ಬೆಂಗಳೂರು:ಕರೊನಾ ಸಂಕಷ್ಟದ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ವೈದ್ಯರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಮಾಸಿಕ ಸಂಚಿತ ವೇತನವನ್ನು 15 ಸಾವಿರ ರೂ. ಹೆಚ್ಚಳ ಮಾಡಿದೆ. ಆದರೆ ಸಕ್ರಮಕ್ಕೆ ಅನ್ವಯವಿಲ್ಲ ಎಂಬ ಷರತ್ತು ವಿಧಿಸಿದೆ.
ಗುತ್ತಿಗೆ ವೈದ್ಯರು ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಿದ್ದರು. ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರಾಜೀನಾಮೆ ಸಹ ಸಲ್ಲಿಸಿದ್ದರು. ವೈದ್ಯರ ಕೊರತೆ ಇರುವುದರಿಂದ ತಕ್ಷಣ ಎಚ್ಚೆತ್ತ ಸರ್ಕಾರ ವೇತನವನ್​ಉ 45,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಳ ಮಾಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗ್ರಾಮೀಣ ಭಾಗ, ತಾಲೂಕು ಕೇಂದ್ರ, ಜಿಲ್ಲಾ ಕೇಂದ್ರ, ನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 504 ಜನ ಎಂಬಿಬಿಎಸ್ ಗುತ್ತಿಗೆ ವೈದ್ಯರಿದ್ದಾರೆ. ಕೆಪಿಎಸ್​ಸಿ ಮೂಲಕ ನೇಮಕ ಮಾಡಿಕೊಳ್ಳುವ ತನಕ ಗುತ್ತಿಗೆ ವೈದ್ಯರ ನೇಮಕಕ್ಕೆ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿತ್ತು.
ಕೊವಿಡ್​-19ಗೆ ಇನ್ನೊಂದು ಹೆಸರಿಟ್ಟ ಯುಎಸ್​ ಅಧ್ಯಕ್ಷ ಟ್ರಂಪ್​; ಮತ್ತೆ ಚೀನಾ ವಿರುದ್ಧ ಕುಹಕದ ಮಾತುಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 18 =
Remember me
