ಕೆಂಗೇರಿ:ಮೊಮ್ಮಗಳನ್ನು ಊರಿಗೆ ಕರೆದುಕೊಂಡು ಹೋಗಲು ಅಳಿಯನ ಮನೆಗೆ ಬಂದಿದ್ದ ಅತ್ತೆ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಅತ್ತೆಗೆ ಅಳಿಯನೇ ಚಾಕುವಿನಿಂದ ಚುಚ್ಚಿ ಕೊಂದಿರುವ ಘಟನೆ ನಾಗದೇವನಹಳ್ಳಿಯ ಬೃಂದಾವನ ಲೇಔಟ್​​ನಲ್ಲಿ ನಡೆದಿದೆ.
ಏಳಲ್ ಅರಸಿ (48) ಮೃತ ದುರ್ದೈವಿ. ಅಳಿಯ ದಿವಾಕರ್ ಕೊಲೆ‌ ಮಾಡಿರುವ ಆರೋಪಿಯಾಗಿದ್ದಾನೆ. ಕೆಂಗೇರಿ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ವೈದ್ಯರ ಎಡವಟ್ಟು; ಎಡಗಾಲು ನೋವಿದ್ದ ಮಹಿಳೆಯ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ರು!
ಮೃತ ಏಳಲ್ ಅರಸಿಗೆ ಐದು ಜನ ಮಕ್ಕಳಿದ್ದಾರೆ. ಮೊದಲನೇ ಮಗಳನ್ನ ದಿವಾಕರ್​ಗೆ ಮದುವೆ ಮಾಡಿಕೊಟ್ಟಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದ ಈ ಜೋಡಿಗೆ ಹೆಣ್ಣು ಮಗು ಇದೆ. ಕಾರಣಾಂತರಗಳಿಂದ ದಿವಾಕರ್ ಮತ್ತು ಪತ್ನಿ ಮದ್ಯೆ ಜಗಳವಾಗ್ತಿತ್ತು. ಹೀಗಾಗಿ ದಿವಾಕರ್​ನಿಂದ ದೂರವಾದ ಮಹಿಳೆ, ತಾಯಿ ಜೊತೆಗೆ ಕೋಲಾರದ ಕೆ.ಜಿ.ಎಫ್​​ನಲ್ಲಿ ವಾಸವಾಗಿದ್ದಾರೆ.
ಕೆಲವು ದಿನಗಳ ಹಿಂದೆ ದಿವಾಕರ್ ತಮ್ಮ ಮಗಳನ್ನ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು. ಮೊಮ್ಮಗಳಿಗೆ ಎಕ್ಸಾಂ ಇದೆ ಎಂದು ಏಳಲ್ ಅರಸಿ ತಮ್ಮ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದರು. ಈ ವೇಳೆ ಅತ್ತೆ, ಅಳಿಯನ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಅಳಿಯ ದಿವಾಕರ್​ ಚಾಕುವಿನಿಂದ ಅತ್ತೆಗೆ ಇರಿದಿದ್ದಾನೆ. ಗಂಭೀರ ಗಾಯವಾಗಿ ಏಳಲ್ ಅರಸಿ ಸಾವನ್ನಪ್ಪಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ! ಹೇಗೆ ಅಂತಾ ಗೊತ್ತಾದ್ರೆ ನಿಮ್ಮ ಹುಬ್ಬೇರೋದು ಖಚಿತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − 10 =
Remember me
