ಮೈಸೂರು:ಸುಪ್ರೀಂಕೋರ್ಟ್​ ತೀರ್ಪು ಇರುವುದರಿಂದ ಸೋತವರಿಗೆ ಮಂತ್ರಿಗಿರಿ ನೀಡುವಾಗ ಪರಿಶೀಲನೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಡಾ. ಸುಧಾಕರ್​ ಹೇಳಿದ್ದಾರೆ.
ಸುತ್ತೂರಿನಲ್ಲಿ ಅವರು ಮಾತನಾಡಿದರು. ಸುಧಾರಕ್​ ಅವರ ಈ ಹೇಳಿಕೆಯನ್ನು ಅನ್ಯ ಪಕ್ಷ ತ್ಯಜಿಸಿ ಬಿಜೆಪಿ ಸೇರಿದವರಲ್ಲಿ ಒಗ್ಗಟ್ಟು ಇಲ್ಲ ಎಂಬುದನ್ನು ತೋರುತ್ತದೆ ಎಂದು ಸಾರ್ವಜನಿಕರು ಗ್ರಹಿಸಿದ್ದಾರೆ.
ನಮಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಪಕ್ಷದ ನಿಲುವಿಗೆ ಬದ್ಧರಾಗಿರುತ್ತೇವೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್​ ಹಾಗೂ ಜೆಡಿಎಸ್​ ತೊರೆದು ಬಿಜೆಪಿಗೆ ಸೇರಿದ 17 ಮಂದಿ ಶಾಸಕರಲ್ಲಿ ಒಗ್ಗಟ್ಟು ಮೊದಲಿನಂತೆ ಇಲ್ಲ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಲು ನಿರಾಕರಿಸಿದ್ದಾರೆ. ರಾಜೀನಾಮೆಗೂ ಮುನ್ನ ಯಡಿಯೂರಪ್ಪ ಅವರು ನೀಡಿದ ಮಾತನ್ನು ಉಳಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ವಿಶ್ವನಾಥ್​ ನೀಡಿದ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − fifteen =
Remember me
