ಬೆಂಗಳೂರು : ಸುಪ್ರೀಂಕೋರ್ಟ್ ನಿರ್ದೇಶನದ ಹೊರತಾಗಿಯೂ ಗೋಕರ್ಣದ ಶ್ರೀಮಹಾಬಲೇಶ್ವರ ದೇವಸ್ಥಾನದ ಆಡಳಿತ ನಿರ್ವಹಣೆಗೆ ರಚಿಸಿದ್ದ ಮೇಲ್ವಿಚಾರಣಾ ಸಮಿತಿಗೆ ನಾಮ ನಿರ್ದೇಶನ ಮಾಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆಅಲ್ಲದೆ, ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿ ಆದೇಶವನ್ನು ಪಡೆದು ಮೇಲ್ವಿಚಾರಣಾ ಸಮಿತಿಯ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಸರ್ಕಾರಕ್ಕೆ ಸಂಪೂರ್ಣ ಅಧಿಕಾರವಿರಲಿದೆ ಎಂದು ಪೀಠ ಸ್ಪಷ್ಟ ಪಡಿಸಿದೆ.
ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ದೇವಸ್ಥಾನದ ಸಮಿತಿಗೆ ಉಪಾಧಿವಂತರು ಮತ್ತು ಇಬ್ಬರು ವಿದ್ಯಾಂಸದರನ್ನು ಬದಲಾಯಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಸಿ.ರಾಮಚಂದ್ರಾಪುರ ಮಠ ಮತ್ತು ಮಠದ ಪೀಠಾಧಿಪತಿಗಳಾದ ರಾಘವೇಶ್ವರ ಭಾರತೀ ಸ್ವಾಮಿಗಳು ಹಾಗೂ ನಾಮನಿರ್ದೇಶನದಿಂದ ವಜಾಗೊಂಡಿದ್ದ ಸದಸ್ಯರು ಅರ್ಜಿ ಸಲ್ಲಿಸಿದ್ದರು.ಈ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ವಿಚಾರಣೆ ನಡೆಸಿತು.
ಈ ವೇಳೆ ಪೀಠವು, ದೇವಾಲಯದ ಸಮಿತಿಗೆ ನಾಮ ನಿರ್ದೇಶನ ಮಾಡುವುದಕ್ಕೆ ಸರ್ಕಾರಕ್ಕೆ ಅಧಿಕಾರವಿದ್ದರೂ, ಮೇಲ್ವಿಚಾರಣಾ ಸಮಿತಿ ರಚನೆಗೆ ಸಂಬಂಧ ಸುಪ್ರೀಂಕೋರ್ಟ್ ಆದೇಶಕ್ಕೆ ಒಳಪಟ್ಟಿರುತ್ತದೆ. ಅಲ್ಲದೆ, ಈ ಹಿಂದೆ ಇದ್ದ ಸಮಿತಿಯ ಸದಸ್ಯರ ಬದಲಾವಣೆ ಮಾಡುವ ಮೊದಲು ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿ ಅನುಮತಿ ಪಡೆಯಬೇಕಾಗಿತ್ತು. ಆದರೆ ಈ ಕಾರ್ಯ ಮಾಡದೇ ಸರ್ಕಾರ ಇತರೆ ಸದಸ್ಯರನ್ನು ನಾಮ ನಿರ್ದೇಶನ ಮಾಡಿದೆ. ಇದಕ್ಕೆ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿದೆ.
ಅರ್ಜಿದಾರರೇ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದಿತ್ತು ಎಂಬ ರಾಜ್ಯ ಸರ್ಕಾರದ ವಾದ ತಳ್ಳಿಹಾಕಿದ ನ್ಯಾಯಪೀಠ, ದೋಷಪೂರಿತ ಆದೇಶವನ್ನು ಅರ್ಜಿದಾರರು ಜಾರಿ ಮಾಡಿಲ್ಲ. ಇದು ಸರ್ಕಾರದಿಂದ ಆಗಿರುವುದಾಗಿದ್ದು, ಸರ್ಕಾರವೇ ಅನುಮತಿ ಪಡೆಯಬೇಕಾಗಿತ್ತು. ಬದಲಿಗೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಆದೇಶವನ್ನು ಮೀರಲು ಪ್ರಯತ್ನ ಮಾಡಿದೆ ಎಂದು ತಿಳಿಸಿದೆ.
ಜತೆಗೆ, ಸಾಂವಿಧಾನಿಕವಾಗಿ ನ್ಯಾಯಾಲಯಗಳು ಎಲ್ಲ ಸಮಯದಲ್ಲಿಯೂ ಕಾರ್ಯನಿರ್ವಹಿಸುತ್ತವೆ. ಸರ್ಕಾರ ಬದಲಾವಣೆಯಾಗಿದೆ ಎಂಬ ಕಾರಣದಿಂದ ಸುಪ್ರೀಂಕೋರ್ಟ್‌ನ ಆದೇಶ ಉಲ್ಲಂಘಿಸುವ ಪ್ರಯತ್ನ ಮಾಡಲಾಗಿದೆ.ಹಿಂದಿನ ಸರ್ಕಾರ ಮಾಡಿದ ನಾಮ ನಿರ್ದೇಶನವನ್ನು ಒಂದು ಆದೇಶದ ಮೂಲಕ ಸಂಪೂರ್ಣವಾಗಿ ರದ್ದುಪಡಿಸುವ ಅಧಿಕಾರ ಹೊಸ ಸರ್ಕಾರಕ್ಕೆ ಇರುವುದಿಲ್ಲ. ಆದರೆ, ಹಿಂದಿನ ಸರ್ಕಾರ ಮಾಡಿರುವ ನಿರ್ಧಾರಗಳು ಕಾನೂನಿಗೆ ವಿರುದ್ಧವಾಗಿವೆ ಎಂಬುದು ಗೊತ್ತಾದಲ್ಲಿ ಮಾತ್ರ ಬದಲಾವಣೆ ಮಾಡಬಹುದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ ಏನು ?ರಾಮಚಂದ್ರಪುರದ ಮಠದ ಅಧೀನದಲ್ಲಿದ್ದ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ರಾಜ್ಯ ಮುಜರಾಯಿ ಇಲಾಖೆಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿ ಕಾಯ್ದೆ ಅಡಿಯ ವ್ಯಾಪ್ತಿಗೆ ತರುವ ಸಂಬಂಧ ರಾಜ್ಯ ಸರ್ಕಾರ 2003ರ ಏ. 30ರಂದು ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡುವಂತೆ ಅರ್ಜಿಯಲ್ಲಿ ಕೋರಿದ್ದರು.ಅಲ್ಲದೆ, ಸರ್ಕಾರದ ಕ್ರಮ ಪ್ರಶ್ನಿಸಿರುವ ಸಂಬಂಧ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ವಿಚಾರಣಾ ಹಂತದಲ್ಲಿದ್ದು, ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ತಿಳಿಸಿದೆ. ಅದರಂತೆ ರಾಜ್ಯ ಸರ್ಕಾರ 2021ರ ಮೇ 4ರಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣ ಅಧ್ಯಕ್ಷತೆಯಲ್ಲಿ 8 ಮಂದಿಯ ಮೇಲ್ವಿಚಾರಣಾ ಸಮಿತಿ ರಚನೆ ಮಾಡಲಾಗಿತ್ತು.
ಈ ನಡುವೆ 2023ರ ರಾಜ್ಯ ವಿಧಾನಸಭೆ ಚುನಾವಣೆ ನಂತರ ಸರ್ಕಾರ ಎಲ್ಲ ನಾಮ ನಿರ್ದೇಶನಗಳನ್ನು 2023ರ ಮೇ 22ರಂದು ರದ್ದುಪಡಿಸಿ ಸರ್ಕಾರ ಆದೇಶಿಸಿತ್ತು. ಈ ಆದೇಶದನ್ವಯ ಗೋಕರ್ಣ ದೇವಾಲಯದ ಕೆಲ ಹೊಸ ಸದಸ್ಯರೊಂದಿಗೆ ಸಮಿತಿಯನ್ನು ಪುನಃ ರಚನೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಮಠ ಹೈಕೋರ್ಟ್ ಮೆಟ್ಟಿಲೇರಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
