ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಚುರುಕುಗೊಳಿಸಲಾಗಿದ್ದು, ಮೀಸಲಾತಿ ಕರಡು ಅಧಿಸೂಚನೆಗೆ ಆಕ್ಷೇಪಣೆಗಳನ್ನು ಆಲಿಸಿದ ನಂತರ ಮುಂದಿನ ಎರಡು ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್ ಹೇಳಿದೆ.
ಅವಧಿ ಮುಗಿದ ಜಿ.ಪಂ. ತಾ.ಪಂ.ಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆೆ ನಿರ್ದೇಶನ ನೀಡಬೇಕು ಹಾಗೂ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರ ಮರುವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಾಯಮೂರ್ತಿ ಪ್ರಸನ್ನ ಬಿ.ವರಾಲೆ ಹಾಗೂ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಈ ವೇಳೆ ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಜರಾಗಿ, ಜಿ.ಪಂ. ತಾ.ಪಂ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ನಿರ್ಧರಿಸುವ ಹಾಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ. ಕೊಡಗು ಜಿಲ್ಲೆೆ ಹೊರತುಪಡಿಸಿ ಉಳಿದ ೩೦ ಜಿಲ್ಲೆೆಗಳ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆಯನ್ನು ಡಿ.೧೯ (ಮಂಗಳವಾರ) ಸಂಜೆ ಪ್ರಕಟಿಸಲಾಗುವುದು. ಮುಂದಿನ ಏಳು ದಿನಗಳಲ್ಲಿ ಕೊಡಗು ಜಿಲ್ಲೆೆಯ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆ ಪ್ರಕಟಿಸಲಾಗುವುದು. ಇದಾದ ಏಳು ದಿನಗಳಲ್ಲಿ ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಲಾಗುವುದು. ಮೀಸಲಾತಿ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ೧೦ ದಿನ ಕಾಲಾವಕಾಶ ನೀಡಲಾಗುವುದು. ಅದಾದ ಎರಡು ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶನ:ಅಡ್ವೋಕೇಟ್ ಜನರಲ್ ಅವರ ಮೌಖಿಕ ಹೇಳಿಕೆಯನ್ನು ನ್ಯಾಯಾಲಯಕ್ಕೆೆ ನೀಡಿದ ಭರವಸೆಯನ್ನಾಗಿ ಪರಿಗಣಿಸಿದ ನ್ಯಾಯಪೀಠ, ಈ ಸಂಬಂಧ ಲಿಖಿತ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆೆ ನಿರ್ದೇಶನ ನೀಡಿತು. ಸಾಂವಿಧಾನಿಕ ಹುದ್ದೆೆಯಲ್ಲಿರುವ ಅಡ್ವೋಕೇಟ್ ಜನರಲ್ ಅವರ ಹೇಳಿಕೆ ಮೇಲೆ ಭರವಸೆ ಇಡಬೇಕಾಗುತ್ತದೆ. ಅವರು ನ್ಯಾಯಾಲಯಕ್ಕೆೆ ನೀಡಿರುವ ಭರವಸೆಯಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಇತರ ಸಂಸ್ಥೆೆ-ಪ್ರಾಧಿಕಾರಿಗಳು ನಡೆದುಕೊಳ್ಳಲಿ. ಅಡ್ವೋಕೇಟ್ ಜನರಲ್ ಅವರ ಭರವಸೆ ಕಾರ್ಯಗತಗೊಳ್ಳದಿದ್ದರೆ ಅರ್ಜಿದಾರರು (ರಾಜ್ಯ ಚುನಾವಣಾ ಆಯೋಗ) ಅಗತ್ಯ ಕ್ರಮಕ್ಕೆೆ ಮತ್ತೇ ನ್ಯಾಯಾಲಯದ ಮುಂದೆ ಬರಬಹುದು. ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿಗೆ ಸಂಬಂಧಿಸಿದ ವಿಷಯಗಳು ಬಿಟ್ಟು ಉಳಿದ ವಿಷಯಗಳು ಹಾಗೆಯೇ ಮುಕ್ತವಾಗಿರಲಿವೆ. ಅವುಗಳ ಬಗ್ಗೆೆ ಅಗತ್ಯ ಸಂದರ್ಭದಲ್ಲಿ ನ್ಯಾಯಾಲಯ ಸೂಕ್ತ ನಿರ್ದೇಶನ ನೀಡಲಿದೆ ಎಂದು ಹೇಳಿದ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಪಡಿಸಿತು. ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಮಂಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 7 =
Remember me
