ಬೆಂಗಳೂರು:ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಬಹು ವರ್ಷಗಳ ಬೇಡಿಕೆಯಾಗಿರುವ ಸ್ಟೈಪೆಂಡ್‌ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ.
ಕರೋನಾ ಸೋಂಕಿತನ ಸಂಪರ್ಕದ ಹಿನ್ನೆಲೆಯಲ್ಲಿ ಸ್ವಯಂ ಗೃಹ ದಿಗ್ಭಂಧನದಲ್ಲಿರುವ ಸಚಿವರು ಇಲಾಖೆ ಪ್ರಮುಖರ ಜತೆ ನಡೆಸಿದ ವಿಡಿಯೋ ಸಮಾಲೋಚನೆ ಸಂದರ್ಭದಲ್ಲಿ ಈ ಕುರಿತು ಸೂಚನೆ ನೀಡಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಪಿಜಿ ವಿದ್ಯಾರ್ಥಿಗಳು ಬಹು ದಿನಗಳ ಈ ಬೇಡಿಕೆಯನ್ನು ಮಾನ್ಯ ಮಾಡುವಂತೆ ಆಗ್ರಹಿಸಿದ್ದರು.
ವಿಡಿಯೋ ಸಂವಾದ ಸಂದರ್ಭದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕುಲಪತಿ ಡಾ. ಸಚ್ಚಿದಾನಂದ ಮತ್ತು ಡಿಎಂಇ ಡಾ. ಗಿರೀಶ್ ಅವರಿಗೆ ಸ್ಟೈಪೆಂಡ್ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇದನ್ನೂ ಓದಿ:ದ.ಕ. ಮತ್ತೊಂದು ಕೋವಿಡ್ ಪಾಸಿಟಿವ್, ಬೋಳೂರಿನ ವ್ಯಕ್ತಿಗೆ ಸೋಂಕು
ಪಿಜಿ ವಿದ್ಯಾರ್ಥಿಗಳಿಗೆ ಬೇರೆ ರಾಜ್ಯಗಳಲ್ಲಿ ನೀಡುತ್ತಿರುವ ಭತ್ಯೆ, ರಾಜ್ಯದಲ್ಲಿ ಯಾವ ವರ್ಷ ಎಷ್ಟು ಹೆಚ್ಚಳ ಮಾಡಲಾಗಿತ್ತು ಎಂಬ ವಿವರಗಳನ್ನು ಸಚಿವರು ಸಂವಾದ ಸಂದರ್ಭದಲ್ಲಿ ಪಡೆದರು ಎಂದು ಗೊತ್ತಾಗಿದೆ.
ಹೆಚ್ಚಳದ ಪ್ರಮಾಣ ಮತ್ತು ವಾರ್ಷಿಕ ಬೇಕಾದ ಅನುದಾನದ ಬಗ್ಗೆಯೂ ಮಾಹಿತಿ ಪಡೆದ ಸಚಿವರು, ಅಗತ್ಯ ಸೂಚನೆಗಳ ಸಹಿತ ಪರಿಷ್ಕರಣೆಗೆ ಕ್ರಮ ಜರುಗಿಸಲು ಸೂಚಿಸಿದರು ಎಂದು ಸಚಿವಾಲಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಡಿಸಿ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್​ ಪೇದೆ; ಇವರಿಗೊಂದು ಸಮಸ್ಯೆ ಇತ್ತು ಎಂದ್ರು ಕಮಿಷನರ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + nineteen =
Remember me
