ಬೆಂಗಳೂರು:ನಯನ ಸಭಾಂಗಣದಲ್ಲಿ ಇತ್ತೀಚೆಗೆ ಪ್ರದರ್ಶನಗೊಂಡ ನಟರಾಜ ನಾಟಕ ನೆರೆದ ರಂಗಾಸಕ್ತರ ಗಮನ ಸೆಳೆಯಿತು. ಮಾಡದ ಕೊಲೆಗಾಗಿ ಜೈಲು ಸೇರುವ ಕಥಾನಾಯಕನ ಬದುಕಿನ ವಿವಿಧ ಮಜಲುಗಳು, ಸಿದ್ಧಾಂತವನ್ನು ಮೈಗೂಡಿಸಿಕೊಂಡು ಬೆಳೆದ ವ್ಯಕ್ತಿ ರಾಜಕೀಯ ಪ್ರವೇಶಿಸಿದ ನಂತರ ಅನಿವಾರ್ಯವಾಗಿ ವ್ಯವಸ್ಥೆಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವೈರುಧ್ಯವನ್ನು ಎಳೆಎಳೆಯಾಗಿ ಕಟ್ಟಿಕೊಟ್ಟಿದೆ ನಾಟಕ ನಟರಾಜ.
ಪಂಪ ಸಾಂಸ್ಕೃತಿಕ ಮತ್ತು ಸಾಮಾಜಿಕ ತಂಡದ ಕಲಾವಿದರು ಪ್ರಸ್ತುತಪಡಿಸಿದ ನಾಟಕದ ರಚನೆ ಮತ್ತು ನಿರ್ದೇಶನ ಆರ್.ವೆಂಕಟರಾಜು, ಸಂಗೀತ ಗಜಾನನ ನಾಯಕ್, ಮೇಕಪ್ ನ್ಯಾಷನಲ್ ದೇವು ನಿರ್ವಹಿಸಿದ್ದರು.
ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಮತ್ತಿತರರು ಪಾಲ್ಗೊಂಡಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × three =
Remember me
