಮೃತ. ತಿಮಕಾಪುರ ಬಳಿಯ ಹೊಲದಲ್ಲಿ ಬೇವಿನಮರದಡಿ ನಿಂತಿದ್ದಾಗ ಸಿಡಿಲು ಬಡಿದಿದೆ.
ಬೆಳಗಾವಿ ನಗರ ಸೇರಿ ಜಿಲ್ಲಾದ್ಯಂತ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಹಳೆ ಮರಗಳು, ಮನೆ ಗೋಡೆಗಳು ಬಿದ್ದಿವೆ. ಗೋಕಾಕ, ಮೂಡಲಗಿ, ಸವದತ್ತಿ, ಚಿಕ್ಕೋಡಿ, ನಿಪ್ಪಾಣಿ, ಅಥಣಿ, ಬೆಳಗಾವಿ, ಬೈಲಹೊಂಗಲ 20ಕ್ಕೂ ಅಧಿಕ ಮರಗಳು, 10ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಮೇ 19ರಿಂದ ಮಳೆ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ. ಬಾಗಲಕೋಟೆ, ಚಾಮರಾಜನಗರ, ಕೊಡಗು, ಶಿವಮೊಗ್ಗದ ಆಗುಂಬೆ ಸೇರಿ ವಿವಿಧ ಪ್ರದೇಶಗಳಲ್ಲಿ ಗುರುವಾರವೂ ಭರ್ಜರಿ ಮಳೆ ಸುರಿದಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಮೇ 19ರಿಂದ ಎರಡು ದಿನ ಹಾಗೂ ಮಂಡ್ಯ, ತುಮಕೂರು, ಉಡುಪಿಯಲ್ಲಿ ಮೇ 20ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಬಳ್ಳಾರಿ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗದಲ್ಲಿ ಮುಂದಿನ ಎರಡು ದಿನ, ಉಡುಪಿ, ಉತ್ತರ ಕನ್ನಡದಲ್ಲಿ ಮೇ 19ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.
ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಗದಗ, ರಾಯಚೂರು, ಕೋಲಾರ, ರಾಮನಗರ, ವಿಜಯನಗರ, ಬಾಗಲಕೋಟೆಯಲ್ಲಿ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ 2-4 ಡಿ. ಸೆ. ಇಳಿಮುಖವಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕ್ರಮವಾಗಿ 30 ಡಿ. ಸೆ ಮತ್ತು 22 ಡಿ. ಸೆ. ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
