ಬೆಂಗಳೂರು:ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಹೋರಾಟವನ್ನು ಹತ್ತಿಕ್ಕುವ ಶಕ್ತಿಯಿಲ್ಲ. ಯಾವುದೇ ಬೆದರಿಕೆ, ಅನುಮತಿ ನಿರಾಕರಣೆಯಿಂದ ನಮ್ಮ ಹೋರಾಟ ತಡೆಯಲು ಸಾಧ್ಯವಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದರು.
ಅರಮನೆ ಮೈದಾನದ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಸೋಮವಾರ ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ಮೇಕೆದಾಟು ಪಾದಯಾತ್ರೆ ಮಾಡಿದ್ದಾರಲ್ಲವೇ? ಸದನದಲ್ಲಿ ಮುಡಾ ಬಗ್ಗೆ ಯಾಕೆ ಚರ್ಚೆ ಮಾಡಿಲ್ಲ. ಮುಖ್ಯಮಂತ್ರಿಗಳು ಎರಡು ಗಂಟೆ ಪತ್ರಿಕಾಗೋಷ್ಠಿ ನಡೆಸಿ ಉತ್ತರ ಕೊಡುತ್ತಾರೆ. ಆದರೆ ಸದನದಲ್ಲಿ ವಿಪಕ್ಷಗಳು ಎತ್ತಿದ ಪ್ರಶ್ನೆಗಳಿಗೆ ಸದನದಲ್ಲೇ ಉತ್ತರ ಕೊಟ್ಟಿಲ್ಲ ಎಂದು ಟೀಕಿಸಿದರು.
ನಮ್ಮದು ಕಾಟಾಚಾರದ ಹೋರಾಟವಲ್ಲ; ಮಂಡಲ, ಜಿಲ್ಲೆ, ರಾಜ್ಯ ಮಟ್ಟದ ಹೋರಾಟ ನಡೆದಿದೆ. ನೆರೆಪೀಡಿತ ಪ್ರದೇಶಗಳಿಗೆ 6 ತಂಡಗಳು ಇದೇ ಮಂಗಳವಾರದಿಂದ ಪ್ರವಾಸ ಮಾಡಲಿವೆ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು.
ಹಗರಣ ನಡೆದಿರುವುದನ್ನು ಕಾಂಗ್ರೆಸ್ ಸರ್ಕಾರ ಒಪ್ಪಿಕೊಂಡಿದೆ. ಆದರೆ ಮುಡಾ ಹಗರಣದ ಕುರಿತು ಚರ್ಚಿಸಲು ಧೈರ್ಯ ತೋರದ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಸದನವನ್ನು ಮೊಟಕುಗೊಳಿಸಿ ಪಲಾಯನವಾದ ಮಾಡಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ- ಜೆಡಿಎಸ್ ಪಕ್ಷಗಳು ಮೈಸೂರಿಗೆ ಪಾದಯಾತ್ರೆ ನಡೆಸಲಿವೆ. ಇದಕ್ಕೆ ಪೂರ್ವಭಾವಿಯಾಗಿ ಇವತ್ತು ಪ್ರಮುಖರ ಸಭೆ ನಡೆಸಿದ್ದೇವೆ. ಭ್ರಷ್ಟ ಕಾಂಗ್ರೆಸ್ ಸರಕಾರದ ಹಗರಣಗಳ ವಿರುದ್ಧ ನಡೆಸುವ ಪಾದಯಾತ್ರೆ, ಹೋರಾಟದ ಕುರಿತು ಚರ್ಚಿಸಲಾಗಿದೆ ಎಂದರು.
ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿದೆ. ಆ. 3ರಂದು ಬೆಳಿಗ್ಗೆ 8.30ಕ್ಕೆ ಪಾದಯಾತ್ರೆಯ ಉದ್ಘಾಟನೆ ನೆರವೇರಲಿದೆ. ರಾಜ್ಯದ ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜೆಡಿಎಸ್ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಎರಡೂ ಪಕ್ಷಗಳ ಹಿರಿಯ ಮುಖಂಡರು ಭಾಗವಹಿಸುತ್ತಾರೆ ಎಂದು ತಿಳಿಸಿದರು.
ಕೆಂಗೇರಿ ಕೆಂಪಮ್ಮ ದೇವಸ್ಥಾನ, ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಆ.10ರ ಶನಿವಾರ ಪಾದಯಾತ್ರೆ ಮುಕ್ತಾಯವಾಗಲಿದೆ. ಸಮಾರೋಪ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರೂ ಭಾಗವಹಿಸುತ್ತಾರೆ ಎಂದು ವಿವರ ನೀಡಿದರು. ಪ್ರತಿನಿತ್ಯ ಕನಿಷ್ಠ 20 ಕಿಮೀನಷ್ಟು ಪಾದಯಾತ್ರೆ ನಡೆಸಲಿದ್ದೇವೆ ಎಂದು ವಿವರಿಸಿದರು.
ಎಲ್ಲ 224 ಕ್ಷೇತ್ರಗಳ ಕಾರ್ಯಕರ್ತರು ಭಾಗವಹಿಸುತ್ತಾರೆ. ಮೊದಲ ದಿನ ಯಶವಂತಪುರ, ದಾಸರಹಳ್ಳಿ, ಆರ್‍ಆರ್.ನಗರ, ವಿಜಯನಗರ, ಶಿವಾಜಿನಗರ, ದೊಡ್ಡಬಳ್ಳಾಪುರ, ಮಾಗಡಿ, ಪದ್ಮನಾಭನಗರ, ರಾಜಾಜಿನಗರ ವಿಧಾನಸಭಾ ಕ್ಷೇತ್ರಗಳ ಜನಪ್ರತಿನಿಧಿಗಳು, ಕಾರ್ಯಕರ್ತರು ಬರಲಿದ್ದಾರೆ.
ಕೋಲಾರ- ಕಲಬುರ್ಗಿಯ ಕಾರ್ಯಕರ್ತರೂ ಭಾಗವಹಿಸುವರು. ಯುವಮೋರ್ಚಾದವರು ತಮ್ಮನ್ನು ಜೋಡಿಸಿಕೊಳ್ಳುತ್ತಾರೆ. ಪಾದಯಾತ್ರೆಯ ಯಶಸ್ಸಿಗೆ ತಂಡಗಳನ್ನು ರಚಿಸಲಾಗಿದೆ. ಮೊದಲ ದಿನ ಶಾಸಕ ಮುನಿರಾಜು ನೇತೃತ್ವ ವಹಿಸುತ್ತಾರೆ. ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಜೊತೆಗಿರುತ್ತಾರೆ ಎಂದು ವಿಜಯೇಂದ್ರ ವಿವರಿಸಿದರು.
ರಾಜ್ಯದ ಪ್ರತಿ ಜಿಲ್ಲೆಯಿಂದ ಕನಿಷ್ಠ 200 ಜನರು ಬರಲಿದ್ದು ಎಲ್ಲ ದಿನಗಳಲ್ಲಿ ಇರುತ್ತಾರೆ. ವಸತಿ ವ್ಯವಸ್ಥೆ ಸೇರಿ ಎಲ್ಲವನ್ನೂ ಯೋಜಿಸಲಾಗಿದೆ. ಜೆಡಿಎಸ್‍ನವರೂ ಪಾಲ್ಗೊಳ್ಳಲಿದ್ದು, ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚಿಸುತ್ತೇವೆ ಎಂದು ತಿಳಿಸಿದರು.
ರಾಜ್ಯದ್ದು ಭ್ರಷ್ಟ ಕಾಂಗ್ರೆಸ್ ಪಕ್ಷದ ಹಗರಣಗಳ ಸರ್ಕಾರ ಇದರ ನೇತೃತ್ವವನ್ನು ಸಿದ್ದರಾಮಯ್ಯನವರು ವಹಿಸಿದ್ದಾರೆ. ಎಲ್ಲ ಹಗರಣಗಳಲ್ಲೂ ಅಹಿಂದ ಸಮುದಾಯಕ್ಕೇ ಅನ್ಯಾಯ ಮಾಡಿದ್ದಾರೆ. ಇದರ ವಿರುದ್ಧ ‘ಮೈಸೂರು ಚಲೋ’ ನಡೆಸಲಿದ್ದೇವೆ. ಹಣವನ್ನು ವಾಪಸ್ ಪಡೆದು ಅದೇ ಸಮುದಾಯಗಳಿಗೆ ನೀಡುವ ಬಗ್ಗೆ ಒತ್ತಾಯಿಸುತ್ತೇವೆ.
ಮುಡಾದಲ್ಲಿ 3 ರಿಂದ 4 ಸಾವಿರ ಕೋಟಿಯ ಹಗರಣ ನಡೆದುದನ್ನು ಮುಡಾ ಅಧ್ಯಕ್ಷ ಮರಿಗೌಡರೂ ಒಪ್ಪಿಕೊಂಡಿದ್ದಾರೆ. ಬಡವರು, ಪರಿಶಿಷ್ಟರಿಗೆ ನ್ಯಾಯ ದೊರಕಿಸಲು ಈ ಹೋರಾಟ ನಡೆಯಲಿದೆ ಎಂದು ಬಿ.ವೈ.ವಿಜಯೇಂದ್ರ ಪುನರುಚ್ಚರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
